ಹೃದಯವಂತಳಾದ ಕಮಲವ್ವ: ಬ್ರೈನ್ ಡೆಡ್ ಆಗಿದ್ದ ಮಹಿಳೆಯ ಅಂಗಾಂಗ ದಾನ

Team Udayavani, Jul 14, 2022, 4:21 PM IST

ಹೃದಯವಂತಳಾದ ಕಮಲವ್ವ: ಬ್ರೈನ್ ಡೆಡ್ ಆಗಿದ್ದ ಮಹಿಳೆಯ ಅಂಗಾಂಗ ದಾನ!

ಧಾರವಾಡ: ಬ್ರೈನ್ ಡೆಡ್‌ ಗೆ ಒಳಗಾಗಿದ್ದ ಇಲ್ಲಿಯ ಕೃಷಿ ವಿಶ್ವವಿದ್ಯಾಲಯದ ಸಿಬ್ಬಂದಿ ಎತ್ತಿನಗುಡ್ಡದ ನಿವಾಸಿ ಕಮಲವ್ವ ಕೆಲಗೇರಿ (48) ಎಂಬ ಮಹಿಳೆಯು ಹೃದಯ ಕವಾಟವು ಸೇರಿದಂತೆ ಅಂಗಾಂಗಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾರೆ.

ಜು.12 ರಂದು ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿದ್ದ ಕಮಲವ್ವ ಅವರಿಗೆ ಉನ್ನತ ಚಿಕಿತ್ಸೆಗಾಗಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ವೈದ್ಯರ ನಿರಂತರ ಚಿಕಿತ್ಸೆ ಫಲಕಾರಿಯಾಗದ ಕಾರಣ ಜು.13 ರಂದು ಮೆದುಳು ನಿಷ್ಕಿಯಗೊಂಡಿದೆ ಎಂಬುದಾಗಿ ತಜ್ಞ ವೈದ್ಯರು ಧೃಡೀಕರಿಸಿದ್ದರು.

ಈ ದು:ಖ ಸಮಯದಲ್ಲಿ ಧೈರ್ಯ ತೆಗೆದುಕೊಂಡ ಕುಟುಂಬ ವರ್ಗದವರು ಕಮಲವ್ವ ಅವರ ದೇಹದ ಅಂಗಾಂಗಗಳನ್ನು ದಾನ ಮಾಡಲು ಸಮ್ಮತಿಸಿದ್ದಾರೆ. ಈ ಹಿನ್ನಲೆಯಲ್ಲಿ ಗುರುವಾರ (ಜು.14 ರಂದು) ಎಸ್‌ಡಿಎಂ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಅಂಗಾಂಗಗಳನ್ನು ಶಸ್ತ್ರ ಚಿಕಿತ್ಸೆಯ ಮೂಲಕ ತೆಗೆಯಲಾಯಿತು. ನಂತರ ಕರ್ನಾಟಕ ಕಸಿ ಪ್ರಾಧಿಕಾರದ ನಿಯಮದಂತೆ ಒಂದು ಕಿಡ್ನಿಯನ್ನು ಎಸ್‌ಡಿಎಂ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಕಸಿ ಮಾಡಲಾಯಿತು.

ಮತ್ತೊಂದು ಕಿಡ್ನಿಯನ್ನು ಬೆಳಗಾವಿಯ ಕೆಎಲ್ ಇ ಆಸ್ಪತ್ರೆಗೆ ರವಾನಿಸಲಾಯಿತು. ಲಿವರ್‌ನ್ನು (ಯಕೃತ್) ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ನೀಡಲಾಯಿತು. ಮತ್ತು ಹೃದಯ ಕವಾಟವನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ನೀಡಲಾಯಿತು.

ಇದನ್ನೂ ಓದಿ:2002ರಲ್ಲಿ ಕೊಲೆ: ಗೋವಾ ಪೊಲೀಸರಿಂದ ಬೆಂಗಳೂರಿನಲ್ಲಿ ಆರೋಪಿ ಬಂಧನ

ಕಿಡ್ನಿ ಕಸಿ ಮಾಡುವ ತಂಡದಲ್ಲಿ ಕ್ರಿಟಿಕಲ್ ಕೇರ್, ನೆಪ್ರೋಲಜಿ, ಯುರೋಲಜಿ, ಪ್ಲಾಸ್ಟಿಕ್ ಸರ್ಜರಿ, ಅನಸ್ತೇಶಿಯಾ ವಿಭಾಗದ ವೈದ್ಯರು ಮತ್ತು ಒ.ಟಿ ಟೆಕ್ನೀಷಿಯನ್, ನರ್ಸಿಂಗ್ ಹಾಗೂ ಪಿ.ಆರ್.ಓ  ವಿಭಾಗದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಈ ಅಂಗಾಂಗಗಳನ್ನು ದಾನ ಮಾಡುವ ಪ್ರಕ್ರಿಯೆಯನ್ನು ಜೀವ ಸಾರ್ಥಕತೆಯು (ಕರ್ನಾಟಕ ಕಸಿ ಪ್ರಾಧಿಕಾರ ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಸರಕಾರ ಮತ್ತು ಎಸ್.ಡಿ.ಎಮ್ ಆಸ್ಪತ್ರೆಯ  ಸಹಯೋಗದಲ್ಲಿ ನಡೆಸಲಾಯಿತು. ಎಸ್‌ಡಿಎಮ್ ಆಸ್ಪತ್ರೆಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತ್ವರಿತವಾಗಿ ಅಂಗಾಂಗಗಳನ್ನು ತಲುಪಿಸಲು ಗ್ರೀನ್ ಕಾರಿಡಾರ್ (ಸಂಪೂರ್ಣ ಟ್ರಾಫಿಕ್ ನಿಷೇಧಿತ ಮಾರ್ಗ) ವ್ಯವಸ್ಥೆ ಕಲ್ಪಿಸಲಾಯಿತು. ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್ ಹಾಗೂ ಸಿಪಿಐ ಮಲ್ಲನಗೌಡ ನಾಯ್ಕರ್ ಹಾಗೂ ಹುಬ್ಬಳ್ಳಿ ವಿಮಾನ  ನಿಲ್ದಾಣದ ವ್ಯವಸ್ಥಾಪಕರು ಮತ್ತು ಅಧಿಕಾರಿಗಳ ಸಹಕಾರ ಹಾಗೂ ಈ ಸಂಯೋಜನೆಗೆ ಎಸ್‌ಡಿಎಮ್ ವೈದ್ಯಕೀಯ ಮಹಾವಿದ್ಯಾಲಯದ ಉಪಕುಲಪತಿ ಡಾ| ನಿರಂಜನ ಕುಮಾರ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ತಿಳಿಸಿದ್ದಾರೆ.

ಸಾವಿನಲ್ಲೂ ಸಾರ್ಥಕತೆ ಜತೆಗೆ ಸಮಾಜಕ್ಕೆ ಮಾದರಿಯಾದ ಕುಟುಂಬದವರ ಕಾರ್ಯಕ್ಕೆ ಎಸ್‌ಡಿಎಂ ವಿವಿಯ ಕುಲಪತಿ ಡಾ|ಡಿ.ವೀರೇಂದ್ರ ಹೆಗ್ಗಡೆ, ಉಪಕುಲಪತಿ ಡಾ|ನಿರಂಜನಕುಮಾರ, ಆಡಳಿತ ನಿರ್ದೇಶಕ ಸಾಕೆತ್ ಶೆಟ್ಟಿ, ವೈದ್ಯಕೀಯ ಅಧಿಕ್ಷಕ ಡಾ|ಕಿರಣ ಹೆಗ್ಡೆ ಸೇರಿದಂತೆ ಎಸ್‌ಡಿಎಂ ವೈದ್ಯಕೀಯ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಮತ್ತು ಸಮಸ್ತ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.