ದೇಶಾದ್ಯಂತ ಪಸರಿಸಲಿ ದೇಶಪಾಂಡೆ ಪ್ರತಿಷ್ಠಾನ: ದೇಸಾಯಿ

Team Udayavani, Jan 30, 2017, 12:38 PM IST

hub1.jpg

ಹುಬ್ಬಳ್ಳಿ: ಸಾಮಾಜಿಕ ಉದ್ಯಮಶೀಲತೆ, ಕೃಷಿ, ಕೌಶಲ ಇನ್ನಿತರ ಕ್ಷೇತ್ರಗಳಲ್ಲಿ ಕ್ರಾಂತಿಕಾರ ಬದಲಾವಣೆ, ಸಾಧನೆಗೆ ಮುಂದಾಗಿರುವ ದೇಶಪಾಂಡೆ ಪ್ರತಿಷ್ಠಾನ ದೇಶದ ಎಲ್ಲ ರಾಜ್ಯಗಳಲ್ಲಿ ತನ್ನ ಕಾರ್ಯ ಆರಂಭಿಸುವಂತಾಗಲಿ ಎಂದು ಮಸ್ಟೆಕ್‌ ಕಂಪೆನಿಯ ಅಶಾಂಕ್‌ ದೇಸಾಯಿ ಅಭಿಪ್ರಾಯಪಟ್ಟರು. 

ದೇಶಪಾಂಡೆ ಪ್ರತಿಷ್ಠಾನದ ಅಭಿವೃದ್ಧಿ ಸಂವಾದದ ಕೊನೆ ಗೋಷ್ಠಿ ಭವಿಷ್ಯದ ಕಲ್ಪನೆ ಕುರಿತ ಸಂವಾದದಲ್ಲಿ ಮಾತನಾಡಿದ ಅವರು, ದೇಶಪಾಂಡೆ ಪ್ರತಿಷ್ಠಾನದ ಪ್ರೇರಣೆ ಹಾಗೂ ಸಾಧನೆಗಳು ನಿಜಕ್ಕೂ ಅಚ್ಚರಿ ಮೂಡಿಸುವಂತಿವೆ. ಇದು ಕೇವಲ ಮೂರ್‍ನಾಲ್ಕು ರಾಜ್ಯಗಳಿಗೆ ಸೀಮಿತವಾಗದೆ ದೇಶದ ಅಭಿವೃದ್ಧಿ ದೃಷ್ಟಿಯಿಂದ ಎಲ್ಲ ಕಡೆಗೂ ಸೇವೆ ಸಿಗುವಂತಾಗಲಿ. 

ಈ ನಿಟ್ಟಿನಲ್ಲಿ ದೇಶಪಾಂಡೆ ಪ್ರತಿಷ್ಠಾನದ ಸಂಸ್ಥಾಪಕ ಡಾ| ಗುರುರಾಜ ದೇಶಪಾಂಡೆ ಗಂಭೀರವಾಗಿ ಚಿಂತನೆ ನಡೆಸಲಿ ಎಂದರು. ಭಾರತದಲ್ಲಿ ಅನೇಕ ಎನ್‌ಜಿಒಗಳಿಗೆ ನಿಧಿ ಸಂಗ್ರಹ ಹೇಗೆ ಎಂಬುದು ಗೊತ್ತಿಲ್ಲ. ದೇಣಿಗೆ ಹಾಗೂ ಸಾಮಾಜಿಕ ಸೇವೆಯ ಲಾಭ ನಾಗರಿಕರಿಗೆ ತಲುಪಬೇಕು. ವಿಶ್ವಾಸಪೂರ್ಣ ವ್ಯವಸ್ಥೆ ರೂಪುಗೊಳ್ಳಬೇಕು.

ಈ ನಿಟ್ಟಿನಲ್ಲಿ ಸಂಘಟಿತ ಹಾಗೂ ತಂಡ ರೂಪದ ಕಾರ್ಯ ನಿರ್ವಹಣೆ ಸಂಸ್ಕೃತಿ ಹೆಚ್ಚಬೇಕಿದೆ ಎಂದರು. ಸನಿನ ಕಾರ್ಪೋರೆಟ್‌ನ ಸುಂದರ ಕಾಮತ್‌ ಮಾತನಾಡಿ, ಭಾರತದಲ್ಲಿ ಮುಂದಿನ 5-10 ವರ್ಷಗಳಲ್ಲಿ ಉದ್ಯೋಗದ ಪ್ರಮಾಣ ಹೆಚ್ಚಬೇಕಾಗಿದೆ. ಮುಖ್ಯವಾಗಿ ಕೃಷಿ, ಗ್ರಾಮೀಣ ಆರ್ಥಿಕತೆ ಹೆಚ್ಚಳಕ್ಕೆ ಕೊಡುಗೆ ನೀಡಬೇಕಿದ್ದು, ಸವಾಲುಗಳಿಗೆ ಪರಿಹಾರ ಯ°ತದ ಸ್ವಯಂ ವಿಶ್ವಾಸ ವೃದ್ಧಿಸಬೇಕಾಗಿದೆ ಎಂದರು. 

ನೆಕ್ಸ್ಟ್ಇನ್‌ನ ರಾಜೀವ್‌ ಪ್ರಕಾಶ ಮಾತನಾಡಿ, ಭಾರತದ ಉದ್ಯಮ ಸಾಧನೆ ವಿಶ್ವಾಸ ಮೂಡಿಸುತ್ತಿದೆ. ಅಭಿವೃದ್ಧಿ ಸಂವಾದ ಇದಕ್ಕೆ ಪೂರಕವಾಗಿದೆ. ನೆಕ್ಸ್ಟ್ ಇನ್‌ ಉದ್ಯಮದ ತಂತ್ರಜ್ಞಾನ ಮೇಲ್ದರ್ಜೆಗೇರಿಸುವ ನಿಟ್ಟಿನಲಿ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ನವೋದ್ಯಮ ನಿಧಿ, ಮಾರ್ಗದರ್ಶಕರು, ಪರಿಣಾಮಕಾರಿ ತಂತ್ರಜ್ಞಾನ ಬಳಕೆ ಬಗ್ಗೆ ಹೆಚ್ಚು ಚರ್ಚೆಯಾಗಲಿ ಎಂದರು. 

ಕಾಕತೀಯ ಸ್ಯಾಂಡ್‌ಬಾಕ್ಸ್‌ನ ರಾಜು ರೆಡ್ಡಿ ಮಾತನಾಡಿ, ಭಾರತದಿಂದ ಜಾಗತಿಕ ಮಾರುಕಟ್ಟೆಗೆ ಉತ್ಪನ್ನಗಳನ್ನು ರವಾನಿಸುವ ಉದ್ಯಮಗಳಿಗೆ ನೆರವು ನೀಡುತ್ತಿದ್ದೇವೆ. ಸಾಮಾಜಿಕ ಸವಾಲುಗಳಿಗೆ ಪರಿಹಾರಕ್ಕೆ ಉದ್ಯಮ ಉತ್ತಮ ವೇದಿಕೆಯಾಗಿದೆ. ಯುವ ಉದ್ಯಮಿಗಳು ಜಾಗತಿಕ ಮಟ್ಟದಲ್ಲಿ ಬೆಳವಣಿಗೆ ಗುರಿ ಹೊಂದಬೇಕು. 1980ರ ದಶಕದಲ್ಲಿ ಚೀನಾ ಹಾಗೂ ಭಾರತದ ತಲಾ ಆದಾಯ ಹೆಚ್ಚು ಕಡಿಮೆ ಸಮಾನವಾಗಿತ್ತು.

ಆದರೆ ಅನಂತರದಲ್ಲಿ ಚೀನಾ ತೀವ್ರ ಆರ್ಥಿಕಾಭಿವೃದ್ಧಿ ವೇಗ ಪಡೆಯಿತು. ಭಾರತೀಯರಲ್ಲಿ ಸಹಿಷ್ಣತೆ ಉದಾರವಾಗಿದೆ. ನೋಟುಗಳ ಅಮಾನ್ಯದಲ್ಲೂ ತೊಂದರೆಯಾದರೂ ಯಾರೊಬ್ಬರೂ ತಾಳ್ಮೆ ಕಳೆದುಕೊಳ್ಳಲಿಲ್ಲ ಎಂದರು. ದೇಶಪಾಂಡೆ ಪ್ರತಿಷ್ಠಾನದ ಸಂಸ್ಥಾಪಕ  ಡಾ| ಗುರುರಾಜ ದೇಶಪಾಂಡೆ ಗೋಷ್ಠಿ ನಿರ್ವಹಿಸಿದರು.  

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.