ಧರ್ಮಾಚರಣೆಯಿಂದ ಮನಸ್ಸಿಗೆ ಶಾಂತಿ: ಸ್ವಾದಿ ಜೈನ ಶ್ರೀ

ಧರ್ಮ ಕಾರ್ಯಗಳು ಸಮಾಜವನ್ನು ಒಗ್ಗೂಡಿಸುತ್ತವೆ.

Team Udayavani, Mar 3, 2022, 6:15 PM IST

ಧರ್ಮಾಚರಣೆಯಿಂದ ಮನಸ್ಸಿಗೆ ಶಾಂತಿ: ಸ್ವಾದಿ ಜೈನ ಶ್ರೀ

ಧಾರವಾಡ: ಇಡೀ ವಿಶ್ವವೇ ಹಿಂಸೆಯಿಂದ ನಲುಗಿ ಹೋಗಿರುವ ಈ ಸಮಯದಲ್ಲಿ ಅಹಿಂಸೆ, ಅಪರಿಗ್ರಹ ಇಂದಿನ ಅವಶ್ಯಕತೆಗಳಾಗಿವೆ ಎಂದು ಸ್ವಾದಿ ಜೈನ ಮಠದ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.

ನಗರದ ಸನ್ಮತಿ ಜಿನ ಮಂದಿರದಲ್ಲಿ ಜರುಗಿದ ನೂತನ ಏಕಶಿಲಾ ಮಾನಸ್ತಂಭೋಪರಿ ಚತುರ್ಮುಖ ಜಿನಬಿಂಬ ಪ್ರತಿಷ್ಠಾನ ಮಹೋತ್ಸವದ ಧರ್ಮ ಸಭೆಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಧರ್ಮಾಚರಣೆಯಿಂದ ಮನಸ್ಸಿಗೆ ಶಾಂತಿ ಪ್ರಾಪ್ತಿಯಾಗಿ ನಮ್ಮಲ್ಲಿರುವ ಕೆಟ್ಟ ವಿಚಾರಗಳನ್ನು ದೂರವಿಡಬಹುದು. ಆಗ ಸಮಾಜದಲ್ಲಿ ಶಾಂತಿ, ಸಾಮರಸ್ಯ ಉಂಟಾಗುತ್ತದೆ. ಜೈನ ಧರ್ಮದ ಜೀವಾಳವೇ ಅಹಿಂಸೆ. ಮಕ್ಕಳಲ್ಲಿ ಯುವಕರಲ್ಲಿ ಧಾರ್ಮಿಕ ಮನೋಭಾವನೆ ಬೆಳೆಸಬೇಕಾಗಿದೆ. ನಮಗೆ ಸಾಧ್ಯವಾದಷ್ಟು ದಾನ ಧರ್ಮ ಮಾಡುವದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದರು.

ಎಸ್‌ಡಿಎಂ ವಿವಿ ಉಪಕುಲಪತಿ ಡಾ| ನಿರಂಜನಕುಮಾರ ಮಾತನಾಡಿ, ನಾಮ ಸ್ತಂಭ ಮನಸ್ಸಿನಲ್ಲಿರುವ ಕಷಾಯಗಳನ್ನು ದೂರ ಮಾಡುತ್ತದೆ. ಮನಸ್ಸಿನಲ್ಲಿರುವ ಕಷಾಯಗಳನ್ನು ಹೊರಗೆ ಬಿಟ್ಟು ಜಿನದರ್ಶನ ಮಾಡಬೇಕು ಎಂದು ಹೇಳಿದರು.

ಜೆಎಸ್ಸೆಸ್‌ ಕಾರ್ಯದರ್ಶಿ ಡಾ| ನ. ವಜ್ರಕುಮಾರ ಮಾತನಾಡಿ, ಧರ್ಮ ಕಾರ್ಯಗಳು ಸಮಾಜವನ್ನು ಒಗ್ಗೂಡಿಸುತ್ತವೆ. ಪ್ರೀತಿ ಗೌರವಗಳನ್ನು ಹಂಚುತ್ತವೆ. ದುಷ್ಟ ವಿಚಾರಗಳನ್ನು ದೂರ ಇಡುತ್ತವೆ. ಮಾನಸಿಕ ನೆಮ್ಮದಿಗೆ ಇಂತಹ ಆಚರಣೆಗಳು ಅವಶ್ಯ ಎಂದರು.

ಅಶೋಕ ಬಾಗಿ ಅಧ್ಯಕ್ಷತೆ ವಹಿಸಿದ್ದರು. ಮಾನ ಸ್ತಂಭ ನಿರ್ಮಾಣಕ್ಕೆ ಧನಸಹಾಯ ಮಾಡಿದ ಪಿ.ಸಿಂಹಸೇನ ದಂಪತಿ, ಡಾ| ನ. ವಜ್ರಕುಮಾರ ಮತ್ತು ಸುಮನಾ ವಜ್ರಕುಮಾರ, ಡಾ|ಅಜಿತ ಪ್ರಸಾದ ಮತ್ತು ವಾಣಿಶ್ರೀ ಪ್ರಸಾದ, ನೇಮಿನಾಥ ಪತ್ರಾವಳಿ ಮತ್ತು ರೀಟಾ ಪತ್ರಾವಳಿ ಅವರನ್ನು ಸನ್ಮಾನಿಸಲಾಯಿತು.

ಎಸ್‌ಡಿಎಂ ವಿವಿ ಉಪಕುಲಪತಿ ಡಾ| ನಿರಂಜನಕುಮಾರ ಹಾಗೂ ಪದ್ಮಲತಾ ನಿರಂಜನಕುಮಾರ, ಚಾವುಂಡರಾಯ ಪ್ರಶಸ್ತಿ ಪುರಸ್ಕೃತ ಡಾ| ಶಾಂತಿನಾಥ ದಿಬ್ಬದ, ಕವಿಸಂ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಡಾ| ಜಿನದತ್ತ ಹಡಗಲಿ, ಸಂಗೀತ ಕಾರ್ಯಕ್ರಮ ನಡೆಸಿದ ಜಯಶ್ರೀ ದಂಪತಿ, ಅಶೋಕ ಬಾಗಿ, ಚಾರುದತ್ತ ಬಾಗಿ ದಂಪತಿಯನ್ನು ಗೌರವಿಸಲಾಯಿತು. ಮಹಾವೀರ ಉಪಾದ್ಯೆ ನಿರೂಪಿಸಿದರು. ಜಿನೇಂದ್ರ ಕುಂದಗೋಳ ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.