ಜನರ ಆಕರ್ಷಿಸುತ್ತಿರುವ ಸಖೀ,ವಿಕಲಚೇತನರ ಮತಗಟ್ಟೆಗಳು

Team Udayavani, Apr 23, 2019, 10:35 AM IST

hub-2

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದಲೇ ನಡೆಸಲ್ಪಡುವ 16 ಸಖೀ ಮತಗಟ್ಟೆಗಳು, ವಿಕಲಚೇತನ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದಲೇ ನಿಭಾಯಿಸಲ್ಪಡುವ 7 ವಿಕಲಚೇತನರ ಮತಗಟ್ಟೆಗಳು ಜನರನ್ನು ಆಕರ್ಷಿಸುತ್ತಿವೆ.

ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸ್ಥಾಪಿಸಿರುವ ಸಖೀ ಮತಗಟ್ಟೆಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗಂಗಮ್ಮ ತೋಟಗೇರಿ, ಶ್ರೀಲತಾ ನಂದಿ, ಬಿ.ಎಲ್.ಓ ಶಹನಾಜ್‌ ನದಾಫ್‌ ವಿಶೇಷ ಮುತುವರ್ಜಿ ವಹಿಸಿ ಅಲಂಕರಿಸಿದ್ದಾರೆ.

ಆಕರ್ಷಕ ಸ್ವಾಗತ ಕಮಾನು, ರಂಗೋಲಿ, ವರ್ಣಮಯ ಕಾಗದ, ಬಲೂನುಗಳಿಂದ ಸಿಂಗರಿಸಿದ್ದಾರೆ. ಬಣ್ಣ ಬಣ್ಣದ ಪರದೆಗಳು ಮತಗಟ್ಟೆಯ ಅಂದ ಹೆಚ್ಚಿಸಿವೆ. ಪಾಲಕರೊಂದಿಗೆ ಬರುವ ಮಕ್ಕಳಿಗೆ ಆಟವಾಡಲು ಕಿಡ್ಸ್‌ ಕಾರ್ನರ್‌ ಸ್ಥಾಪಿಸಲಾಗಿದೆ. ಮಕ್ಕಳಿಗೆ ಚಾಕಲೇಟ್ ವಿತರಣೆಗೆ ತಯಾರಿ ಮಾಡಿಕೊಂಡಿದ್ದಾರೆ. ಮತಗಟ್ಟೆಯಲ್ಲಿ ಮಹಿಳಾ ಅಧಿಕಾರಿ, ಸಿಬ್ಬಂದಿ ಹಾಗೂ ಮಹಿಳಾ ಪೊಲೀಸ್‌ ಪೇದೆ ಕರ್ತವ್ಯ ನಿರ್ವಹಿಸಲಿದ್ದಾರೆ.

ಜಿಲ್ಲೆಯಲ್ಲಿ 14, ಶಿಗ್ಗಾವಿಯಲ್ಲಿ 2 ಸೇರಿ ಒಟ್ಟು 16 ಸಖೀ ಮತಗಟ್ಟೆಗಳಿವೆ. 7 ವಿಕಲಚೇತನ ಮತಗಟ್ಟೆಗಳಿವೆ. ಮಹಿಳೆಯರು ಮತ್ತು ವಿಕಲಚೇತನರು ಎಲ್ಲರ ಮುಂದೆ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಅವಕಾಶವಾಗಿದೆ. ವಿಕಲಚೇತನರನ್ನು ಮನೆಯಿಂದ ಮತಗಟ್ಟೆಗೆ ಕರೆ ತರಲು ವಾಹನ, ಗಾಲಿ ಖುರ್ಚಿ, ರ್‍ಯಾಂಪ್‌, ಭೂತಕನ್ನಡಿ ಮೊದಲಾದ ಸೌಕರ್ಯ ಒದಗಿಸಲಾಗುತ್ತಿದೆ ಎಂದು ಸ್ವೀಪ್‌ ಸಮಿತಿ ಅಧ್ಯಕ್ಷರಾದ ಜಿಪಂ ಸಿಇಒ ಬಿ.ಸಿ.ಸತೀಶ ತಿಳಿಸಿದ್ದಾರೆ.

ಕೃಷಿ ವಿವಿ ಕಟ್ಟಡದಲ್ಲಿ ಮಾವಿನ ತಳಿರು ತೋರಣ, ರಂಗವಲ್ಲಿ, ಬಲೂನು ಸೇರಿ ಬಗೆ ಬಗೆಯ ವಸ್ತುಗಳಿಂದ ವಿಕಲಚೇತನರ ಮತಗಟ್ಟೆ ಅಲಂಕರಿಸಲಾಗಿದೆ. 6 ಜನ ವಿಕಲಚೇತನ ಅಧಿಕಾರಿಗಳು ಮತ್ತು ಸಿಬ್ಬಂದಿಗಳೇ ಈ ಮತಗಟ್ಟೆಯನ್ನು ನಿರ್ವಹಿಸಲಿದ್ದೇವೆ. ನಮ್ಮನ್ನು ಹುರಿದುಂಬಿಸಲು ಜಿಲ್ಲಾಡಳಿತ ವಿಶೇಷ ತರಬೇತಿ-ಪ್ರೋತ್ಸಾಹ ನೀಡುತ್ತಿದೆ ಎಂದು ಮತಗಟ್ಟೆ ಅಧ್ಯಕ್ಷಾಧಿಕಾರಿ ಬಾಬಾಜಾನ ಮುಲ್ಲಾ ತಿಳಿಸಿದರು.

ಸಖೀ-ವಿಕಲಚೇತನರ ಮತಗಟ್ಟೆಗಳ ಆಕರ್ಷಣೆ

ಪೂರ್ವ ಕ್ಷೇತ್ರದಲ್ಲಿ ತೊರವಿ ಗಲ್ಲಿ ಪಾಲಿಕೆ ಆಸ್ಪತ್ರೆ, ಬಾಷೆಲ್ ಮಿಷನ್‌ ಬಾಲಕರ ಪ್ರೌಢಶಾಲೆ ಹಾಗೂ ಕೇಂದ್ರದಲ್ಲಿ ವೇಲಾಂಗಣಿ ಶಿಕ್ಷಣ ಸಂಸ್ಥೆಯ ಸೇಂಟ್ ಆಂಥೋಣಿ ಐಟಿಐ ಕಟ್ಟಡ, ಸಿದ್ದೇಶ್ವರ ಪಾರ್ಕ್‌ ವಿದ್ಯಾನಗರದಲ್ಲಿ ಸಖೀ ಕೇಂದ್ರಗಳನ್ನು ಮಾಡಲಾಗಿದೆ. ಪೂರ್ವದಲ್ಲಿ ಗಣೇಶಪೇಟೆ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.8 ಹಾಗೂ ಕೇಂದ್ರದಲ್ಲಿ ಹೊಸೂರ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.16 ರಲ್ಲಿ ಅಂಗವಿಲಕರ ಮತಗಟ್ಟೆ ಮಾಡಲಾಗಿದೆ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.