
ಪ್ಲಾಸ್ಟಿಕ್ ನಿಷೇಧಕ್ಕೆ ಜನರ ಸಹಕಾರ ಅವಶ್ಯ: ಶೆಟ್ಟರ
ನಿಯಮ ಮೀರಿ ಉತ್ಪಾದಿಸುವ ಕಾರ್ಖಾನೆ ನಿರ್ಬಂಧಿಸಿ ; ಕಳ್ಳಮಾರ್ಗದಲ್ಲಿ ತರುವ ದಾಸ್ತಾನುಗಾರರ ಪತ್ತೆ ಮಾಡಿ
Team Udayavani, Aug 7, 2022, 2:41 PM IST

ಹುಬ್ಬಳ್ಳಿ: ಸರಕಾರದ ಮಾರ್ಗಸೂಚಿ ಅನುಸಾರ 50 ಮೈಕ್ರಾನ್ಗಿಂತ ಮೇಲಿರುವ ಪ್ಲಾಸ್ಟಿಕ್ ಬಳಕೆಗೆ ಅವಕಾಶವಿದ್ದು, ಜನಸಮಾನ್ಯರೇ ಜಾಗೃತರಾಗಿ ಏಕಬಳಕೆ ಪ್ಲಾಸ್ಟಿಕ್ ನಿಷೇಧಕ್ಕೆ ಸಹಕರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಹು-ಧಾ ಮಹಾನಗರ ಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಶನಿವಾರ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು ವ್ಯಾಪಾರಸ್ಥರು, ಉದ್ಯಮಿಗಳು ಹಾಗೂ ಸಾರ್ವಜನಿಕರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಮಾಲಿನ್ಯ ನಿಯಂತ್ರಣ ಮಂಡಳಿಯವರು ಸರಕಾರದ ನಿಯಮಾವಳಿ ಮೀರಿ ಪ್ಲಾಸ್ಟಿಕ್ ಉತ್ಪಾದಿಸುವ ಮೂಲ ಕಾರ್ಖಾನೆಗಳನ್ನು ನಿರ್ಬಂಧಿಸಬೇಕು. ಅಂತಹುಗಳಿಗೆ ಮೂಗುದಾರ ಹಾಕಬೇಕು. ಕಳ್ಳಮಾರ್ಗವಾಗಿ ಪರ ರಾಜ್ಯದಿಂದ ತರುವ ದಾಸ್ತಾನುದಾರರನ್ನು ಪತ್ತೆ ಮಾಡಿ ತಡೆಗಟ್ಟಬೇಕು. ಕೋವಿಡ್ನಿಂದ ಈಗತಾನೇ ವ್ಯಾಪಾರಿಗಳು ಸುಧಾರಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಪ್ಲಾಸ್ಟಿಕ್ ಬ್ಯಾನ್ ನೆಪದಲ್ಲಿ ಸಣ್ಣ-ಪುಟ್ಟ ಅಂಗಡಿಕಾರರು, ಹೊಟೇಲ್ನವರಿಗೆ ಕಿರುಕುಳ ಸರಿಯಲ್ಲ. ಏಕಬಳಕೆ ಪ್ಲಾಸ್ಟಿಕ್ ನಿಷೇಧ ಜವಾಬ್ದಾರಿ ಅಧಿಕಾರಿಗಳಿಗೆ ಸೀಮಿತವಲ್ಲ. ವ್ಯಾಪಾರಿಗಳು, ಉದ್ಯಮಿಗಳಲ್ಲಿ ಈ ಕುರಿತು ಜಾಗೃತಿ ಮೂಡಬೇಕು. ಆಗ ಮಾತ್ರ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ತಡೆ ಸಾಧ್ಯ ಎಂದರು.
ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, 50 ಮೈಕ್ರಾನ್ಗಿಂತ ಕಡಿಮೆ ಇರುವ ಪ್ಲಾಸ್ಟಿಕ್ ಬಳಸುವವರ ಮೇಲೆ ಅಧಿಕಾರಿಗಳು ಮುಲಾಜಿಲ್ಲದೆ ದಂಡ ವಿಧಿಸಬೇಕು. ಯಾರ ಬಳಿ ಇಂತಹ ಪ್ಲಾಸ್ಟಿಕ್ ಇದೆ ಅಂಥವರು ಈಗಲೇ ಪಾಲಿಕೆಗೆ ಮರಳಿಸಬೇಕು. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರು ಹಂತ ಹಂತವಾಗಿ ಜನರಿಗೆ ತಿಳಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಉತ್ಪಾದನೆ ಆಗುವಲ್ಲಿಯೇ ನಿಷೇಧ ಮಾಡಬೇಕು. ವಾಣಿಜ್ಯ ತೆರಿಗೆ ಇಲಾಖೆಯವರು ಪರ ರಾಜ್ಯದಿಂದ ಬರುತ್ತಿರುವ ಪ್ಲಾಸ್ಟಿಕ್ ತಡೆಗಟ್ಟುವ ಕೆಲಸ ಮಾಡಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಹೇಳಿದರು.
ಪಾಲಿಕೆ ಆಯುಕ್ತ ಡಾ| ಬಿ. ಗೋಪಾಲಕೃಷ್ಣ ಮಾತನಾಡಿ, ಈಗಾಗಲೇ ಹೋಟೆಲ್, ವ್ಯಾಪಾರಿಗಳ ಜೊತೆ ಸಭೆ ಮಾಡಲಾಗಿದೆ. ಮೊದಲು ದಂಡ ಹಾಕದೆ ಜಾಗೃತಿ ಮೂಡಿಸಿದ್ದೇವೆ. ಯಾರಿಗೂ ತೊಂದರೆ ಮಾಡಿಲ್ಲ. ಕಿರಿಕಿರಿ ಕೊಟ್ಟಿಲ್ಲ ಎಂದರು.
ಮಹಾಪೌರ ಈರೇಶ ಅಂಚಟಗೇರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೇಪರ್ ಬ್ಯಾಗ್ ಬಳಸುವ ಬಗ್ಗೆ ಜಗದೀಶ ಶೆಟ್ಟರ ಹಾಗೂ ಬಸವರಾಜ ಹೊರಟ್ಟಿಯವರು ರಾಜ್ಯಮಟ್ಟದಲ್ಲಿ ಅಧಿಕಾರಿಗಳ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತಾರೆ. ಪ್ಲಾಸ್ಟಿಕ್ ತಡೆಯಲು ಮುಂದಾಗುವ ಅಧಿಕಾರಿಗಳು ವ್ಯಾಪಾರಿಗಳೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಬೇಕು ಎಂದು ಹೇಳಿದರು.
ಕೆಎಲ್ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ ಮಾತನಾಡಿ, ಅಧಿಕಾರಿಗಳು ವ್ಯಾಪಾರಸ್ಥರ ಮೇಲೆ ನಿರ್ಬಂಧ ಹೇರುವ ಬದಲು ಉತ್ಪಾದಕರ ಮೇಲೆ ಕ್ರಮಕೈಗೊಳ್ಳಬೇಕು ಎಂದರು. ಮಾಲಿನ್ಯ ನಿಯಂತ್ರಣ ಮಂಡಳಿಯ ಶೋಭಾ ಪ್ರಾಸ್ತಾವಿಕ ಮಾತನಾಡಿದರು.
ಉಪ ಮಹಾಪೌರ ಉಮಾ ಮುಕುಂದ, ಪಾಲಿಕೆ ಸಭಾನಾಯಕ ತಿಪ್ಪಣ್ಣ ಮಜ್ಜಗಿ, ವಿಪಕ್ಷ ನಾಯಕ ದೊರೈರಾಜ ಕಲ್ಲಕುಂಟ್ಲಾ, ಕೆಸಿಸಿಐನ ಅಧ್ಯಕ್ಷ ವಿನಯ ಜವಳಿ, ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ ಇನ್ನಿತರರಿದ್ದರು.
ಅಧಿಕಾರಿಗಳು ಸೌಜನ್ಯದಿಂದ ವರ್ತಿಸಲಿ
ಸರಕಾರ ಎಲ್ಲ ರೀತಿಯ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದ್ದರೆ ಸಾರ್ವಜನಿಕರಲ್ಲಿ ಗೊಂದಲ ಆಗುತ್ತಿರಲಿಲ್ಲ. ಪ್ಲಾಸ್ಟಿಕ್ ತಡೆಯಲು ಅಧಿಕಾರಿಗಳು ಯಾವ್ಯಾಗ ಬೇಕಾದಾಗ ಅಂಗಡಿ, ಹೋಟೆಲ್ಗೆ ದಾಳಿ ಮಾಡುತ್ತಾರೆ. ಈ ಸಂದರ್ಭದಲ್ಲಿ ಅವರ ವರ್ತನೆಯಿಂದ ಬೇಜಾರಾಗುತ್ತೆ. ದಂಡ ವಿಧಿಸಲು ಬಂದವರು ಸೌಜನ್ಯದಿಂದ ವರ್ತಿಸದೆ ದಬ್ಟಾಳಿಕೆ ಮಾಡುತ್ತಿದ್ದಾರೆ ಎಂದು ಹೋಟೆಲ್ ಉದ್ಯಮಿ ಸುಧಾಕರ ಶೆಟ್ಟಿ ಆರೋಪಿಸಿದರು.
ವ್ಯಾಪಾರಿ ವಿಜಯ ಅಳಗುಂಡಗಿ ಮಾತನಾಡಿ, ಪ್ಲಾಸ್ಟಿಕ್ ನಿಷೇಧಕ್ಕೆ ನಾವು ಕೈಜೋಡಿಸುತ್ತೇವೆ. ಕೇಂದ್ರ ಸರಕಾರ 50 ಮೈಕ್ರಾನ್ ಬಳಕೆಗೆ ಅವಕಾಶ ನೀಡಿದೆ. ಅದು ರಾಜ್ಯದಲ್ಲೂ ಜಾರಿಯಾಗಲಿ ಎಂದರು. ವ್ಯಾಪಾರಸ್ಥ ಸವಣೂರ ಮಾತನಾಡಿ, ವ್ಯಾಪಾರಸ್ಥರು ಸಮಸ್ಯೆಯಲ್ಲಿದ್ದಾರೆ. ಒಂದು ಅಥವಾ ಎರಡು ತಿಂಗಳು ಸಮಯ ನೀಡಿ ಎಂದು ಕೋರಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೋರಾಟದ ಬಳಿಕವೇ ಮಹದಾಯಿ ಹಾಗೂ ಕಳಸಾ ಬಂಡೂರಿಗೆ ಡಿಪಿಆರ್ ದೊರೆಕಿದೆ: ಸಿಎಂ ಬೊಮ್ಮಾಯಿ

ಹಾಲಿ- ಮಾಜಿ ಸಿಎಂ ಗಳು ಪುಡಿ ರೌಡಿಗಳಂತೆ ಮಾತನಾಡುತ್ತಿದ್ದಾರೆ: ಎಚ್.ವಿಶ್ವನಾಥ ಅಸಮಾಧಾನ

ಕಾಂಗ್ರೆಸ್ ಟೀಕೆಯಿಂದ ನೋವಾಗಿದೆ: ಸಿಎಂ ಬೊಮ್ಮಾಯಿ

ಯುವಕರು ಮಹಾನ್ ಭಾರತ ನಿರ್ಮಾಣದ ಸಂಕಲ್ಪ ಮಾಡಬೇಕು: ಅಮಿತ್ ಶಾ

ಧಾರವಾಡ ವಿಧಿವಿಜ್ಞಾನ ವಿವಿ ನೂತನ ಕ್ಯಾಂಪಸ್ ಗೆ ಅಮಿತ್ ಶಾ ಶಂಕು ಸ್ಥಾಪನೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಪಠಾಣ್ ಅಬ್ಬರಕ್ಕೆ ನಡುಗಿದ ಬಾಕ್ಸಾಫೀಸ್: ಭಾರತದಲ್ಲೇ 300 ಕೋಟಿ ಗಳಿಸಿ ಶಾರುಖ್ ಸಿನಿಮಾ

ಕೋಮುಗಲಭೆ ಸೃಷ್ಟಿಸುತ್ತಿದೆ ಬಿಜೆಪಿ ಸರ್ಕಾರ; ಆನಂದ ನ್ಯಾಮಗೌಡ

ಉಡುಪಿ: ನಾಗಬನದಲ್ಲಿ ಶ್ರೀಗಂಧ ಮರ ಕಳವು… ಆರೋಪಿ ಬಂಧನ, ಸೊತ್ತು ವಶ

ಬಾಗಲಕೋಟೆ: ತೋಟಗಾರಿಕೆ ವಿವಿಗೆ ನೀರಿನ ಸ್ವಾವಲಂಬನೆ

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ