ರಸ್ತೆ ಗುಂಡಿಗಳಲ್ಲೇ ವನಮಹೋತ್ಸವ!

Team Udayavani, Aug 3, 2019, 9:18 AM IST

ಧಾರವಾಡ: ಮಳೆಗಾಲದಲ್ಲಿ ಹದೆಗಟ್ಟ ರಸ್ತೆ ಗುಂಡಿಗಳಲ್ಲಿ ಗಿಡ ನೆಟ್ಟು ಪ್ರತಿಭಟನೆ ಕೈಗೊಂಡ ಸ್ಥಳೀಯರು.

ಧಾರವಾಡ: ಸಾಧನಕೇರಿ ಕೆರೆಯ ಬಂಡ್‌ ಮೇಲೆ ಹಾದು ಹೋಗಿರುವ ಕಾಂಟನ್‌ಮೆಂಟ್ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಸ್ಥಳೀಯರು ರಸ್ತೆ ಗುಂಡಿಗಳಲ್ಲಿ ಶುಕ್ರವಾರ ಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಜನಪ್ರತಿನಿಧಿಗಳಿಗೆ, ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗದ ಕಾರಣ ಬೆಳ್ಳಂಬೆಳಗ್ಗೆ ಬೀದಿಗಿಳಿದು ಸಾಂಕೇತಿಕ ಹೋರಾಟ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದರು.

ಬೆಳಗ್ಗೆ ವಾಯುವಿಹಾರಕ್ಕೆ ಬಂದ ಹಿರಿಯ ನಾಗರಿಕರು, ಜನಜಾಗೃತಿ ಸಂಘದ ಸದಸ್ಯರು ರಸ್ತೆ ಪಕ್ಕದ ಕಂಟಿಗಳನ್ನು ಗುಂಡಿಗಳಲ್ಲಿ ನಿಲ್ಲಿಸಿ ಅಸಮಾಧಾನ ವ್ಯಕ್ತಪಡಿಸಿದರು.

ಈ ರಸ್ತೆ ವರಕವಿ ದ.ರಾ. ಬೇಂದ್ರೆಯವರು ನಡೆದಾಡಿದ ರಸ್ತೆಯಾಗಿದ್ದು, ಧಾರವಾಡ ಜಿಲ್ಲೆಯಷ್ಟೇ ಅಲ್ಲದೆ, ರಾಜ್ಯದ ವಿವಿಧ ಭಾಗಗಳಿಂದ ದಿನನಿತ್ಯ ನೂರಾರು ಪ್ರವಾಸಿಗರು ಬಾರೋ ಸಾಧನಕೇರಿ ಪ್ರವಾಸಿ ತಾಣ ವೀಕ್ಷಿಸಲು ಆಗವಿಸುತ್ತಾರೆ. ಇದು ಜಿಲ್ಲಾಡಳಿತದ ಗಮನಕ್ಕೆ ಇದ್ದರೂ ಜಾಣ ಕುರುಡುತನ ತೋರಿಸುತ್ತಿರುವುದು ಸರಿಯಾದ ಬೆಳವಣಿಗೆ ಅಲ್ಲ ಎಂದು ದೂರಿದರು.

ಹೈಕೋರ್ಟ್‌ ವಕೀಲ ನೀಲೇಂದ್ರ ಗೂಂಡೆ, ಅರವಿಂದ ದೇಶಮುಖ, ಪರಪ್ಪ ಎಸ್‌.ಕೆ., ಆನಂದ ದೀಕ್ಷಿತ್‌, ವಸಂತ ಅಣ್ವೇಕರ, ಜನ ರಾಘವೇಂದ್ರ ಶೆಟ್ಟಿ ಮೊದಲಾದವರಿದ್ದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

  • ಧಾರವಾಡ: ಹನಿ ನೀರನ್ನು ಪರಿಪೂರ್ಣವಾಗಿ ಬಳಸಿ, ನಿಗದಿತ ಸಮಯದಲ್ಲಿ ಅದನ್ನು ಹಣವಾಗಿ ಪರಿವರ್ತಿಸುವ ಕೃಷಿ ವಿಧಾನವನ್ನು ಜಗತ್ತಿಗೆ ಮಾದರಿಯಾಗಿ ಕೊಟ್ಟಿದ್ದು ಇಸ್ರೇಲ್‌...

  • ಹುಬ್ಬಳ್ಳಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ದಿನವಾದ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಯಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ...

  • ಧಾರವಾಡ: ಕೃಷಿ ಮೇಳದ ಜಾನುವಾರು ಪ್ರದರ್ಶನದಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ಸಲ ಜಾನುವಾರುಗಳ ಸಂಖ್ಯೆ ಕಡಿಮೆ ಇದ್ದು, ವೀಕ್ಷಕರ ಸಂಖ್ಯೆಯೂ ತೀರಾ ಕಡಿಮೆ ಇತ್ತು....

  • ಧಾರವಾಡ: ದ್ರಾಕ್ಷಾರಸ ಮದಿರೆಯಾಗಿ ಮತ್ತೇರಿಸುವುದು ಇತಿಹಾಸದಲ್ಲಿತ್ತು. ಅದೇ ದ್ರಾಕ್ಷಾರಸ ವೈನ್‌ ಎಂಬ ಹೆಸರಿನೊಂದಿಗೆ ಆಧುನಿಕ ಜಗತ್ತಿನಲ್ಲಿ ಹೆಸರಾಗಿದೆ. ಇದೀಗ...

  • ಧಾರವಾಡ: ಕೃಷಿ ವಿಶ್ವವಿದ್ಯಾಲಯಗಳು ರೈತರ ಜೊತೆ ಕೃಷಿ ಅಭಿವೃದ್ಧಿಗೆ ಜಂಟಿ ಪ್ರಯೋಗ ಮಾಡುವುದು ಹಾಗೂ ಕೃಷಿ ಪದವೀಧರರು ಹೊಲಗಳಿಗೆ ಮರಳಿ ಆಧುನಿಕ ಕೃಷಿ ಮಾಡಿದರೆ...

ಹೊಸ ಸೇರ್ಪಡೆ