ಪ್ರಮೋದ್ ಮತಾಲಿಕ್ ಗೆ ಜೀವ ಬೆದರಿಕೆ ಸಂದೇಶ: ದೂರು ದಾಖಲು
Team Udayavani, Dec 1, 2022, 10:20 PM IST
ಧಾರವಾಡ: ರಾಜ್ಯ ಸರ್ಕಾರ 10 ಮುಸ್ಲಿಂ ಕಾಲೇಜುಗಳಿಗೆ ಅನುಮತಿ ಕೊಡಲು ಮುಂದಾಗಿರುವ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಸಂದೇಶವೊಂದು ಬಂದಿದೆ.
ಮೊಬೈಲ್ ನಂಬರ್ನಿಂದ ವಾಟ್ಸಪ್ ವಾಯ್ಸ್ ಮೆಸೇಜ್ ಒಂದು ಬಂದಿದ್ದು, ಇದರಲ್ಲಿ ಆ ವ್ಯಕ್ತಿ ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ಮೇಲೆ ಧಾರವಾಡದ ಉಪನಗರ ಠಾಣೆಯಲ್ಲಿ ಮುತಾಲಿಕ್ ಅವರು ದೂರು ದಾಖಲಿಸಿದ್ದಾರೆ.
ಈ ಹಿಂದೆ ಮಸಿ ಬಳಿಸಿಕೊಂಡಿರುವೆ. ಇನ್ನು ಮೇಲಾದರೂ ನಮ್ಮ ಸಮುದಾಯದ ಬಗ್ಗೆ ಮಾತನಾಡಬೇಡ. ನಮ್ಮ ಸಮುದಾಯದ ಬಗ್ಗೆ ಮಾತನಾಡೋಕೆ ನೀನು ಯಾರು ಎಂದು ಅಶ್ಲೀಲ ಪದಗಳನ್ನು ಬಳಕೆ ಮಾಡಿ ಮುತಾಲಿಕ್ಗೆ ಆ ವ್ಯಕ್ತಿ ಬೆದರಿಕೆ ಹಾಕಿದ್ದಾನೆ.
ಫೋನ್ ನಂಬರ್ ಮೇಲೆ ತನಿಖೆ ನಡೆಸುವಂತೆ ಮುತಾಲಿಕ್ ಅವರು ಗುರುವಾರ ದೂರು ದಾಖಲು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?
ನಿನ್ನೆ ರಾತ್ರಿಯೇ ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ
ಎಂ.ಬಿ.ಪಾ- ಪರಂ ಗರಂ: ಕಾಂಗ್ರೆಸ್ ಪ್ರಚಾರ ಸಮಿತಿ – ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪರಂ ರಾಜೀನಾಮೆ ವದಂತಿ
ಜನಪ್ರಿಯತೆಗೆ ಚಿತ್ತ, ಸಂಪನ್ಮೂಲ ಎತ್ತ
ಟ್ರಾಫಿಕ್ ದಂಡ ಪಾವತಿಗೆ ಭರ್ಜರಿ ರಿಯಾಯಿತಿ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಸೂಕ್ತ ಸ್ಥಳಾವಕಾಶ ನೀಡಿದರೆ ರಬಕವಿ ಬನಹಟ್ಟಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ: ಮುನೇನಕೊಪ್ಪ
ಆರ್ಹಾಳ: ಭೂಮಿ ಪೋಡಿ ಮುಕ್ತ ಮಾಡದಿದ್ದರೆ ಮತದಾನ ಬಹಿಷ್ಕಾರ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ
ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್ ಗೋಲ್ಡ್ ಕಾಯಿನ್ ರೆಸಿಪಿ