ಬೇಸಿಗೆ ದಾಹ ನಿವಾರಣೆಗೆ ಆದ್ಯತೆ

ಪೈಪ್‌ಲೈನ್‌ ಅಳವಡಿಕೆ ಕಾರ್ಯ ಹಾಗೂ ನಲ್ಲಿಗಳ ಜೋಡಣೆ ಮುಕ್ತಾಯದ ಹಂತದಲ್ಲಿದೆ

Team Udayavani, Jan 1, 2022, 5:31 PM IST

ಬೇಸಿಗೆ ದಾಹ ನಿವಾರಣೆಗೆ ಆದ್ಯತೆ

ಅಳ್ನಾವರ: ಪಟ್ಟಣದ ಜನತೆಗೆ ಬೇಸಿಗೆಯಲ್ಲಿ ಕುಡಿವ ನೀರಿನ ತೊಂದರೆ ಆಗದ ಹಾಗೆ ನೋಡಿಕೊಳ್ಳಲು ಶುಕ್ರವಾರ ನಡೆದ ಪಪಂ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಯಿತು. ನೀರು ಸರಬರಾಜು ವಿಭಾಗದ ಅಧಿಕಾರಿ ದೀಪಕ ಕಿತ್ತೂರ ಮಾತನಾಡಿ, ಸದ್ಯ ಕುಡಿಯುವ ನೀರಿನ ಮೂಲವಾದ ಡೌಗಿ ನಾಲಾ ಹಳ್ಳದಲ್ಲಿ ಸಾಕಷ್ಟು ನೀರಿನ ಸಂಗ್ರಹ ಇದೆ. ಇನ್ನೂ 45 ದಿನ ಸಾಕಾಗುವಷ್ಟು ನೀರು ಇದೆ. ಸಮೀಪದ ಹೂಲಿಕೇರಿ ಕೆರೆಯ ನೀರಿನ ಹರಿವು ನಿರಂತರ ಬರುತ್ತಿದೆ.

ಬಾಳಗುಂದ ಭಾಗದಿಂದ ಕೂಡಾ ನೀರಿನ ಹರಿವು ಇದೆ. ಮುಂಜಾಗೃತಾ ಕ್ರಮವಾಗಿ ಬೋರ್‌ವೆಲ್‌ಗ‌ಳನ್ನು ದುರಸ್ತಿ ಮಾಡಿಸಿಟ್ಟುಕೊಳ್ಳಲಾಗುವುದು ಎಂದರು. ಮುಂದಿನ ಸಭೆಯಲ್ಲಿ ಆಗಿನ ಪರಿಸ್ಥಿತಿ ಅವಲೋಕಿಸಿ ಕ್ರಮ ಜರುಗಿಸಲು ಸಭೆ ನಿರ್ಣಯಿಸಿತು. ಕರ್ನಾಟಕ ಜಲ ಮಂಡಳಿ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತ ರವಿಕುಮಾರ ಮಾತನಾಡಿ, ಈ ಭಾಗದ ಜನರ ಬಹು ವರ್ಷದ ಬೇಡಿಕೆಯಾದ ಕಾಳಿ ನದಿಯಿಂದ ನೀರು ತರುವ ಯೋಜನೆ ಕಾಮಗಾರಿ ಭರದಿಂದ ನಡೆದಿದೆ. ಮಾರ್ಚ್‌ ಅಂತ್ಯದ ವೇಳೆಗೆ ಪೂರ್ಣಗೊಳಿಸುವ ಮೂಲಕ ಜನರಿಗೆ ಶುದ್ಧ ನೀರು ನೀಡುವ ಉದ್ದೇಶ ಇದೆ.

ಜಾವಳ್ಳಿಯಲ್ಲಿ ನಿರ್ಮಿಸುತ್ತಿರುವ ನೀರು ಶುದ್ಧೀಕರಣ ಘಟಕ ಆಧುನಿಕ ಪದ್ಧತಿಯಲ್ಲಿ ನಿರ್ಮಾಣ ಆಗುತ್ತಿದ್ದು, ಮುಕ್ತಾಯದ ಹಂತದಲ್ಲಿದೆ. ಜಾಕ್‌ ವೆಲ್‌ ಕಾಮಗಾರಿ, ಪೈಪ್‌ಲೈನ್‌ ಅಳವಡಿಕೆ ಕಾರ್ಯ ಹಾಗೂ ನಲ್ಲಿಗಳ ಜೋಡಣೆ ಮುಕ್ತಾಯದ ಹಂತದಲ್ಲಿದೆ. ಪೈಪ್‌ಲೈನ್‌ ಅಳವಡಿಕೆಗೆ ಅಗೆದಿರುವ ರಸ್ತೆ ದುರಸ್ತಿ ಕೆಲಸ ಕೈಗೊಳ್ಳಲಾಗುವುದು ಎಂದರು.

ಕಾಳಿ ನದಿಯಿಂದ ನೀರು ತರುವ ಯೋಜನೆಯ ಕಾಮಗಾರಿ ಸದ್ಯದ ಪರಿಸ್ಥಿತಿ ನೋಡಲು ಜ. 6ರಂದು ಕಾಮಗಾರಿ ಸ್ಥಳಕ್ಕೆ ಪಟ್ಟಣ ಪಂಚಾಯ್ತಿ ಸರ್ವ ಸದಸ್ಯರು, ಅಧಿಕಾರಿಗಳ ನಿಯೋಗ ತೆರಳಲು ತೀರ್ಮಾನಿಸಲಾಯಿತು. ಕಟ್ಟಿಗೆ ನಾಡಿಗೆ ಸ್ವಾಗತ ಎಂದು ಸೂಚಿಸುವ ನಾಮಫಲಕ ಅಳವಡಿಕೆ, ನೀರು ಶುದ್ಧೀಕರಣ ಘಟಕಗಳ ನಿರ್ವಹಣೆ, ಆಜಾದ್‌ ರಸ್ತೆಯಲ್ಲಿ ನಿತ್ಯ ನಡೆಯುವ ತರಕಾರಿ ಮಾರುಕಟ್ಟೆಯನ್ನು ಪಟ್ಟಣ ಪಂಚಾಯ್ತಿ ಹಳೆಯ ಕಟ್ಟಡ ತೆರವು ಮಾಡಿದ ಜಾಗೆಗೆ ಸ್ಥಳಾಂತರ, ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್‌ ಸಂಪರ್ಕ, ಮಾಂಸ ವ್ಯಾಪಾರ ಮಾಡಲು ಲೈಸೆನ್ಸ್‌ ನೀಡುವ ವಿಚಾರ, 15ನೇ ಹಣಕಾಸು ಯೋಜನೆಯಡಿ ಕರೆಯಲಾದ ಟೆಂಡರ್‌ ಕಾಮಗಾರಿ ಮಂಜೂರಿ ನೀಡುವ ಬಗ್ಗೆ ಚರ್ಚಿಸಲಾಯಿತು.

ಅಧ್ಯಕ್ಷೆ ಮಂಗಳಾ ರವಳಪ್ಪನವರ, ಉಪಾಧ್ಯಕ್ಷ ನದೀಮ ಕಾಂಟ್ರಾಕ್ಟರ್‌, ಸ್ಥಾಯಿ ಸಮಿತಿ ಅಧ್ಯಕ್ಷ ರಾಜು ಯಲಕಪಾಟಿ, ಸದಸ್ಯರಾದ ಜೈಲಾನಿ ಸುದರ್ಜಿ, ಕೇಶವ ಗುಂಜೀಕರ, ಮಧು ಬಡಸ್ಕರ್‌, ಛಗನಲಾಲ ಪಟೇಲ, ರಮೇಶ ಕುನ್ನೂರಕರ, ತಮೀಮ ತೇರಗಾಂವ, ಯಲ್ಲಾರಿ ಹುಬ್ಲೀಕರ, ಯಲ್ಲಪ್ಪ ಹೂಲಿ, ನೇತ್ರಾವತಿ ಕಡಕೋಳ, ರೇಶ್ಮಿ ತೇಗೂರ, ಶಾಲೆಟ್‌ ಬೆರೆಟ್ಟೊ, ಭಾಗ್ಯವತಿ ಕುರುಬರ, ಸುನಂದಾ ಕಲ್ಲು ಹಾಗೂ ನಾಮ ನಿರ್ದೇಶನ ಸದಸ್ಯರಾದ ಪ್ರತಾಪ ಕಲಾಲ, ಅಶೋಕ ಬರಗುಂಡಿ, ಅನ್ನಪೂರ್ಣಾ ಕೌಜಲಗಿ, ಮುಖ್ಯಾಧಿಕಾರಿ ಪಿ.ಕೆ. ಗುಡದಾರಿ, ನಾಗರಾಜ ಗುರ್ಲಹೂಸುರ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.