ಬಿಆರ್‌ಟಿಎಸ್‌ ರಸ್ತೆಯಲ್ಲಿ ಖಾಸಗಿ ವಾಹನ ನಿಷೇಧ

Team Udayavani, Jun 28, 2019, 1:15 PM IST

ಧಾರವಾಡ: ಇಲ್ಲಿಯ ಕೋರ್ಟ್‌ ವೃತ್ತದಲ್ಲಿರುವ ಬಿಆರ್‌ಟಿಎಸ್‌ ಬಸ್‌ ನಿಲ್ದಾಣ ಬಳಿಯ ಕಾರಿಡಾರ್‌ನ್ನು ಬಿಆರ್‌ಟಿಎಸ್‌ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌ ಗುರುವಾರ ವೀಕ್ಷಿಸಿದರು.

ಧಾರವಾಡ: ಹು-ಧಾ ಅವಳಿನಗರಗಳ ಮಧ್ಯೆ ಬಿಆರ್‌ಟಿಎಸ್‌ ಬಸ್‌ ಸಂಚಾರಕ್ಕಾಗಿ ನಿರ್ಮಿಸಿರುವ ವಿಶೇಷ ಕಾರಿಡಾರ್‌ ರಸ್ತೆಯಲ್ಲಿ ಖಾಸಗಿ ವಾಹನಗಳು ಸಂಚರಿಸದಂತೆ ಭದ್ರತಾ ಸಿಬ್ಬಂದಿಗಳನ್ನು ನೇಮಿಸಿ ಜು.1ರಿಂದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಬಿಆರ್‌ಟಿಎಸ್‌ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌ ಹೇಳಿದರು.

ನಗರದಲ್ಲಿ ಗುರುವಾರ ಬಿಆರ್‌ಟಿಎಸ್‌ ಕಾರಿಡಾರ್‌ ರಸ್ತೆ ಪರಿಶೀಲನೆ ಸಂದರ್ಭದಲ್ಲಿ ಕೋರ್ಟ್‌ ವೃತ್ತದಲ್ಲಿರುವ ಬಿಆರ್‌ಟಿಎಸ್‌ ಬಸ್‌ ನಿಲ್ದಾಣದಲ್ಲಿ ಅವರು ಮಾತನಾಡಿದರು.

ಧಾರವಾಡ ಮಿತ್ರ ಸಮಾಜದಿಂದ ಹುಬ್ಬಳ್ಳಿಯವರೆಗೆ ಬಿಆರ್‌ಟಿಎಸ್‌ ಬಸ್‌ ಸಂಚಾರಕ್ಕಾಗಿ 24ಕಿಮೀ ರಸ್ತೆ ನಿರ್ಮಿಸಲಾಗಿದೆ. 31 ಬಸ್‌ ನಿಲ್ದಾಣ ಆರಂಭಿಸಲಾಗಿದೆ.21 ಜಂಕ್ಷನ್‌ ಮಾಡಲಾಗಿದೆ. ಬಸ್‌ಗಳ ಸುಗಮ ಸಂಚಾರಕ್ಕಾಗಿ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಜರುಗಿಸಲು 70 ಹೋಮ್‌ಗಾರ್ಡ್‌, 120 ಸೆಕ್ಯೂರಿಟಿ ಗಾರ್ಡ್‌ ಮತ್ತು ಪೊಲೀಸ್‌ ಕಮಿಷನರೇಟ್ದಿಂದ 70 ಪೊಲೀಸ್‌ ಪೇದೆಗಳನ್ನು ನೇಮಿಸಲಾಗಿದೆ. ಬಸ್‌ ನಿಲ್ದಾಣ ಸೇರಿದಂತೆ ರಸ್ತೆಯುದ್ದಕ್ಕೂ ಇರುವ ಪ್ರಮುಖ ಸ್ಥಳಗಳಲ್ಲಿ ಸುಮಾರು 68 ಸಿಸಿ ಕ್ಯಾಮರಾ ಅಳವಡಿಸಲಾಗಿದೆ ಎಂದರು.

ನಗರ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್‌ ಆಯುಕ್ತ ಡಾ| ಶಿವಕುಮಾರ ಗುಣಾರೆ, ಎಸಿಪಿ ಎಸ್‌.ಎಂ.ಸಂದಿಗವಾಡ, ಸಿಪಿಐ ಮುರಗೇಶ ಚನ್ನಣ್ಣವರ, ಎನ್‌ಡಬ್ಲೂಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ವಿಶ್ವಜ್ಞ, ಸಾರಿಗೆ ಅಧಿಕಾರಿ ಕೆಂಪಣ್ಣ ಗುಡೆನ್ನವರ, ಬಿಆರ್‌ಟಿಎಸ್‌ನ ಉಪ ಪ್ರಧಾನ ವ್ಯವಸ್ಥಾಪಕ ಗಣೇಶ ರಾಠೊಡ ಸೇರಿದಂತೆ ಬಿಆರ್‌ಟಿಎಸ್‌, ಎನ್‌ಡಬ್ಲೂಕೆಎಸ್‌ಆರ್‌ಟಿಸಿ ಮತ್ತು ಪೊಲೀಸ್‌ ಇಲಾಖೆ ಅಧಿಕಾರಿಗಳು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ