ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

Team Udayavani, Jan 14, 2020, 10:49 AM IST

huballi-tdy-2

ಕುಂದಗೋಳ: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಎನ್‌ಆರ್‌ಸಿ ಹಾಗೂ ಸಿಎಎ ಕಾಯ್ದೆಯಿಂದಾಗಿ ಮುಸ್ಲಿಮರಿಗೆ ಅನಾನುಕೂಲತೆ ಹಾಗೂ ಅನ್ಯಾಯವಾಗುವ ಸಾಧ್ಯತೆ ಹೆಚ್ಚಾಗಿದೆ. ಜಾತ್ಯತೀತ ರಾಷ್ಟ್ರದಲ್ಲಿ ಜಾತಿ-ಧರ್ಮಗಳ ಮಧ್ಯ ವೈಮನಸ್ಸು ಉಂಟಾಗುತ್ತದೆ. ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯಬೇಕೆಂದು ಮುಸ್ಲಿಂ ಧರ್ಮಗುರು ತಾಜುದ್ದೀನ ಪೀರಾ ಒತ್ತಾಯಿಸಿದರು.

ಪಟ್ಟಣದ ಶಾದಿಮಹಲ್‌ನಲ್ಲಿ ತಾಲೂಕು ಅಂಜುಮನ್‌ ಇಸ್ಲಾಂ ಕಮಿಟಿಯವರು ಎನ್‌ ಆರ್‌ಸಿ ಹಾಗೂ ಸಿಎಎ ರದ್ದುಗೊಳಿಸುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನಾಸಮಾವೇಶದಲ್ಲಿ ಅವರು ಮಾತನಾಡಿದರು. ದೇಶದ ಸಂವಿಧಾನವೇ ಪರಮೋಚ್ಚವಾಗಿದ್ದು, ಈ ಸಂವಿಧಾನದಡಿ ಎಲ್ಲ ಸಮುದಾಯದವರು ಬಾಳುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಒಂದು ಧರ್ಮಯನ್ನು ತುಳಿದು ಇನ್ನೊಂದು ಧರ್ಮವನ್ನು ಮೇಲೆತ್ತುವ ಹುನ್ನಾರ ನಡೆಸಿದೆ. ಇದರಿಂದ ಮುಸ್ಲಿಂ ಸಮುದಾಯವು ತುಳಿತಕ್ಕೆ ಒಳಗಾಗುತ್ತದೆ. ಕೂಡಲೇ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಕಾಯ್ದೆಯನ್ನು ಹಿಂಪಡೆಯುವಂತೆ ಮಾಡಬೇಕು. ಇಲ್ಲವಾದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದರು.

ಮಾಜಿ ಸಚಿವ ಎ.ಎಂ. ಹಿಂಡಸಗೇರಿ ಮಾತನಾಡಿ, ನಮ್ಮ ಸಮುದಾಯದಲ್ಲಿ 46ರಷ್ಟು ಅನಕ್ಷರಸ್ಥರು ಇದ್ದು, ಈ ಕಾಯ್ದೆಯಿಂದ ದಾಖಲಾತಿಗಳನ್ನು ಕೇಳುತ್ತಾರೆ. ನಿತ್ಯವು ಕೂಲಿನಾಲಿ ಮಾಡುತ್ತಾ ಬದುಕುವ ನಮ್ಮ ಸಮುದಾಯವು ದಾಖಲಾತಿ ಒದಗಿಸದಿದ್ದರೆ ಪೌರತ್ವವನ್ನೇ ಪಡೆಯುವುದಿಲ್ಲ. ಕೂಡಲೇ ಕೇಂದ್ರ ಸರ್ಕಾರ ಕಾಯ್ದೆ ಹಿಂಪಡೆಯದಿದ್ದರೆ ದೇಶದಲ್ಲಿ 15 ಕೋಟಿಗೂ ಹೆಚ್ಚು ನಾಗರಿಕರು ಅನ್ಯಾಯಕ್ಕೆ ಒಳಗಾಗುತ್ತಾರೆ ಎಂದರು.

ಮಾಜಿ ಶಾಸಕ ಎನ್‌.ಎಚ್‌. ಕೋನರಡ್ಡಿ ಮಾತನಾಡಿ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದ್ದು ವಿದ್ಯಾವಂತರು ಉದ್ಯೋಗವಿಲ್ಲದೆ ಅಲೆಯುತ್ತಿದ್ದಾರೆ. ಉದ್ಯೋಗ ಸೃಷ್ಟಿಸುವ ಬದಲು ಇಂತಹ ನಿರುಪಯುಕ್ತ ಕಾಯ್ದೆಗಳನ್ನು ಜಾರಿಗೆ ತರುತ್ತಿದ್ದಾರೆ. ಸಿಎಎ ವಿರೋಧಿ ಹೋರಾಟವನ್ನು ಜೆಡಿಎಸ್‌ ಪಕ್ಷ ಬೆಂಬಲಿಸಲಿದೆ ಎಂದರು.

ಮುಖಂಡರಾದ ಅರವಿಂದ ಕಟಗಿ, ಶಿವಾನಂದ ಬೆಂತೂರ, ಅಜುಮನ್‌ ಕಮಿಟಿ ಅಧ್ಯಕ್ಷ ರಾಯೇಸಾಬ ಕಳ್ಳಿಮನಿ, ಮುತ್ತು ಶಿವಳ್ಳಿ, ಅನಿಲಕುಮಾರ ಪಾಟೀಲ, ಚಂದ್ರಶೇಖರ ಜುಟ್ಟಲ, ಶಾಕೀರ ಸನದಿ, ಪೀತಾಂಬರಪ್ಪ ಬೀಳಾರ ಮಾತನಾಡಿದರು. ಶಾಸಕಿ ಕುಸುಮಾವತಿ ಶಿವಳ್ಳಿ, ಹಜರತಲಿಜೋಡಮನಿ, ಜಿ.ಡಿ. ಘೋರ್ಪಡೆ, ವಿ.ಡಿ. ಹಿರೇಗೌಡ್ರ, ಎಚ್‌.ಎಲ್‌. ನದಾಫ, ರಾಮನಗೌಡ ಪಾಟೀಲ, ದಯಾನಂದ ಕುಂದೂರ, ಬಾಬಾಜಾನ ಮಿಶ್ರಿಕೋಟಿ, ಕಹಿಂ ನಾಲಬಂದ, ಬಾಬಾಜಾನ ಮುಲ್ಲಾ, ಹುಲಗೂರ, ಸುರೇಶ ಗಂಗಾಯಿ, ಎ.ಬಿ. ಉಪ್ಪಿನ, ಬೀರಪ್ಪ ಕುರಬರ, ಸಕ್ರು ಲಮಾಣಿ ಇದ್ದರು. ಪ್ರತಿಭಟನೆಗೆ ತಾಲೂಕಾ ಕಾಂಗ್ರೆಸ್‌ ಸಮಿತಿಯವರೂ ಬೆಂಬಲ ವ್ಯಕ್ತಪಡಿಸಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.