ಉಚಿತ ಲ್ಯಾಪ್ಟಾಪ್ಗಾಗಿ ನಿರಶನ
Team Udayavani, Mar 9, 2019, 11:43 AM IST
ಧಾರವಾಡ: ಲ್ಯಾಪ್ಟಾಪ್ ಹಾಗೂ ಕಿರು ಪ್ರಬಂಧಕ್ಕೆ ಪ್ರೋತ್ಸಾಹ ಧನ ನೀಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕವಿವಿಯ ಸಂಶೋಧನಾ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ನಗರದ ಡಿಸಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಕವಿವಿಯಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ಕೈಗೊಂಡು, ರಾಜ್ಯಪಾಲರು, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು. ಇದಲ್ಲದೇ ಉನ್ನತ ಶಿಕ್ಷಣ ಸಚಿವಾಲಯ ಕಾರ್ಯದರ್ಶಿಗಳಿಗೆ ಹಾಗೂ ಕವಿವಿ ಕುಲಪತಿ ಅವರಿಗೂ ಪ್ರತ್ಯೇಕ ಮನವಿ ಸಲ್ಲಿಸಲಾಯಿತು.
ನೋಂದಣಿ ಮಾಡಿಸಿದ ಎಲ್ಲಾ ಸಂಶೋಧನಾ ವಿದ್ಯಾರ್ಥಿಗಳಿಗೆ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಬೇಕು. 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೊಜೆಕ್ಟ್ ವರ್ಕ್ ಭತ್ತೆಯನ್ನು ಒಂದು ಸಾವಿರ ರೂಪಾಯಿಗೆ ಏರಿಸಬೇಕು. ಪ್ರತಿಯೊಬ್ಬ ಸಂಶೋಧನಾ ವಿದ್ಯಾರ್ಥಿಯ ಪ್ರತಿ ತಿಂಗಳು ವಿದ್ಯಾರ್ಥಿ ವೇತನವನ್ನು ಹತ್ತು ಸಾವಿರ ರೂ.ಗಳಿಗೆ ಏರಿಸಬೇಕು ಎಂದು ಆಗ್ರಹಿಸಲಾಯಿತು.
ಈ ಕುರಿತು ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈಗಲಾದರೂ ಎಚ್ಚೆತ್ತುಕೊಂಡು ಸರಕಾರವು ಒಂದು ವಾರದೊಳಗಾಗಿ ಈಡೇರಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಲಾಯಿತು. ಸಂಘದ ಅಧ್ಯಕ್ಷ ಮಂಜುನಾಥ ಹೊಂಗಲದ, ಪ್ರಧಾನ ಕಾರ್ಯದರ್ಶಿ ಹನುಮಂತ ಬಂಟನೂರ ಪ್ರತಿಭಟನೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ