ಸಾಸ್ವಿ ಹಳ್ಳಿ ಗ್ರಾಪಂ ಎದುರು ಪ್ರತಿಭಟನೆ

Team Udayavani, Nov 18, 2019, 10:31 AM IST

ಅಣ್ಣಿಗೇರಿ: ಸಾಸ್ವಿಹಳ್ಳಿ ಹಾಗೂ ಕೊಂಡಿಕೊಪ್ಪ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಹಾಗೂ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಸಾಸ್ವಿಹಳ್ಳಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.

ಕೊಂಡಿಕೊಪ್ಪ ಗ್ರಾಮದ ಬಡವರಿಗೆ ಆಶ್ರಯ ಮನೆ ವಿತರಣೆಯಲ್ಲಿ ವಿಳಂಬ ಹಾಗೂ ಅಂಬೇಡ್ಕರ್‌ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸಲು ವಿಳಂಬ ಮಾಡುತ್ತಿರುವುದನ್ನು ಪ್ರತಿಭಟನಾಕಾರರು ಖಂಡಿಸಿದರು.

ಈಗಾಗಲೇ ಅರ್ಹ ಫಲಾನುಭವಿಗಳ ಪಟ್ಟಿ ಸಿದ್ಧವಾಗಿದ್ದರೂ ಮನೆ ಹಾಗೂ ಹಕ್ಕುಪತ್ರಗಳ ವಿತರಣೆಯಲ್ಲಿ ವಿಳಂಬ ಮಾಡಲಾಗುತ್ತಿದೆ. ಅಂಬೇಡ್ಕರ್‌ ಕಾಲೋನಿಯಲ್ಲಿ ಕುಡಿಯುವ ನೀರು ಹಾಗೂ ಚರಂಡಿ ವ್ಯವಸ್ಥೆ ಇಲ್ಲ. ಸರಿಯಾದ ವಿದ್ಯುತ್‌ ದೀಪಗಳಿಲ್ಲ ಹಾಗೂ ಇತರೆ ಮೂಲಭೂತ ಸೌಕರ್ಯ ಒದಗಿಸುತ್ತಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಮುಖಂಡರಾದ ಹನುಮಂತಪ್ಪ ಮುಂದಿನಮನಿ ಆರೋಪಿಸಿದರು.

2016ರಲ್ಲಿ ಸಾಸ್ವಿಹಳ್ಳಿ ಗ್ರಾಪಂ ಕೊಂಡಿಕೊಪ್ಪದ ಅಣ್ಣಪ್ಪ ಉಪ್ಪಿನವರ 1.23 ಎಕರೆ ಜಮೀನು ಖರೀದಿಸಿ ಆಶ್ರಯ ಮನೆಗಳನ್ನು ನಿರ್ಮಿಸಲು ನಿರ್ಧರಿಸಲಾಗಿತ್ತು. ಮೊನ್ನೆ ನಡೆದ ಗ್ರಾಮಸಭೆಯಲ್ಲಿ ಫಲಾನುಭವಿಗಳ ಆಯ್ಕೆಯೂ ನಡೆದಿತ್ತು ಆದರೆ ಫಲಾನುಭವಿಗಳಿಗೆ ಮನೆ ವಿತರಿಸುವ ಮುನ್ನವೇ ಹಿಂದಿನ ಆಡಳಿತ ಮಂಡಳಿ ನಿರ್ಗಮಿಸಿತು. ಇಂದಿನ ಆಡಳಿತ ಮಂಡಳಿಯವರು ಇನ್ನೂವರೆಗೆ ಮನೆ ವಿತರಿಸಿಲ್ಲ ಎಂದು ಆರೋಪಿಸಿದರು.

ಸ್ಥಳಕ್ಕೆ ಅಣ್ಣಿಗೇರಿ ತಹಶೀಲ್ದಾರ್‌ ಕೊಟ್ರೇಶ್‌ ಗಾಳಿ ಆಗಮಿಸಿ ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ತಾಪಂ ಸಹಾಯಕ ನಿರ್ದೇಶಕರಾದ ಹಕಾರಿ ಮೇಡಂ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಕಫೀಲಾ ಯಲವಗಿ, ಉಪ ತಹಶೀಲ್ದಾರ್‌ ಸಂತೋಷ್‌ ಅಸ್ಕಿ, ಮೀನಾಕ್ಷಿ ಭಜಂತ್ರಿ, ಆರಕ್ಷಕ ಠಾಣೆ ಅಧಿಕಾರಿಗಳಾದ ಪಾಟೀಲ್‌ ಹಾಗೂ ನಿಂಗಪ್ಪ ತಳಗೇರಿ ಇದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಾರಿಗೆ ತಂದಿರುವ ಫಾಸ್ಟಾಗ್‌ ವ್ಯವಸ್ಥೆ ವಾಹನ ಚಾಲಕ-ಮಾಲೀಕರಲ್ಲಿ ಗೊಂದಲಕ್ಕೆ ಕಾರಣವಾಗಿದೆ ಎಂದೇ ಹೇಳಬೇಕಾಗುತ್ತದೆ....

  • ಶಬರಿಮಲೆ: ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಯಾತ್ರೆ ಆರಂಭವಾಗಿ 28 ದಿನಗಳು ಪೂರೈಸಿದ್ದು, ದೇಗುಲದ ಆದಾಯವು 104 ಕೋಟಿ ರೂ. ದಾಟಿದೆ ಎಂದು ತಿರುವಾಂಕೂರು...

  • ಮುಂಬಯಿ: 'ಶೋಲೆ,' 'ಗರಂ ಹವಾ', 'ತ್ರಿಶೂಲ್‌' ಖ್ಯಾತಿಯ, ಹಿಂದಿ ಸಿನೆಮಾ ಕ್ಷೇತ್ರದ ಹಿರಿಯ ನಟಿ ಗೀತಾ ಸಿದ್ಧಾರ್ಥ್ ನಿಧನ ಹೊಂದಿದ್ದಾರೆ. ಸಿನೆಮಾ ಮತ್ತು ಟಿವಿ ಕಲಾವಿದರ...

  • ಕಾಸರಗೋಡು ಜಿಲ್ಲೆಯ ಮಂಜೇಶ್ವರ, ಬೆಳ್ತಂಗಡಿಯ ಮಂಜೊಟ್ಟಿ ಮತ್ತು ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಐವರು ಮೃತಪಟ್ಟಿದ್ದಾರೆ....

  • ನೋಯ್ಡಾ: ನೋಯ್ಡಾದಲ್ಲಿ ರಸ್ತೆ ಬದಿಯಲ್ಲಿ ಬಿರಿಯಾನಿ ಮಾರುತ್ತಿದ್ದ ಯುವಕನ ಮೇಲೆ ಜಾತಿ ಹೆಸರಿನಲ್ಲಿ ನಿಂದಿಸಿ, ಥಳಿಸಲಾಗಿದೆ. ಈ ಬಗೆಗಿನ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...