Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

ಹೆದ್ದಾರಿ ಪೂರ್ಣವಾದ ಬಳಿಕ ಕೇವಲ 7 ಗಂಟೆಗಳಲ್ಲಿ 700 ಕಿ.ಮೀ. ಕ್ರಮಿಸಬಹುದು; 2028ರಲ್ಲಿ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ

Team Udayavani, May 26, 2024, 7:50 AM IST

Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ

ಹುಬ್ಬಳ್ಳಿ: ಹೆದ್ದಾರಿ ಅಭಿವೃದ್ಧಿಗೆ ರಹದಾರಿ ನಿರ್ಮಿಸಿರುವ ಕೇಂದ್ರ ಸರಕಾರವು ಕರ್ನಾಟಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಲ್ಯಾಣ, ಉತ್ತರ ಕರ್ನಾಟಕ ಮಾರ್ಗವಾಗಿ ಬೆಂಗಳೂರಿನಿಂದ ಪುಣೆಗೆ ಸಂಪರ್ಕ ಕಲ್ಪಿಸುವ ಯೋಜನೆಗೆ ಹೊಸ ಸರಕಾರ ರಚನೆಯಾಗುತ್ತಿದ್ದಂತೆ ಚಾಲನೆ ನೀಡಲು ಸಿದ್ಧತೆ ನಡೆಸಿದೆ. ರಾಷ್ಟ್ರೀಯ ಹೆದ್ದಾರಿ 4ಕ್ಕೆ ಪರ್ಯಾಯವಾಗಿರುವ ಈ ಹೆದ್ದಾರಿಯಿಂದ ಉಭಯ ನಗರಗಳ ಅಂತರ 95 ಕಿ.ಮೀ. ತಗ್ಗಲಿದ್ದು, ಕೇವಲ 7 ಗಂಟೆಗಳಲ್ಲಿ 700 ಕಿ.ಮೀ. ಕ್ರಮಿಸಬಹುದಾಗಿದೆ.

12 ಪಥ ರಸ್ತೆ
ಭಾರತ್‌ ಮಾಲಾ-2 ಯೋಜನೆಯಡಿ ಬೆಂಗಳೂರು-ಪುಣೆ ಗ್ರೀನ್‌ಫೀಲ್ಡ್‌ ಎಕ್ಸ್‌ಪ್ರೆಸ್‌ ವೇಗೆ 50 ಸಾವಿರ ಕೋಟಿ ರೂ. ಖರ್ಚಾಗಲಿದೆ. ಭಾರತೀಯ ರಾ.ಹೆ.ಪ್ರಾಧಿಕಾರ ನಿರ್ಮಾಣ ಹೊಣೆ ಹೊತ್ತಿದ್ದು, 2028ರಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. 12 ಪಥ ರಸ್ತೆ ಇದಾಗಿದ್ದು, ಸದ್ಯ 8 ಪಥಗಳ ರಸ್ತೆ ನಿರ್ಮಾಣವಾಗಲಿದೆ. ಇದಕ್ಕಾಗಿ 250 ಮೀಟರ್‌ ಅಗಲದ ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ.

ಕರ್ನಾಟಕದ 9 ಜಿಲ್ಲೆಗಳು
ಮಧ್ಯ, ಕಲ್ಯಾಣ ಹಾಗೂ ಉತ್ತರ ಕರ್ನಾಟಕದ 9, ಮಹಾರಾಷ್ಟ್ರದ ಮೂರು ಸಹಿತ ಒಟ್ಟು 12 ಜಿಲ್ಲೆಗಳಲ್ಲಿ ಈ ಹೆದ್ದಾರಿ ಹಾದು ಹೋಗಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ತುಮಕೂರು ಜಿಲ್ಲೆಯ ಕೊರಟಗೆರೆ, ಮಧುಗಿರಿ, ಚಿತ್ರದುರ್ಗ, ದಾವಣಗೆರೆಯ ಜಗಳೂರು, ವಿಜಯನಗರದ ಕೂಡ್ಲಿಗಿ, ಕೊಪ್ಪಳದ ಯಲಬುರ್ಗಾ, ಗದಗ ಜಿಲ್ಲೆಯ ರೋಣ, ನರಗುಂದ, ಬಾಗಲಕೋಟೆಯ ಬಾದಾಮಿ, ಮುಧೋಳ, ಜಮಖಂಡಿ, ಬೆಳಗಾವಿ ಜಿಲ್ಲೆಯ ಅಥಣಿ ಮೂಲಕ ಹಾಯ್ದು ಮಹಾರಾಷ್ಟ್ರದ ಸತಾರಾ, ಸಾಂಗ್ಲಿ ಮಾರ್ಗವಾಗಿ ಪುಣೆಗೆ ತಲುಪಲಿದೆ.

ಎಲ್ಲಿಂದ ಆರಂಭ?
ಬೆಂಗಳೂರಿನ ಮುತಗಂಡಹಳ್ಳಿಯ ಸ್ಯಾಟ್‌ಲೆçಟ್‌ ರಿಂಗ್‌ ರಸ್ತೆಯಿಂದ ಆರಂಭವಾಗಿ ಪುಣೆಯ ಕಂಜೆÉ ಬಳಿಯ ರಿಂಗ್‌ ರಸ್ತೆಗೆ ಕೊನೆಗೊಳ್ಳಲಿದೆ. ಈ ಹೆದ್ದಾರಿ ಹಾದು ಹೋಗುವ ಜಿಲ್ಲೆಗಳಲ್ಲಿ ಕೈಗಾರಿಕಾಭಿವೃದ್ಧಿ, ಪ್ರವಾಸೋದ್ಯಮ, ರಿಯಲ್‌ ಎಸ್ಟೇಟ್‌ನಲ್ಲಿ ಗಣನೀಯ ಪ್ರಗತಿ, ಉದ್ಯೋಗಾವಕಾಶ ಸೃಷ್ಟಿಗೆ ಅನುಕೂಲವಾಗಲಿದೆ.

ಎರಡು ಏರ್‌ಸ್ಟ್ರಿಪ್‌ಗಳ ನಿರ್ಮಾಣ
ಗ್ರೀನ್‌ಫೀಲ್ಡ್‌ ಎಕ್ಸ್‌ಪ್ರೆಸ್‌ ವೇಯಲ್ಲಿ ಪ್ರತಿ ಗಂಟೆಗೆ 120 ಕಿ.ಮೀ. ವೇಗದಲ್ಲಿ ಸಂಚರಿಸಲು ಗುಣಮಟ್ಟದ ರಸ್ತೆ ನಿರ್ಮಿಸಲು ನಿರ್ಧರಿಸಲಾಗಿದೆ. ಬೆಂಗಳೂರು ಹಾಗೂ ಪುಣೆ ಸಮೀಪ 5 ಕಿ.ಮೀ. ಉದ್ದದ ಎರಡು ಏರ್‌ಸ್ಟ್ರಿಪ್‌ಗಳನ್ನು ಕೂಡ ನಿರ್ಮಿಸುವ ಯೋಜನೆ ಇದರಲ್ಲಿದೆ.

10 ನದಿಗಳ ಮೇಲೆ ಹಾದಿ
ರಾಜ್ಯದ ತುಂಗಭದ್ರಾ, ಮಲಪ್ರಭಾ, ಘಟಪ್ರಭಾ, ಕೃಷ್ಣಾ, ವೇದಾವತಿ, ಮಹಾರಾಷ್ಟ್ರದ ನೀರಾ, ಯೆರಳ, ಚಂದನಾಡಿ, ಅಗ್ರಣಿ, ಚಿಕ್ಕಹಗರ ನದಿಗಳ ಮೂಲಕ ಹಾದು ಹೋಗಲಿದೆ. 6 ಸೇತುವೆ, 55 ಮೇಲ್ಸೇತುವೆಗಳು, 22 ಇಂಟರ್‌ಚೇಂಜ್‌ಗಳು, 14 ರಾಷ್ಟ್ರೀಯ, ರಾಜ್ಯ ಹೆದ್ದಾರಿ ಕ್ರಾಸಿಂಗ್‌ ಪಾಯಿಂಟ್‌ಗಳನ್ನು ನಿರ್ಮಿಸಲಾಗುತ್ತಿದೆ.

ಈಗಿರುವ ಹೆದ್ದಾರಿ ಕಥೆ ಏನು?
ರಾಷ್ಟ್ರೀಯ ಹೆದ್ದಾರಿ 4 ಮೂಲಕ ಈಗ ಬೆಂಗಳೂರಿನಿಂದ ಪುಣೆಗೆ ಚತುಷ್ಪಥ ಸಂಪರ್ಕ ರಸ್ತೆ ಇದೆ. ಸುದೀರ್ಘ‌ 15 ಗಂಟೆಗಳ ಪ್ರಯಾಣ ಇದೆ. ಇದನ್ನು ಅಗಲಗೊಳಿಸುವುದು ಈಗ ಅನಿವಾರ್ಯ. ಆದರೆ ಅದರ ಬದಲು ಹೊಸ ಹೆದ್ದಾರಿ ನಿರ್ಮಾಣವೇ ಸೂಕ್ತ ಎಂದು ಕೇಂದ್ರ ನಿರ್ಧರಿಸಿದೆ ಎನ್ನುತ್ತಾರೆ ಎನ್‌ಎಚ್‌ಎಐ ಅಧಿಕಾರಿಗಳು.

ಪುಣೆ-ಬೆಂಗಳೂರು ಗ್ರೀನ್‌ಫೀಲ್ಡ್‌ ಯೋಜನೆಗೆ ಡಿಪಿಆರ್‌ ಸಿದ್ಧಪಡಿಸಲಾಗುತ್ತಿದೆ. 12 ಪಥ ರಸ್ತೆ ಪೈಕಿ ಸದ್ಯ 8 ಪಥಗಳನ್ನು ನಿರ್ಮಿಸಲಾಗುವುದು. 700 ಕಿ.ಮೀ. ರಸ್ತೆಯನ್ನು 7 ಗಂಟೆಗಳಲ್ಲಿ ಕ್ರಮಿಸಬಹುದು. ಕೊರಟಗೆರೆ ತಾಲೂಕು ಸಹಿತ ಕೆಲವೆಡೆ ಭೂಸ್ವಾಧೀನಕ್ಕೆ ರೈತರಿಂದ ವಿರೋಧ ವ್ಯಕ್ತವಾಗಿದೆ. ಮನವೊಲಿಕೆ ಮಾಡಲಾಗುತ್ತಿದೆ. ಹೊಸ ಸರಕಾರ ರಚನೆಯಾಗುತ್ತಿದ್ದಂತೆ ಕಾಮಗಾರಿಗೆ ಚಾಲನೆ ಸಿಗಲಿದೆ.
– ರಾಘವೇಂದ್ರ, ಎನ್‌ಎಚ್‌ಎಐ, ಗುಣಮಟ್ಟ ಪರಿವೀಕ್ಷಕ ಅಧಿಕಾರಿ

ಟಾಪ್ ನ್ಯೂಸ್

crime (2)

Loan ವ್ಯಾಜ್ಯ: ತೆಲಂಗಾಣದಲ್ಲಿ ಆದಿವಾಸಿ ಮಹಿಳೆ ಮೇಲೆ ಹಲ್ಲೆ

1-saddsad

Ram Setu ಚಿತ್ರ ಸೆರೆಹಿಡಿದ ಯುರೋಪಿಯನ್‌ ಉಪಗ್ರಹ

pinarayi

Kerala ಹೆಸರು ಕೇರಳಂ ಎಂದು ಬದಲಾಯಿಸಲು ವಿಧಾನಸಭೆ ಸಮ್ಮತಿ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

tree

Belthangady ರಸ್ತೆಗೆ ಬಿದ್ದ ಮರ; ವಾಹನಗಳಿಗೆ ಹಾನಿ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಆಕಾಶ ಮಠಪತಿ ಪ್ರಕರಣದಲ್ಲಿ 8 ಮಂದಿ ಬಂಧನ

Hubli; ಆಕಾಶ ಮಠಪತಿ ಪ್ರಕರಣದಲ್ಲಿ 8 ಮಂದಿ ಬಂಧನ

5-Kundgola

Kundgola: ಬೆನಕನಹಳ್ಳಿ ಜಲ ಜೀವನಾಡಿಗೆ ಅಸ್ವಚ್ಛತೆ ಬೇಡಿ

crime (2)

Hubballi; ಆಟೋರಿಕ್ಷಾ ಚಾಲಕರ, ಮಾಲಕರ ಸಂಘದ ಅಧ್ಯಕ್ಷ ನ ಪುತ್ರನ ಹತ್ಯೆ

Hubli; Protest demanding implementation of Dr. Sarojini Mahishi’s revised report

Hubli; ಡಾ.ಸರೋಜಿನಿ‌ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Janardhana Reddy: ಅಯೋಗ್ಯ ಜನಾರ್ದನ ರೆಡ್ಡಿ ಕ್ಷಮೆಯಾಚಿಸಲಿ; ಸಲೀಂ ಅಹ್ಮದ್‌

Janardhana Reddy: ಅಯೋಗ್ಯ ಜನಾರ್ದನ ರೆಡ್ಡಿ ಕ್ಷಮೆಯಾಚಿಸಲಿ; ಸಲೀಂ ಅಹ್ಮದ್‌

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

crime (2)

Loan ವ್ಯಾಜ್ಯ: ತೆಲಂಗಾಣದಲ್ಲಿ ಆದಿವಾಸಿ ಮಹಿಳೆ ಮೇಲೆ ಹಲ್ಲೆ

1-saddsad

Ram Setu ಚಿತ್ರ ಸೆರೆಹಿಡಿದ ಯುರೋಪಿಯನ್‌ ಉಪಗ್ರಹ

police USA

Russia; ಚರ್ಚ್‌ಗೆ ದಾಳಿ: 19 ಜನ ಸಾವು, 5 ಉಗ್ರರ ಹತ್ಯೆ

robbers

ಪ್ರವಾದಿ ನಿಂದನೆ: ಪಾಕ್‌ನಲ್ಲಿ ವ್ಯಕ್ತಿಯ ಕೊಂದ ಬಾಲಕ!

congress

ತೆಲಂಗಾಣ; ಬಿಆರ್‌ಎಸ್‌ನ 5ನೇ ಶಾಸಕ ಕಾಂಗ್ರೆಸ್‌ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.