ಕಾಳಿನದಿ ಯೋಜನೆ ಶೀಘ್ರ ಆರಂಭ


Team Udayavani, Aug 7, 2017, 11:25 AM IST

hub4.jpg

ಅಳ್ನಾವರ: ಪಟ್ಟಣದ ಜನರಿಗೆ ಕುಡಿವ ನೀರು ಪೂರೈಸುವ ಶಾಶ್ವತ ಯೋಜನೆಯಾದ ಕಾಳಿ ನದಿಯಿಂದ ನೀರು ತರುವ ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದೆಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು. ಪಟ್ಟಣದಲ್ಲಿ ರವಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಕಾಳಿ ನದಿ ಯೋಜನೆಗೆ ಸರ್ಕಾರ 72 ಕೋಟಿ ಅನುದಾನ ಬಿಡುಗಡೆಗೆ ಮಂಜೂರಾತಿ ನೀಡಿದೆ. ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಕ್ರಿಯಾ ಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸಬೇಕು. ಅನಧಿಕೃತ ನಿರ್ಮಾಣಗೊಂಡಿರುವ ಬಡಾವಣೆಗಳನ್ನು ಸಕ್ರಮಗೊಳಿಸಲು ಅಡಚಣೆಯಾಗಿರುವ ಕಾನೂನು ತೊಡಕುಗಳ ಬಗ್ಗೆ ಚರ್ಚಿಸಿದರು. 

ಆಶ್ರಯ ಯೋಜನೆಯಡಿ ನಿವೇಶನ ಒದಗಿಸಲು ಅಗತ್ಯ ಜಮೀನು ಖರೀದಿಸಲು ಸೂಕ್ತ ಭೂಮಿ ಗುರುತಿಸಿ ಮಂಜೂರಾತಿಗೆ ಪ್ರಸ್ತಾವನೆ ಕಳುಹಿಸಬೇಕು. ಭೂಮಿ ನೀಡಲು ಮುಂದಾಗುವ ಮಾಲಕರಿಗೆ ಮಾರುಕಟ್ಟೆ ದರದ ಜೊತೆಗೆ ಹೆಚ್ಚುವರಿ ಹಣವನ್ನು ಪಪಂದಿಂದ ಭರಿಸುವಂತೆ ಸೂಚಿಸಿದರು. 

ಕಾಳಿ ನೀರು ತರುವ ಯೋಜನೆಗೆ ಈಗಾಗಲೇ ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳು ಪ್ರಗತಿಯಲ್ಲಿವೆ. ಜಾಕ್‌ವೆàಲ್‌ ನಿರ್ಮಾಣಕ್ಕೆ ಅವಶ್ಯವಿರುವ ಭೂಮಿಯ ಮಂಜೂರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅರಣ್ಯ ಇಲಾಖೆಯ ಪೂರ್ವಾನುಮತಿಗಾಗಿ ಇಲಾಖೆಯೊಂದಿಗೆ ಪತ್ರ ವ್ಯವಹಾರ ಮಾಡಲಾಗಿದೆ ಎಂದು ಜಲ ಮಂಡಳಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. 

ಕಳೆದ ಬೇಸಿಗೆಯಲ್ಲಿ ಪಟ್ಟಣದ ಜನರಿಗೆ ಟ್ಯಾಂಕರ್‌ ಮೂಲಕ  ಸುಮಾರು 94 ದಶ ಲಕ್ಷ ಲೀಟರ್‌ ನೀರು ಪೂರೈಸಲಾಗಿದೆ. ಸಮೀಕ್ಷೆಯಂತೆ ಪಟ್ಟಣದಲ್ಲಿ ಒಂದು ಸಾವಿರಕ್ಕೂ ಅ ಧಿಕ ಕುಟುಂಬಕ್ಕೆ ಶೌಚಾಲಯವಿಲ್ಲ. ಇವರ ಪೈಕಿ ಈಗಾಗಲೇ ನಾಲ್ಕು ನೂರು ಶೌಚಾಲಯಗಳ ನಿರ್ಮಾಣಗೊಳ್ಳುತ್ತಿವೆ. ನಿಗದಿತ ಗುರಿಯನ್ನು ಇನ್ನೊಂದು ತಿಂಗಳಲ್ಲಿ ತಲುಪಲಾಗುವುದೆಂದು ಎಂದು ಮುಖ್ಯಾಧಿಕಾರಿ ವೈ.ಜಿ. ಗದ್ದಿಗೌಡರ ಸಭೆಗೆ ತಿಳಿಸಿದರು.

ಯೋಜನಾ ನಿರ್ದೇಶಕ ರಮೇಶ ಕೋನರೆಡ್ಡಿ, ಧಾರವಾಡ ತಹಶೀಲ್ದಾರ ಪ್ರಕಾಶ ಕುದರಿ, ಪಪಂ ಪ್ರಭಾರಿ ಅಧ್ಯಕ್ಷ ಉಸ್ಮಾನ ಬಾತಖಂಡೆ, ಅಭಿಯಂತರ ಪಾಟೀಲ, ಉಪ ತಹಶೀಲ್ದಾರ ಟಿ.ಬಿ. ಬಡಿಗೇರ, ಕಂದಾಯ ನಿರೀಕ್ಷಕ ರಮೇಶ ಬಂಡಿ, ಶ್ರೀಕಾಂತ ಗಾಯಕವಾಡ, ಸ್ಥಾಯಿ ಸಮಿತಿ ಅಧ್ಯಕ್ಷ ರಾಜೇಶ ಬೈಕೇರಿಕರ, ಮಧು ಬಡಸ್ಕರ, ಛಗನ ಪಟೇಲ, ಪರಮೇಶ್ವರ ತೇಗೂರ ಇದ್ದರು. 

ಟಾಪ್ ನ್ಯೂಸ್

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

kangana

“ನಾಲ್ಕನೇ” ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ನಟಿ ಕಂಗನಾ

ದೀಪಾವಳಿಗೆ ಮುಂಚಿತವಾಗಿ ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ

 ದೀಪಾವಳಿ: ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ, ಸುರಕ್ಷಿತವಾಗಿರುವುದು ಹೇಗೆ?

1-33

ಮಾವನಿಗೆ ದಾದಾ ಸಾಹೇಬ್ ಫಾಲ್ಕೆ, ಅಳಿಯನಿಗೆ ಅತ್ಯುತ್ತಮ ನಟ ಪ್ರಶಸ್ತಿ

Untitled-1

ಗೋವಾದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ಪಿ.ಚಿದಂಬರಂ

1-rr

ಪಾಕ್ ವಿರುದ್ಧ ಸೋಲಿನ ಬಳಿಕ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19ksrtc

ಕಾಗದ ರಹಿತ ಆಡಳಿತದತ್ತ ವಾಯವ್ಯ ಸಾರಿಗೆ ಸಂಸ್ಥೆ

18dharawad

ಧಾರವಾಡದ ಮಣ್ಣಿನಲ್ಲಿದೆ ಕಲೆಯ ಸತ್ವ : ಕುಂಬಿ

ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿ: ಮೆಹ್ತಾ

ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿ: ಮೆಹ್ತಾ

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

1-yrrt

ಕಳವಾಗಿ 2 ಸಂತೆಗೆ ಹೋದರೂ ಮಾಲೀಕರ ಸೇರಿದ 7 ಕುರಿಗಳು

gow theft – protest

ಗೋ ಕಳ್ಳಸಾಗಾಣಿಕೆ ತಡೆಯಲು ಕ್ರಮಕ್ಕೆ ಆಗ್ರಹ; ರಸ್ತೆ ತಡೆ ಮಾಡಿ ಪ್ರತಿಭಟನೆ

ಯಡಿಯೂರಪ್ಪ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

ಯಡಿಯೂರಪ್ಪ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.