ಪಾಪ ಬಿ.ಎಸ್. ಯಡಿಯೂರಪ್ಪಗೆ ತೊಂದರೆ ಕೊಡಬೇಡಿ: ಕೈ ಮುಖಂಡ ಆರ್.ಬಿ. ತಿಮ್ಮಾಪುರ

Team Udayavani, Feb 8, 2020, 4:00 PM IST

timmapur

ಧಾರವಾಡ: ಕಾಂಗ್ರೆಸ್‌ ನಿಂದ ಇನ್ನು ಬೇಕಾದರೆ ಹತ್ತು ಜನ ಶಾಸಕರನ್ನು ತಗೋರಿ, ಆದ್ರೆ ಪಾಪ ಬಿ.ಎಸ್. ಯಡಿಯೂರಪ್ಪಗೆ ಮಾತ್ರ ತೊಂದರೆ ಕೊಡಬೇಡಿ ಎಂದು ಕಾಂಗ್ರೆಸ್‌ನ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಗೆ ಯಡಿಯೂರಪ್ಪ ಬೇಡವಾದರೆ ಕಿತ್ತು ಹಾಕಲಿ, ಆದರೆ ಪಾಪಾ ಅವರನ್ನು ಆಟವಾಡಿಸುವುದು ಬೇಡ ಎಂದರು. ಯಡಿಯೂರಪ್ಪ ಬೇಡವಾದರೆ ಈಗಲೇ ತೆಗೆದು ಹಾಕಲಿ, ನಮ್ಮ ಕಾಂಗ್ರೆಸ್‌ ನವರು ಇನ್ನು ಹತ್ತು ಜನರನ್ನು ಬೇಕಾದರೆ ತೆಗೆದುಕೊಳ್ಳಲಿ, ನಮ್ಮವರ ರಾಜೀನಾಮೆ ಕೊಡಿಸೋದಾದರೆ ಕೊಡಿಸಲಿ ಎಂದ ತಿಮ್ಮಾಪುರ, ಯಡಿಯೂರಪ್ಪನವರನ್ನು ಆಡವಾಡಿಸುವ ಕೆಲಸ ಮಾಡಬೇಡಿ ಎಂದು ಬಿಜೆಪಿ ಹೈಕಮಾಂಡಗೆ ಮನವಿ ಮಾಡಿದರು.

ಇನ್ನು ಈ ದೇಶದ ಪ್ರಧಾನಿ ಮೋದಿಯವರು ಬಿಎಸ್‌ ವೈ ಗೆ ಅವಮರ್ಯಾದೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ತಿಮ್ಮಾಪುರ, ಸಿಎಂ ಯಡಿಯೂರಪ್ಪಗೆ ಅವಮಾನ ಮಾಡಿದರೆ ರಾಜ್ಯದ ಜನತೆಗೆ ಅವಮಾನ ಮಾಡಿದಂತೆ. ಯಡಿಯೂರಪ್ಪ ರಾಜ್ಯದ ಸಿಎಂ ಆಗಿ ಶಾ, ಮೋದಿ ಮುಂದೆ ತಗ್ಗಿ ಬಗ್ಗಿ ನಡೆಯುವುದು ಸರಿಯಲ್ಲ ಎಂದರು.

ಇದು ರಾಜ್ಯದ ಜನರಿಗೆ ಮಾಡುವ ಅವಮಾನ ಎಂದ ಅವರು, ಕುಮಾರಸ್ವಾಮಿ ಕಿಂಗ್ ಆಗುವುದಕ್ಕೆ ಸಾಧ್ಯವಿಲ್ಲ, ಹೀಗಾಗಿ ಅವರು ಕಿಂಗ್ ಮೇಕರ್‌‌ ನೇ ಆಗಬೇಕು ಎಂದರು.

ಕೆಪಿಸಿಸಿ ಅಧ್ಯಕ್ಷಗಿರಿ ವಿಚಾರವಾಗಿ ಮಾತನಾಡಿದ ಅವರು,  ಡಿಕೆಶಿ ಅಧ್ಯಕ್ಷರಾಗ್ತಾರೋ ಇಲ್ವೋ ಗೊತ್ತಿಲ್ಲ, ಎಐಸಿಸಿ ಈ ವಿಷಯದಲ್ಲಿ ಗುಟ್ಟು ಬಿಟ್ಟು ಕೊಡುತ್ತಿಲ್ಲ ಎಂದ ತಿಮ್ಮಾಪುರ, ಲಕ್ಷ್ಮಣ ಸವದಿ ಎಂಎಲ್‌ಸಿ ಚುನಾವಣೆ ವಿಚಾರಕ್ಕೆ ಮಾತನಾಡಿದ ಅವರು, ಬಿಜೆಪಿಯ ಕೆಲ ಶಾಸಕರೇ ಅಭ್ಯರ್ಥಿ ಹಾಕಿ ಅಂತಾ ಹೇಳಿದ್ದಾರೆ‌.  ಅದಕ್ಕಾಗಿಯೇ ಎಂಎಲ್‌ ಸಿ ಚುನಾವಣೆಗೆ ಪಕ್ಷೇತರ ಅಭ್ಯರ್ಥಿ ಸ್ಪರ್ಧಿಸಿದ್ದಾರೆ.  ಪವರ್ ಗೇಮ್‌ನಲ್ಲಿ ಸವದಿ ಸೋಲಬಹುದು ಎಂದರು.

ಸರ್ಕಾರ ನಮ್ಮ ಭಾವನೆ ವಿರುದ್ಧ ನಡೀತಾ ಇದೆ ಅಂತಾ ಬಿಜೆಪಿಯ ಒಳಗಡೆ ಕೆಲವರಿಗೆ ಅನಿಸಿದೆ ಎಂದ ಅವರು, ಅಲ್ಲಿನ ಕೆಲವು ಶಾಸಕರು ಅಭ್ಯರ್ಥಿ ಹಾಕುವಂತೆ ಹೇಳಿರಬೇಕು. ಆ ಪಕ್ಷದಲ್ಲಿ ಬೇಗುದಿ ಇದೆ, ಪಕ್ಷೇತರ ಅಭ್ಯರ್ಥಿ ಬಿಜೆಪಿಯ ಅತೃಪ್ತರ ಜೊತೆ ಮಾತನಾಡಿಯೇ ಸ್ಪರ್ಧಿಸಿರಬೇಕು ಎನ್ನುತ್ತ ಎಂಎಲ್.ಸಿ ಚುನಾವಣೆಯ ರಹಸ್ಯ ಬಿಚ್ಚಿಟ್ಟಿದ್ದಾರೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.