ಸ್ವರ ನಿಲ್ಲಿಸಿದ ಗಾನ ಗಾರುಡಿಗ ಡಾ|ರಾಜಶೇಖರ ಮನಸೂರ

ಪುಣೆ ಸವಾಯಿ ಗಂಧರ್ವ ಉತ್ಸವ ಸೇರಿದಂತೆ ಹೀಗೆ ದೇಶದ ನಾನಾ ಭಾಗಗಳಲ್ಲಿ ಸಂಗೀತ ಕಾರ್ಯಕ್ರಮ ನೀಡಿದ್ದರು.

Team Udayavani, May 2, 2022, 6:09 PM IST

ಸ್ವರ ನಿಲ್ಲಿಸಿದ ಗಾನ ಗಾರುಡಿಗ ಡಾ|ರಾಜಶೇಖರ ಮನಸೂರ

ಧಾರವಾಡ: ದಿ|ಮಲ್ಲಿಕಾರ್ಜುನ ಮನಸೂರ ಪುತ್ರ, ಹಿಂದೂಸ್ತಾನಿ ಸಂಗೀತದ ಮೇರು ಗಾಯಕರ ಡಾ|ರಾಜಶೇಖರ ಮನಸೂರ (80) ವಯೋ ಸಹಜ ಕಾಯಿಲೆಯಿಂದ ಬೆಂಗಳೂರಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದು, ಬೆಂಗಳೂರಿನಲ್ಲಿ ಭಾನುವಾರ ಸಂಜೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಡಾ|ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಸದಸ್ಯರಾಗಿದ್ದ ಡಾ|ರಾಜಶೇಖರ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸಂಗೀತ ಮತ್ತು ನೃತ್ಯ ಅಕಾಡೆಮಿ ಪ್ರಶಸ್ತಿ, ಪುಣೆಯ ರಾಷ್ಟ್ರೀಯ ಸಂಗೀತೋತ್ಸವದಲ್ಲಿ ಸನ್ಮಾನ ಸೇರಿದಂತೆ ಹತ್ತು ಹಲವಾರು ಪ್ರಶಸ್ತಿಗಳು ಅವರ ಮಡಿಲಿಗೆ ಸಂದಿವೆ.

ಹಿಂದೂಸ್ತಾನಿ ಸಂಗೀತದ ಜೈಪುರ-ಅತ್ರೌಲಿ ಘರಾಣೆಯ ಅಗ್ರ ಗಾಯಕರಾಗಿದ್ದ ರಾಜಶೇಖರ ಮನ್ಸೂರ ಅವರು ದುರ್ಲಭ ಹಾಗೂ ವಿರಳಾತಿ ವಿರಳ ರಾಗಗಳನ್ನು ಪ್ರಸ್ತುತಪಡಿಸುವಲ್ಲಿ ಸಿದ್ಧಹಸ್ತರಾಗಿದ್ದರು. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್‌ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿದ್ದ ಅವರು ತಂದೆಯ ಗರಡಿಯಲ್ಲೇ ಸಂಗೀತವನ್ನು ಗುರು-ಶಿಷ್ಯ ಪರಂಪರೆಯಲ್ಲಿ ಅಭ್ಯಾಸ ಮಾಡಿದವರು. ತಂದೆ ಮಲ್ಲಿಕಾರ್ಜುನ ಮನ್ಸೂರ ಅವರಂತೆಯೇ ದೇಶದ ಅಗ್ರಪಂಕ್ತಿ ಶ್ರೇಷ್ಠ ಗಾಯಕರಲ್ಲಿ ಒಬ್ಬರಾಗಿದ್ದರು.

1942, ಡಿ.6ರಂದು ಜನಿಸಿದ ರಾಜಶೇಖರ ಮನಸೂರ ತಮ್ಮ 18ನೇ ವಯಸ್ಸಿನಲ್ಲಿ ಸಂಗೀತ ವಿಶಾರದ ಪರೀಕ್ಷೆಯಲ್ಲಿ ಚಿನ್ನದ ಪದಕ, ಯುವ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದರು. ಬ್ರಿಟಿಷ್‌ ಕೌನ್ಸಿಲ್‌ ವಿದ್ಯಾರ್ಥಿ ವೇತನದಲ್ಲಿ ಇಂಗ್ಲಿಷ್‌ ಸಾಹಿತ್ಯದಲ್ಲಿ ಎಂಎ ಮತ್ತು ವೇಲ್ಸ್ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. 35 ವರ್ಷಗಳ ಕಾಲ ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಸಾಹಿತ್ಯ, ಭಾಷಾಶಾಸ್ತ್ರವನ್ನು ಕಲಿಸಿದ್ದರು. ನಂತರ ಇಂಗ್ಲಿಷ್‌ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಕೆಲ ಕಾಲ ಕಲುºರ್ಗಿ ಪಿಜಿ ಸೆಂಟರ್‌ನಲ್ಲಿ ಇಂಗ್ಲಿಷ್‌ ಕಲಿಸಿದ್ದರು. ಅದೇ ಸಮಯದಲ್ಲಿ ಅವರು ಗಾಯನವನ್ನೂ ಮುಂದುವರಿಸಿದ್ದರು. ಆಲ್‌ ಇಂಡಿಯಾ ರೇಡಿಯೋಗೆ ಸ್ವತಂತ್ರವಾಗಿ ಪ್ರದರ್ಶನ ನೀಡಿದ್ದರು.

ಜೋಡ್‌ ರಾಗ ಹಾಡುವುದಲ್ಲಿ ಸಿದ್ಧಹಸ್ತ: ಗ್ವಾಲಿಯರ್‌ ತಾನಸೇನ್‌ ಉತ್ಸವ ಸೇರಿದಂತೆ ದೆಹಲಿ, ಮುಂಬೈ, ಕೋಲ್ಕತ್ತಾ, ಜೈಪುರ, ಚೆನ್ನೈ, ಹೈದರಾಬಾದ್‌, ಲಕ್ನೋ, ಪುಣೆ ಸವಾಯಿ ಗಂಧರ್ವ ಉತ್ಸವ ಸೇರಿದಂತೆ ಹೀಗೆ ದೇಶದ ನಾನಾ ಭಾಗಗಳಲ್ಲಿ ಸಂಗೀತ ಕಾರ್ಯಕ್ರಮ ನೀಡಿದ್ದರು.

ಜೈಪುರ ಅತ್ರೌಲಿ ಘರಾಣೆಯ ಉಪಜ್‌ ಅಂಗದ ಪುರಾತನ ಗಾಯನ ಶೈಲಿ ಅನುಕರಿಸುತ್ತಿದ್ದ ಅವರು, ಸಂಗೀತದ ಬಗ್ಗೆ ವಿದ್ಯಾರ್ಥಿಗಳ ಜತೆ ಅನೇಕ ಅನುಸಂಧಾನಗಳನ್ನು ನಡೆಸಿದ್ದರು. ಧಾರವಾಡ ಅವರ ಕರ್ಮ ಸ್ಥಾನವಾದರೂ ಇತ್ತೀಚಿನ ಕೆಲ ವರ್ಷಗಳಿಂದ ಅವರು ಬೆಂಗಳೂರಿನಲ್ಲಿ ನೆಲೆಸಿದ್ದರು. ಅವರು ಜೋಡ್‌ ರಾಗಗಳನ್ನು ಹಾಡುವುದಲ್ಲಿ ಸಿದ್ಧಹಸ್ತರಾಗಿದ್ದರು.

ಧಾರವಾಡ ತಾಲೂಕಿನ ಮನಸೂರ ಗ್ರಾಮದವರಾದ ಅವರು ತಮ್ಮ ಶಿಕ್ಷಣವನ್ನು ಧಾರವಾಡದಲ್ಲಿಯೇ ಪಡೆದಿದ್ದರು. ತಂದೆ ಮಲ್ಲಿಕಾರ್ಜುನ ಮನಸೂರ ಅವರಿಂದ ಹಿಂದೂಸ್ತಾನಿ ಸಂಗೀತ ಕಲಿತಿದ್ದ ಅವರು ಅತ್ಯಂತ ವಿಶಿಷ್ಟ ಕಿರಾಣೆಗಳನ್ನು ಹಾಡಿ, ಸಂಗೀತ ಕ್ಷೇತ್ರದಲ್ಲಿ ಮೈಲುಗಲ್ಲು ಸ್ಥಾಪಿಸಿದ್ದರು. ಜೈಪುರ ಅತ್ರೌಲಿ ಎಂಬ ವಿಶಿಷ್ಟ ಸಂಗೀತ ಕಲಾ ಪ್ರಕಾರ ಸೇರಿದಂತೆ ಅನೇಕ ಹೊಸ ರಾಗಗಳನ್ನು ಸೃಜಿಸಿದ ಕೀರ್ತಿ ರಾಜಶೇಖರ ಮನಸೂರರಿಗೆ ಸಲ್ಲುತ್ತದೆ. ಕರ್ನಾಟಕದವರಾಗಿದ್ದರೂ ಉತ್ತರ ಭಾರತದ ಹಿಂದೂಸ್ತಾನಿ ಕಛೇರಿಗಳಿಗೆ ಅತ್ಯಂತ ಉತ್ಸಾಹದಿಂದ ಹೋಗುತ್ತಿದ್ದರು.

ಮುಂಬೈ, ಪುಣೆ, ದೆಹಲಿ, ಲಕ್ನೋ, ಜೈಪುರ, ಭೂಪಾಲ್‌ ಸೇರಿದಂತೆ ಅನೇಕ ಕಡೆಗಳಲ್ಲಿ ತಮ್ಮದೇ ಶೈಲಿಯ ಸಂಗೀತ ಕಛೇರಿಗಳನ್ನು ನೀಡಿದ್ದರು. ಅಪ್ಪಟ ದೇಸಿತನವನ್ನು ಮೈಗೂಡಿಸಿಕೊಂಡಿದ್ದ ಅವರು ಸಂಗೀತ ಮತ್ತು ನೃತ್ಯ ಅಕಾಡೆಮಿ ಅಧ್ಯಕ್ಷರಾಗಿ ಅದ್ಭುತ ಕೆಲಸ ಮಾಡಿದ್ದರು. ಯುವ ಸಂಗೀತಗಾರರನ್ನು ಹಿಂದೂಸ್ತಾನಿ ಸಂಗೀತ ಕ್ಷೇತ್ರದಲ್ಲಿ ಬೆಳೆಸಲು ಸದಾ ಮುಂಚೂಣಿ ಪಾತ್ರ ವಹಿಸಿದ್ದರು. ಕ್ಷೇತ್ರದ ಸಂಶೋಧಕರಿಗೆ ಮಾರ್ಗದರ್ಶನ ಮಾಡಿದ್ದರು.

ಉತ್ತರ ಕರ್ನಾಟಕದ ಜೀವನ ಶೈಲಿ, ಭಾಷೆ, ಆಹಾರ ಕ್ರಮ ಹಾಗೂ ಜಾನಪದೀಯ ಸಂಗೀತವನ್ನು ಸದಾ ಮೆಲುಕು ಹಾಕುತ್ತಿದ್ದರು. ತಮ್ಮ ತಂದೆಯಂತೆಯೇ ಸಂಗೀತ ಸಾಮ್ರಾಟರಾಗಿ ಸಂಗೀತ ಪ್ರೇಮಿಗಳ ಮನ ಗೆದ್ದಿದ್ದರು. ಪಂ|ಸೋಮನಾಥ ಮರಡೂರ, ಪಂ|ವೆಂಕಟೇಶಕುಮಾರ, ಪಂ|ಗಣಪತಿ ಭಟ್‌ ಹಾಸಣಗಿ ಅವರ ಸಮಕಾಲೀನವರಾದ ಡಾ|ರಾಜಶೇಖರ ಹಿಂದೂಸ್ತಾನಿ ಸಂಗೀತದ ಮೇರು ಪ್ರತಿಭೆಯಾಗಿದ್ದರು.

ಪ್ರಶಸ್ತಿಗಳ “ಗೌರವ’: ಆಲ್‌ ಇಂಡಿಯಾ ರೇಡಿಯೋದಲ್ಲಿ ಉನ್ನತ ದರ್ಜೆ ಶ್ರೇಣಿಯ (ಎ+) ಗಾಯಕರಾಗಿದ್ದ ಅವರಿಗೆ 1997ರಲ್ಲಿ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡು (2005-2008) ಕಾರ್ಯ ನಿರ್ವಹಿಸಿದ್ದರು. ಕರ್ನಾಟಕ ಕಲಾಶ್ರೀ ಗೌರವ ಪ್ರಶಸ್ತಿ (2009) ಗೆ ಭಾಜನರಾಗಿದ್ದರು.ರಾಜಶೇಖರ ಮನ್ಸೂರ ಅವರ ಸಂಗೀತವನ್ನು ಭೋಪಾಲ್‌ನ ಇಂದಿರಾ ಗಾಂಧಿ ಮಾನವ ಸಂಗ್ರಹಾಲಯದ ಆರ್ಕೈವ್‌ನಲ್ಲಿ ಸಂರಕ್ಷಿಸಲಾಗಿದೆ.

ಭಾರತದ ಸಂಗೀತ, ನೃತ್ಯ ರಾಷ್ಟ್ರೀಯ ಅಕಾಡೆಮಿಯಿಂದ 2012ರಲ್ಲಿ ಅವರಿಗೆ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಉಸ್ತಾದ್‌ ಬಿಸ್ಮಿಲ್ಲಾ ಖಾನ್‌ ಮತ್ತು ಪಂಡಿತ್‌ ಸಣ್ಣ ಭರಮಣ್ಣ ಸ್ಮಾರಕ ರಾಷ್ಟ್ರೀಯ ಪುರಸ್ಕಾರವನ್ನು ಚೆನ್ನೈನ ತಾನ್ಸೆನ್‌ ಅಕಾಡೆಮಿ ಆಫ್‌ ಮ್ಯೂಸಿಕ್‌ ನೀಡಿ ಗೌರವಿಸಿತ್ತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.