ಜಾನುವಾರುಗಳಿಗೆ ತಗ್ಗಿದ ಸಾಂಕ್ರಾಮಿಕ ರೋಗ ಬಾಧೆ

ಚರ್ಮ ಗಂಟು ರೋಗದ ಅಂಟಿನ ಭಯವಿಲ್ಲ | ಕಂದು ರೋಗಕ್ಕೂ ಮೂರು ಹಂತದಲ್ಲಿ ಲಸಿಕಾಕರಣ

Team Udayavani, Sep 17, 2021, 5:17 PM IST

ಜಾನುವಾರುಗಳಿಗೆ ತಗ್ಗಿದ ಸಾಂಕ್ರಾಮಿಕ ರೋಗ ಬಾಧೆ

ಧಾರವಾಡ: ಜಿಲ್ಲೆಯಲ್ಲಿ ಕಳೆದ ವರ್ಷ ಜಾನುವಾರುಗಳಿಗೆ ತೀವ್ರವಾಗಿ ಬಾಧಿಸಿದ್ದ ಚರ್ಮ ಗಂಟು ರೋಗ ಈ ಸಲ ಮಂಗ ಮಾಯವಾಗಿದ್ದು, ಇದರ ಜತೆಗೆ ಪ್ರತಿ ವರ್ಷವೂ ಈ ಸಮಯಕ್ಕೆ ಸರಿಯಾಗಿ ಜಾನುವಾರುಗಳಲ್ಲಿ ಕಂಡು ಬರುವ ಕಾಲುಬೇನೆ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ಬಾಧೆಯೂ ಕೊಂಚ ತಗ್ಗಿದೆ.

ಜಾನುವಾರುಗಳಿಗೆ ಕಳೆದ ವರ್ಷ ಚರ್ಮ ಗಂಟು ರೋಗ ತೀವ್ರವಾಗಿ ಬಾಧಿಸಿತ್ತು. ಈ ವರ್ಷವೂ ಇದರ ಆತಂಕದಲ್ಲಿದ್ದ ರೈತರು ಈಗ ನಿರಾಳ ವಾಗಬಹುದು. ಈವರೆಗೂ ಜಿಲ್ಲೆಯಲ್ಲಿ ಚರ್ಮ ಗಂಟು ರೋಗದ ಯಾವ ಲಕ್ಷಣವೂ ಕಂಡು ಬಂದಿಲ್ಲ. ಇದರ ಜತೆಗೆ ಬಾಯಿಬೇನೆ, ಕಾಲುಬೇನೆ, ಗಂಟುಬೇನೆ, ಚಪ್ಪೇಬೇನೆ ಸೇರಿದಂತೆ ಸಾಂಕ್ರಾಮಿಕ ರೋಗಗಳ ಲಕ್ಷಣಗಳೂ ಕಂಡು ಬಂದಿಲ್ಲ. ಇದಲ್ಲದೇ ಜಿಲ್ಲೆಯಲ್ಲಿ ಇದೀಗ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣದಡಿ ಬ್ರೂಸ್ಸೆಲ್ಲೊಸಿಸ್‌ (ಕಂದು ರೋಗ) ರೋಗಕ್ಕೆ ಲಸಿಕಾ ಅಭಿಯಾನ ಶುರು ಮಾಡಲಾಗಿದ್ದು, ಈ ರೋಗದ ನಿಯಂತ್ರಣಕ್ಕೂ ಮೂರು ಹಂತದಲ್ಲಿ ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ತೀವ್ರ ಬಾಧಿಸಿದ್ದ ಚರ್ಮ ಗಂಟು ರೋಗ:
ಕಳೆದ ವರ್ಷದ ಸೆಪ್ಟೆಂಬರ್‌ ತಿಂಗಳಲ್ಲಿ ಜಿಲ್ಲೆಯ ಗ್ರಾಮೀಣ ಭಾಗದ 168 ಗ್ರಾಮಗಳ 1789 ಜಾನುವಾರುಗಳಲ್ಲಿ ಚರ್ಮ ಗಂಟು ರೋಗ (ಲಂಪಿ ಸ್ಕಿನ್‌ಡಿಸೀಸ್‌) ಕಾಣಿಸಿಕೊಂಡಿತ್ತು. ಅಕ್ಟೋಬರ್‌ ಅಂತ್ಯಕ್ಕೆ ಜಿಲ್ಲೆಯ ಐದು ತಾಲೂಕಿನ 291 ಗ್ರಾಮಗಳ 5570 ಜಾನುವಾರುಗಳಲ್ಲಿ ಪತ್ತೆಯಾಗಿತ್ತು. ಈ ಪೈಕಿ ಕಲಘಟಗಿ ತಾಲೂಕಿನ 75, ಧಾರವಾಡ ತಾಲೂಕಿನ 72, ಹುಬ್ಬಳ್ಳಿ ತಾಲೂಕಿನ 58, ಕುಂದಗೋಳ ತಾಲೂಕಿನ 53, ನವಲಗುಂದ ತಾಲೂಕಿನ 33 ಗ್ರಾಮಗಳ ಜಾನುವಾರುಗಳಲ್ಲಿ ರೋಗ ಕಾಣಿಸಿಕೊಂಡಿತ್ತು. ರೋಗ ಹತೋಟಿಗಾಗಿ ಜಿಲ್ಲಾದ್ಯಂತ ಜಾನುವಾರು ಸಂತೆ, ಜಾತ್ರೆ ಹಾಗೂ ಸಾಗಾಟ ನಿಷೇಧಿಸಿ ಸೆ.28ರಿಂದಲೇ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ರೋಗ ಹತೋಟಿಗಾಗಿ ಜಿಲ್ಲೆಗೆ ತರಿಸಿದ್ದ 70 ಸಾವಿರ ಲಸಿಕೆಯನ್ನು ಡಿಸೆಂಬರ್‌ ಅಂತ್ಯಕ್ಕೆ ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಲಾಗಿತ್ತು. ಪರಿಣಾಮ ಪೂರ್ಣ ಪ್ರಮಾಣದಲ್ಲಿ ರೋಗ ಹತೋಟಿಗೆ ಬಂದಿತ್ತು. ಇದಾದ ಬಳಿಕವೇ ಜಿಲ್ಲಾದ್ಯಂತ ಜಾನುವಾರು ಸಂತೆ, ಜಾತ್ರೆ ಹಾಗೂ ಸಾಗಾಟಕ್ಕೆ ಹೇರಿದ್ದ ನಿಷೇಧ ತೆರವು ಮಾಡಲಾಗಿತ್ತು.

ಇದನ್ನೂ ಓದಿ:ನಿಷ್ಕಲ್ಮಷ ಪ್ರೀತಿಗೆ ಋಣಿ, ತವರು ಮನೆಗೆ ಬಂದಷ್ಟು ಖುಷಿಯಾಗಿದೆ: ನಟ ಅನಂತ್ ನಾಗ್

ಕಂದು ರೋಗಕ್ಕೆ ಲಸಿಕಾಕರಣ: ಕೇಂದ್ರ ಸರಕಾರದ ನೂತನ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಕಂದು ರೋಗ ನಿಯಂತ್ರಣಕ್ಕಾಗಿ ಮೊದಲ ಹಂತದ ಲಸಿಕಾ ಕಾರ್ಯಕ್ರಮವನ್ನು ಸೆ.6ರಿಂದ ಸೆ.15ರವರೆಗೆ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ 4-8 ತಿಂಗಳ ದನ ಮತ್ತು ಎಮ್ಮೆ ಹೆಣ್ಣು ಕರುಗಳಿಗೆ ಲಸಿಕೆ ಹಾಕಲಾಗಿದೆ. ಮೂರು ಹಂತದಲ್ಲಿ ಮೂರು ತಿಂಗಳಿಗೊಮ್ಮೆ ಈ ಲಸಿಕಾ ಅಭಿಯಾನ ಹಮ್ಮಿಕೊಳ್ಳಲು ಅಗತ್ಯ ಲಸಿಕೆಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 22 ಸಾವಿರ ಕರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಈ ಪೈಕಿ ಮೊದಲ ಹಂತದ ಲಸಿಕಾಕರಣದಲ್ಲಿ 6 ಸಾವಿರ ಹೆಣ್ಣು ಕರುಗಳಿಗೆ ಲಸಿಕೆ ಹಾಕಲಾಗಿದೆ. ವರ್ಷದ ಗುರಿ ಮುಟ್ಟಲು ಜಿಲ್ಲೆಯ ಪ್ರತಿ ತಾಲೂಕಿನಲ್ಲಿ 5-6 ಸಾವಿರ ಲಸಿಕೆ ಹಾಕಲು ಸಿದ್ಧತೆ ಕೈಗೊಳ್ಳಲಾಗಿದೆ.

ಎಲ್ಲಾ ಹೆಣ್ಣು ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸಿ
ಕಂದು ರೋಗ ಮುಖ್ಯವಾಗಿ ಹಸು, ಎಮ್ಮೆ, ಕುರಿ, ಮೇಕೆ, ಹಂದಿ, ನಾಯಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ರೋಗಗ್ರಸ್ತ ಪ್ರಾಣಿಯಲ್ಲಿ ಗರ್ಭಪಾತ, ಅನಾರೋಗ್ಯ, ಕಡಿಮೆ ಹಾಲಿನ ಇಳುವರಿ, ಬಂಜೆತನ ಉಂಟಾಗಿ ರೈತರಿಗೆ ಆರ್ಥಿಕ ನಷ್ಟ ಉಂಟು ಮಾಡುತ್ತದೆ. ಹೀಗಾಗಿ 4-8 ತಿಂಗಳು ಮೇಲ್ಪಟ್ಟ ಎಲ್ಲಾ ಹೆಣ್ಣು ಕರುಗಳಿಗೆ ತಪ್ಪದೇ ಒಮ್ಮೆಯಾದರೂಬ್ರೂಸ್ಸೆಲ್ಲಾ ಲಸಿಕೆ ಹಾಕಿಸುವುದರಿಂದ ಕರುಗಳಲ್ಲಿ ರೋಗ ಪ್ರತಿಬಂಧಕ ಶಕ್ತಿ ಹೆಚ್ಚಿಸಿ, ಈ ರೋಗ ಬಾಧೆಯಿಂದ ಪಾರಾಗಿಸಬಹುದು. ಈ ಹಿನ್ನೆಲೆಯಲ್ಲಿ ರೈತಾಪಿ ಸಮುದಾಯ ಹೆಣ್ಣು ಕರುಗಳಿಗೆ ಲಸಿಕೆ ಹಾಕಿಸಿದರೆ ಒಳಿತು.

ಪ್ರಾಣಿಜನ್ಯ ರೋಗದಿಂದ ಮನುಷ್ಯರಿಗೂ ಅಪಾಯ
ಕಂದು ರೋಗ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಮಾರಕ ರೋಗವೂ ಆಗಿದೆ. ಮುಖ್ಯವಾಗಿ ದೇಹದ ಸ್ರವಿಸುವ ವಸ್ತುಗಳಾದ ಹಾಲು, ವೀರ್ಯದಿಂದ ಹರಡುತ್ತದೆ. ಮನುಷ್ಯರಲ್ಲಿ ಮರುಕಳಿಸುವ ಜ್ವರ, ವಿಪರೀತ ರಾತ್ರಿ ಬೆವರುವಿಕೆ, ಗರ್ಭಪಾತ, ಬಂಜೆತನ ಇವೇ ಮುಖ್ಯವಾದ ಲಕ್ಷಣಗಳು ಕಂಡುಬರುತ್ತವೆ. ಆದ್ದರಿಂದ ಪಶುಪಾಲಕರು, ಕೃತಕ ಗರ್ಭಧಾರಣಾ ಕಾರ್ಯಕರ್ತರು, ಪಶು ಪರಿವೀಕ್ಷಕರು, ಪಶುವೈದ್ಯಾ ಧಿಕಾರಿಗಳು, ಕಸಾಯಿಖಾನೆಯಲ್ಲಿ ಕೆಲಸ ಮಾಡುವವರು ಈ ರೋಗದ ಹರಡುವಿಕೆ ಬಗ್ಗೆ ಜಾಗೃತಿ ಇರಬೇಕು. ರೋಗಗ್ರಸ್ತ ಜಾನುವಾರುಗಳು, ಗರ್ಭಪಾತದ ಮಾಸ, ರಕ್ತ ಮತ್ತು ಇತರೇ ಸ್ರವಿಸುವಿಕೆಯನ್ನು ಮುಟ್ಟುವಾಗ ಕೈಗವಸು ಹಾಕಿಕೊಂಡು ಮುಟ್ಟಬೇಕು ಎಂದು ಮುಖ್ಯ ಪಶು ವೈದ್ಯಾಧಿಕಾರಿ ಮನೋಹರ ಪಿ. ದ್ಯಾಬೇರಿ ತಿಳಿಸಿದ್ದಾರೆ.

-ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.