ಸಾಮಾಜಿಕ ಉದ್ಯಮಕ್ಕೆ ಸರ್ಕಾರದ ಸಾಥ್‌

Team Udayavani, Feb 3, 2019, 10:47 AM IST

3-february-19.jpg

ಹುಬ್ಬಳ್ಳಿ: ಹಲವು ಸಮಸ್ಯೆಗಳಿಗೆ ಪರಿಹಾರ ನಿಟ್ಟಿನಲ್ಲಿ ಸಾಮಾಜಿಕ ಉದ್ಯಮಕ್ಕೆ ಹೆಚ್ಚಿನ ಸಾಮರ್ಥ್ಯ ಇದೆ. ಅತ್ಯುತ್ತಮ ಉದ್ದೇಶ ಹಾಗೂ ಕಾರ್ಯಕ್ಷಮತೆಯ ಸಾಮಾಜಿಕ ಉದ್ಯಮದ ಜತೆ ಪಾಲುದಾರಿಕೆಗೆ ಸರಕಾರ ಉತ್ಸುಕವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ದೇಶಪಾಂಡೆ ಪ್ರತಿಷ್ಠಾನದ ಅಭಿವೃದ್ಧಿ ಸಂವಾದದಲ್ಲಿ ರಿಇಮೇಜಿನಿಂಗ್‌ ಪಾಟ್ನರ್ರ್‌ಶಿಪ್‌ ಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಸಮಸ್ಯೆಗಳಿಗೆ ಪರಿಹಾರ ನಿಟ್ಟಿನಲ್ಲಿ ಸರಕಾರಕ್ಕಿಂತಲೂ ಖಾಸಗಿ ಹಾಗೂ ಸಾಮಾಜಿಕ ಉದ್ಯಮ ವಲಯದಿಂದ ಹೆಚ್ಚು ಅವಕಾಶ ಇರಲಿದೆ. ಸರಕಾರದೊಂದಿಗೆ ಪಾಲುದಾರಿಕೆ ಹೊಂದಿದರೆ ಪರಿಣಾಮಕಾರಿ ಅನುಷ್ಠಾನವಾಗಲಿದೆ ಎಂದರು.

ಕೃಷಿಯಲ್ಲಿ ಕೂಲಿಕಾರರ ಸಮಸ್ಯೆ ಹೆಚ್ಚುತ್ತಿದೆ. ಕೃಷಿ ವೆಚ್ಚದಲ್ಲಿ ಕೂಲಿಕಾರರ ಪಾಲು ಶೇ. 40 ಆಗುತ್ತಿದೆ. ಕೃಷಿ ಕಾಯಕಕ್ಕೆ ರೈತರು ಅನಿವಾರ್ಯವಾಗಿ ಯಂತ್ರೋಪಕರಣಗಳಿಗೆ ಮೊರೆ ಹೋಗಬೇಕಾಗಿದೆ. ಸಣ್ಣ-ಅತಿಸಣ್ಣ ರೈತರಿಗೆ ಯಂತ್ರೋಪಕರಣಗಳ ಖರೀದಿ ಸಾಧ್ಯವಾಗದು. ನಾನು ಕೃಷಿ ಸಚಿವನಾಗಿದ್ದಾಗ ಕೃಷಿ ಯಂತ್ರೋಪಕರಣ ಹಾಗೂ ಸಲಕರಣೆಗಳನ್ನು ಬಾಡಿಗೆಯಾಗಿ ನೀಡಲು ಯೋಜಿಸಲಾಗಿತ್ತು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಇದರ ನಿರ್ವಹಣೆಗೆ ಮುಂದಾಗಿತ್ತು. ಇದರಿಂದ ರಾಜ್ಯದಲ್ಲಿ ಸುಮಾರು 150 ಕೇಂದ್ರಗಳು ಇಂದು ಯಶಸ್ವಿಯಾಗಿ ನಡೆಯುತ್ತಿವೆ. ಇದು ಸಾಮಾಜಿಕ ಉದ್ಯಮ ಹಾಗೂ ಸರಕಾರದ ಪಾಲುದಾರಿಕೆ ಯಶಸ್ವಿಗೆ ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ನವೋದ್ಯಮಕ್ಕೆ ರಾಜ್ಯ ಸರಕಾರ ಅಗತ್ಯ ನೆರವು, ಪ್ರೋತ್ಸಾಹ ನೀಡುತ್ತಿದ್ದು ದೇಶಕ್ಕೆ ಮಾದರಿಯಾಗಿದೆ. ಸರಕಾರದೊಂದಿಗೆ ಪಾಲುದಾರಿಕೆ ಅಸಾಧ್ಯ ಎಂದು ಅನೇಕರು ಹೇಳುತ್ತಿದ್ದಾರೆ. ಕೆಲ ಮಾಧ್ಯಮಗಳಲ್ಲಿ ಈ ಬಗ್ಗೆ ತಪ್ಪು ಸಂದೇಶ ನೀಡುವ ಕಾರ್ಯ ನಡೆಯುತ್ತಿದೆ. ಉತ್ತಮ ಪ್ರಸ್ತಾವನೆ, ಸಮರ್ಪಕ ದಾಖಲೆಗಳಿಲ್ಲದೆ ಬಂದರೆ ಅಧಿಕಾರದಲ್ಲಿದ್ದವರು ಸಾಗಹಾಕುತ್ತಾರೆ ಎಂದರು.

ಖಾಸಗಿ ಹಾಗೂ ಸರಕಾರ ಪಾಲುದಾರಿಕೆಗೆ ವಿಚಾರಕ್ಕೆ ಬಂದರೆ ಅಜೀಂ ಪ್ರೇಮ್‌ಜಿ ಪ್ರತಿಷ್ಠಾನ ಶಿಕ್ಷಣ ಸುಧಾರಣೆಗೆ ಸರಕಾರದ ಪಾಲುದಾರಿಕೆಗೆ ಮುಂದಾದಾಗ, ಉತ್ತರ ಕರ್ನಾಟಕದಲ್ಲಿ ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡಲಾಗಿತ್ತು. ಅದೇ ರೀತಿ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಸಂಚಾರಿ ವಿಜ್ಞಾನ ಪ್ರಯೋಗಾಲಯವನ್ನು ಗ್ರಾಮೀಣ ಶಾಲೆಗಳಿಗೆ ತೆಗೆದುಕೊಂಡು ಹೋಗುವ ಯೋಜನೆಗೂ ಸರಕಾರ ಪಾಲುದಾರಿಕೆ ನೀಡಿತ್ತು. ಇವು ಉತ್ತಮ ಫ‌ಲಿತಾಂಶ ನೀಡಿವೆ ಎಂದು ತಿಳಿಸಿದರು.

ಅಕ್ಷರ ಫೌಂಡೇಶನ್‌ ಗ್ರಂಥಾಲಯ ಆರಂಭಕ್ಕೆ ಸರಕಾರ ಪಾಲುದಾರಿಕೆ ನೀಡಿದೆ. ಗಣಿತ ಕಲಿಕೆ ಕಾರ್ಯಕ್ರಮ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ನಡೆಸ ಸಚಿವ ಸಂಪುಟದಲ್ಲಿ ಯೋಜನೆ ಮುಂದುವರಿಸಲು, ಗಣಿತ ಕಲಿಕೆಯನ್ನು 10ರಿಂದನ 20 ಸಾವಿರ ಶಾಲೆಗಳಿಗೆ ವಿಸ್ತರಿಸಲು ಒಪ್ಪಿಗೆ ನೀಡಲಾಗಿದೆ. ಇನ್ನೋವೇಶನ್‌ ಸರಕಾರದ ಮಟ್ಟದಲ್ಲೂ ಆಗುತ್ತದೆ. ರೈತರ ಭೂ ದಾಖಲೆಗಳು ಸುಲಭವಾಗಿ ದೊರೆಯುವ ನಿಟ್ಟಿನಲ್ಲಿ ಭೂಮಿ ಯೋಜನೆ ಜಾರಿಗೊಳಿಸಲಾಗಿದೆ ಎಂದರು.

ಪಿರಮಳ ಫೌಂಡೇಶನ್‌ ಮುಖ್ಯಸ್ಥ ಎಸ್‌.ಪಿ. ಪರೇಶ್‌ ಮಾತನಾಡಿದರು. ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಇದ್ದರು. ಪೋರ್ಡ್‌ ಫೌಂಡೇಶನ್‌ ಪ್ರಾದೇಶಿಕ ನಿರ್ದೇಶಕ ಪ್ರದೀಪ ನಾಯರ್‌ ಗೋಷ್ಠಿ ನಿರ್ವಹಿಸಿದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.