ಅರಣ್ಯ ಅತಿಕ್ರಮಣದಾರರಿಗೆ ಒಕ್ಕಲೆಬ್ಬಿಸದಿರಲು ಮನವಿ


Team Udayavani, Aug 22, 2018, 5:32 PM IST

22-agust-20.jpg

ಶಿರಹಟ್ಟಿ: ತಾಲೂಕಿನ ಕೆರೆಹಳ್ಳಿ ತಾಂಡಾದ ಜನತೆ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಸುಮಾರು ವರ್ಷಗಳಿಂದ ವಾಸಿಸುತ್ತಿದ್ದಾರೆ. ಇವರಿಗೆ ಅರಣ್ಯ ಹಕ್ಕು ನಿಯಮದಡಿ ಮತ್ತು ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಕ್ಕು ಅಧಿನಿಯಮದಂತೆ ವಾಸಿಸಲು ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿ ತಾಂಡಾದ ಜನತೆ ಹಾಗೂ ತಾಂಡಾ ಅಭಿವೃದ್ಧಿ ನಿಗಮದ ಜಿಲ್ಲಾಧ್ಯಕ್ಷ ಅಶೋಕ ಲಮಾಣಿ ಅವರು ಉಪತಹಶೀಲ್ದಾರ್‌ ಜಿ.ಪಿ. ಪೂಜಾರಗೆ ಮನವಿ ಸಲ್ಲಿಸಿದರು.

ಅರಣ್ಯ ಇಲಾಖೆ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ವಾಸಿಸುವ ತಾಂಡಾದ ಜನತೆಯನ್ನು ಅರಣ್ಯ ಇಲಾಖೆ ಒಕ್ಕಲೆಬ್ಬಿಸುವ ಕಾರ್ಯಕ್ಕೆ ಮುಂದಾಗಿದೆ. ಇದು ಅವರ ಜೀವನೋಪಾಯಕ್ಕೆ ತೊಂದರೆಯಾಗಿದೆ. ಮೇಲಿಂದ ಮೇಲೆ ಇಲಾಖೆಯವರು ಜನರಿಗೆ ತೊಂದರೆ ನೀಡುತ್ತಿದ್ದು, ಅಲ್ಲಿಂದ ಕಾಲ್ಕಿಳುವಂತೆ ಒತ್ತಾಯಿಸುತ್ತಿದ್ದಾರೆ. ಜೊತೆಗೆ ಅರಣ್ಯ ಇಲಾಖೆ ಅರಣ್ಯದಲ್ಲಿ ವಾಸಿಸುವ ಅರಣ್ಯ ಹಕ್ಕು ಕಾಯ್ದೆ ಮತ್ತು ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಕ್ಕು ಕಿತ್ತುಕೊಳ್ಳುತ್ತಿದ್ದು, ಅವರ ಜೀವನೋಪಾಯಕ್ಕೆ ತೊಂದರೆಯನ್ನುಂಟು ಮಾಡುತ್ತಿದ್ದಾರೆ. ಅವರಿಗೆ ಜೀವಿಸಲು ಅವಕಾಶ ಮತ್ತು ಜೀವನೋಪಾಯಕ್ಕೆ ಜಮೀನು ಒದಗಿಸಬೇಕು ಎಂದು ಮನವಿ ಮಾಡಿದರು.

ಇಲಾಖೆಯವರು ಅರಣ್ಯ ಹಕ್ಕು ಉಲ್ಲಂಘನೆ ಮಾಡುತ್ತಿದ್ದಾರೆ. ಸರಕಾರ ಅರಣ್ಯದಲ್ಲಿ ವಾಸಿಸುವ ಹಕ್ಕುನ್ನು ಅವರಿಗೆ ಒದಗಿಸಿದ್ದರೂ ಅರಣ್ಯ ಇಲಾಖೆ ಮೊಂಡು ಧೋರಣೆ ಅನುಸರಿಸುತ್ತಿದೆ. ಭಾರತ ಸರಕಾರ 2006 ಮತ್ತು 2008 ನಿಯಮಗಳ ತಿದ್ದುಪಡಿ 2012ರ ಪ್ರಕಾರ ಪರಿಶಿಷ್ಟ ಪಂಗಡ ಹಾಗೂ ಇತರೆ ಪಾರಂಪರಿಕ ಅರಣ್ಯ ವಾಸಿಗಳಿಗೆ ವಾಸಿಸಲು ಅವಕಾಶ ಕಲ್ಪಿಸಿದೆ. ಅದಕ್ಕಾಗಿ ಊಳುವವನೇ ಭೂಮಿ ಒಡೆಯ ಎಂಬ ನಿಯಮದಂತೆ ಲಂಬಾಣಿ ಜನಾಂಗಕ್ಕೆ ಜೀವಿಸಲು ಮತ್ತು ಜೀವನೋಪಾಯಕ್ಕೆ ಅವಕಾಶ ನೀಡಬೇಕು.

ಮುಗ್ದ ಜನರ ಮೇಲೆ ಇಲಾಖೆ ನಡೆಸುತ್ತಿರುವ ದೌರ್ಜನ್ಯ ಸಹಿಸಲಾಗುವುದಿಲ್ಲ. ಆದ್ದರಿಂದ ಈ ತಕ್ಷಣವೇ ಅರಣ್ಯಾಧಿಕಾರಿಗಳಿಗೆ ಲಂಬಾಣಿ ಜನಾಂಗಕ್ಕೆ ಜೀವನಕ್ಕೆ ಮತ್ತು ಜೀವನೋಪಾಯಕ್ಕಾಗಿ ಅಲ್ಲಿಯೇ ಮುಂದುವರೆಸಲು ಆದೇಶಿಸಬೇಕೆಂದು ಆಗ್ರಹಿಸಿ ಉಪ ತಹಶೀಲ್ದಾರ್‌ ಗೆ ಮನವಿ ಸಲ್ಲಿಸಿದರು.

ತಾಪಂ ಸದಸ್ಯ ದೇವಪ್ಪ ಲಮಾಣಿ, ತಾಪಂ ಮಾಜಿ ಸದಸ್ಯ ಜಾನು ಲಮಾಣಿ, ಶಂಕರ ಪವಾರ, ಶಿವಣ್ಣ ಲಮಾಣಿ, ಪಾಂಡಪ್ಪ ಲಮಾಣಿ, ಧನಸಿಂಗ್‌ ಲಮಾಣಿ, ಶಂಕ್ರಪ್ಪ ಲಮಾಣಿ, ಮಲ್ಲೇಶಪ್ಪ ಲಮಾಣಿ,  ದೀಪಕ್‌ ಲಮಾಣಿ, ಸುಮಿತ್ರಾ ಲಮಾಣಿ, ಗೌರವ್ವ ಲಮಾಣಿ, ಚಿನ್ನವ್ವ ಲಮಾಣಿ, ಗಂಗವ್ವ ಲಮಾಣಿ, ಲಕ್ಷ್ಮವ್ವ ಲಮಾಣಿ, ಪಾರವ್ವ ಲಮಾಣಿ, ಪೂಜಾ ಲಮಾಣಿ, ಥಾವರೆಪ್ಪ ಲಮಾಣಿ, ಶಿವಪ್ಪ ಲಮಾಣಿ, ರಮೇಶ ಲಮಾಣಿ, ಹೂಬಪ್ಪ ಲಮಾಣಿ, ಮೇಘಪ್ಪ ಲಮಾಣಿ, ಡಾಕಪ್ಪ ಲಮಾಣಿ ಹಾಗೂ ಕೆರೆಹಳ್ಳಿ ತಾಂಡಾದ ಜನರು ಮನವಿ ಸಲ್ಲಿಸುವ ನಿಯೋಗದಲ್ಲಿ ಇದ್ದರು. 

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.