ಸ್ಥಳೀಯರ ಪ್ರತಿರೋಧ; ತೆರವು ಕಾರ್ಯಾಚರಣೆ ಮುಂದೂಡಿಕೆ

24ರೊಳಗೆ ಸ್ಥಳಾಂತರವಾಗಲು ನಿವಾಸಿಗಳಿಗೆ ಬೇಲಿಫಗಳ ಎಚ್ಚರಿಕೆ

Team Udayavani, Jul 23, 2019, 9:25 AM IST

hubali-tdy-2

ಧಾರವಾಡ: ನ್ಯಾಯಾಲಯದ ಬೇಲಿಫ್‌ಗಳ ಜೊತೆ ನಿವಾಸಿಗಳು ಮಾತಿನ ಚಕಮಕಿ ನಡೆಸಿದರು.

ಧಾರವಾಡ: ನಗರದ ವಿದ್ಯಾರಣ್ಯ ಕಾಲೇಜು ಬಳಿಯ ಡಾ| ಅಂಬೇಡ್ಕರ್‌ ಕಾಲೋನಿಯ ಸುಮಾರು 24 ಮನೆಗಳ ತೆರವು ಕ್ರಮ ಖಂಡಿಸಿ ಸ್ಥಳೀಯ ನಿವಾಸಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ಮನೆಗಳಿರುವ ಜಾಗ ದೈವಜ್ಞ ಹೌಸಿಂಗ್‌ ಸೊಸೈಟಿಗೆ ಸೇರಿದ್ದೆಂದು ಹೇಳಲಾಗುತ್ತಿದೆ. ಅತಿಕ್ರಮಣಗೊಂಡ ಸ್ಥಳವನ್ನು ದೈವಜ್ಞ ಹೌಸಿಂಗ್‌ ಸೊಸೈಟಿಗೆ ನೀಡುವಂತೆ ಜು. 18ರಂದು ನ್ಯಾಯಾಲಯ ಆದೇಶ ನೀಡಿರುವುದಾಗಿ ಹೇಳಿ ಅದರ ಆದೇಶ ಪ್ರತಿ ಹಿಡಿದು ನ್ಯಾಯಾಲಯದ ಬೇಲಿಫ್‌ಗಳು ಜೆಸಿಬಿಯೊಂದಿಗೆ ಆಗಮಿಸಿದ್ದರು. ಈ ವೇಳೆ ಕಾಲೋನಿಯ 24 ಮನೆಗಳನ್ನು ತೆರವುಗೊಳಿಸಲು ನ್ಯಾಯಾಲಯ ನೀಡಿರುವ ಆದೇಶದ ಬಗ್ಗೆ ಮಾಹಿತಿ ನೀಡಿ, ತೆರವುಗೊಳಿಸಲು ಮುಂದಾದರು.

ನಾವು ಕಳೆದ 25-30 ವರ್ಷಗಳಿಂದ ಇಲ್ಲಿ ವಾಸವಾಗಿದ್ದು, ಏಕಾಏಕಿ ಆಗಮಿಸಿ ನೋಟಿಸ್‌ ನೀಡದೇ ಮನೆ ತೆರವು ಮಾಡಿದರೆ ಹೇಗೆ? ಇದರಿಂದ ನಮ್ಮ ಕುಟುಂಬಗಳು ಬೀದಿ ಪಾಲಾಗಲಿವೆ. ಯಾವುದೇ ಕಾರಣಕ್ಕೂ ಮನೆಗಳನ್ನು ತೆರವುಗೊಳಿಸಲು ಬಿಡಲ್ಲ ಎಂದು ನಿವಾಸಿಗಳು ಪ್ರತಿರೋಧ ಒಡ್ಡಿದರು.

ಆದರೆ ಇದಕ್ಕೆ ಒಪ್ಪದ ಬೇಲಿಫ್‌ಗಳು, ನ್ಯಾಯಾಲಯ ಆದೇಶ ಪಾಲನೆ ಮಾಡಬೇಕು. ಮನೆಯಲ್ಲಿನ ವಸ್ತುಗಳನ್ನು ತೆರವುಗೊಳಿಸಲು ಒಂದು ಗಂಟೆ ಅವಕಾಶ ನೀಡಲಾಗುವುದು. ನಂತರ ನಾವು ತೆರವು ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಈ ವೇಳೆ ಕೋರ್ಟ್‌ ಬೇಲಿಫ್‌ಗಳು ಹಾಗೂ ನಿವಾಸಿಗಳ ಮಧ್ಯೆ ಕೆಲ ಹೊತ್ತು ಮಾತಿನ ಚಕಮಕಿ ಉಂಟಾಯಿತು. ಬಿಗುವಿನ ವಾತಾವರಣ ನಿರ್ಮಾಣವಾದ ಕಾರಣ ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿದರು.

ಕಾರ್ಯಾಚರಣೆಗೆ ಮುಂದಾಗಬೇಡಿ. ಇದರಿಂದ ಅನಾಹುತ ನಡೆಯುವ ಸಂಭವವಿದ್ದು, ಮೊದಲು ನಮಗೆ ಮಾಹಿತಿ ಕೊಡಿ. ನಮ್ಮ ಸಮ್ಮುಖದಲ್ಲಿ ಕಾರ್ಯಾಚರಣೆ ಆರಂಭಿಸುವಂತೆ ಪೊಲೀಸರು ನ್ಯಾಯಾಲಯದ ಬೇಲಿಫ್‌ಗಳಿಗೆ ಸಲಹೆ ನೀಡಿದರು. ಇದಕ್ಕೆ ಸಮ್ಮತಿಸಿದ ಬೇಲೀಫಗಳು, ಕಾರ್ಯಾಚರಣೆ ಮುಂದೂಡಿದರು. ತೆರವು ಕಾರ್ಯಾಚರಣೆಗೆ ಪೊಲೀಸರ ಭದ್ರತೆ ಒದಗಿಸುವ ಕುರಿತು ಜು. 24ರಂದು ಆದೇಶ ನೀಡಲಿದ್ದು, ಅಷ್ಟರೊಳಗೆ ನಿವಾಸಿಗಳು ಸ್ಥಳಾಂತರ ಆಗಬೇಕು ಎಂದು ಬೇಲಿಫ್‌ಗಳು ಎಚ್ಚರಿಕೆ ನೀಡಿ ತೆರಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.