
ಚಂದ್ರಶೇಖರ ಗುರೂಜಿ ಅಂತ್ಯಕ್ರಿಯಗೆ ಬಂದ ನಿಡಸೋಸಿ ಶ್ರೀ ಕಾರು ಅಪಘಾತ
ಚಂದ್ರಶೇಖರ ಗುರೂಜಿಯ ಅಂತ್ಯಕ್ರಿಯೆ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಘಟನೆ
Team Udayavani, Jul 6, 2022, 8:33 PM IST

ಧಾರವಾಡ : ಡಾ|ಚಂದ್ರಶೇಖರ ಗುರೂಜಿಯ ಅಂತ್ಯಕ್ರಿಯೆ ಮುಗಿಸಿಕೊಂಡು ಶ್ರೀಮಠದತ್ತ ಹೊರಟಿದ್ದ ನಿಡಸೋಸಿಯ ಸಿದ್ದಸಂಸ್ಥಾನ ಮಠದ ಪಂಚಮ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಅವರ ವಾಹನ ಅಪಘಾತವಾಗಿದ್ದು, ಸ್ವಾಮೀಜಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹುಬ್ಬಳ್ಳಿಯಲ್ಲಿ ಹತ್ಯೆಯಾದ ಡಾ|ಚಂದ್ರಶೇಖರ ಗುರೂಜಿ ಅವರ ಅಂತ್ಯಕ್ರಿಯೆಯಲ್ಲಿ ಶ್ರೀಗಳು ಪಾಲ್ಗೊಂಡು, ಮರಳಿ ಬೆಳಗಾವಿಯತ್ತ ಹೋಗುವಾಗ ಧಾರವಾಡ ತಾಲೂಕಿನ ಹಳೇ ತೇಗೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಶ್ರೀಗಳಿದ್ದ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯಲ್ಲಿ ಶ್ರೀಗಳು ಸೇರಿದಂತೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾರಿಗೂ ಪ್ರಾಣಾಪಾಯ ಆಗಿಲ್ಲ. ಸದ್ಯ ಶ್ರೀಗಳನ್ನು ಚಿಕಿತ್ಸೆಗಾಗಿ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಇದನ್ನೂ ಓದಿ : ಹುಣಸೂರು : ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಿದ : ಅಡಿಷನಲ್ ಎಸ್.ಪಿ. ಶಿವಕುಮಾರ್
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್ ಸಿಂಹ ವಾಗ್ದಾಳಿ

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ ಭೇಟಿ
MUST WATCH
ಹೊಸ ಸೇರ್ಪಡೆ
Uttara Kannada: ಜಿ.ಟಿ.ನಾಯ್ಕರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಅಭಿಮಾನಿಗಳ ಆಗ್ರಹ

Bantwal; ಕಾರು ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ

Sirsi ; ಆಕಸ್ಮಿಕವಾಗಿ ಬಾವಿಗೆ ಬಿದ್ದು 2 ವರ್ಷದ ಮಗು ಮೃತ್ಯು

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್