ಶೀಘ್ರ ರಸ್ತೆ ಅಗಲೀಕರಣ: ಡಿಸಿ

•ಹೊಸೂರು-ಉಣಕಲ್ಲ ಬೈಪಾಸ್‌ ರಸ್ತೆ•ಸ್ಥ‌§ಳ ಪರಿಶೀಲನೆ ನಡೆಸಿದ ದೀಪಾ

Team Udayavani, Aug 4, 2019, 9:39 AM IST

ಹುಬ್ಬಳ್ಳಿ: ಹೊಸೂರು-ಉಣಕಲ್ ಬೈಪಾಸ್‌ ರಸ್ತೆಯ ನೀಲನಕ್ಷೆಯನ್ನು ಜಿಲ್ಲಾಧಿಕಾರಿ ದೀಪಾ ಚೋಳನ್‌ ಪರಿಶೀಲಿಸಿದರು.

ಹುಬ್ಬಳ್ಳಿ: ಕೇಂದ್ರ ರಸ್ತೆ ನಿಧಿಯಿಂದ ನಿರ್ಮಿಸಲಾಗುತ್ತಿರುವ ಹೊಸೂರು- ಉಣಕಲ್ಲ ಬೈಪಾಸ್‌ ರಸ್ತೆಯಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣ ಸಂಪರ್ಕಿಸುವ ರಸ್ತೆ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು.

ಶನಿವಾರ ಹೊಸೂರು ವೃತ್ತದಿಂದ ನೂತನ ಕೋರ್ಟ್‌ ಸಂಕೀರ್ಣ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿ ಹು-ಧಾ ಮಹಾನಗರ ಪಾಲಿಕೆ ಆಯುಕ್ತರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯನಿರ್ವಾಹಕ ಅಭಿಯಂತರು, ಲೋಕೋಪಯೋಗಿ ಇಲಾಖೆ ಅಭಿಯಂತರು, ಬಿಆರ್‌ಟಿಎಸ್‌ ಹಾಗೂ ಹೆಸ್ಕಾಂ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ರಸ್ತೆ ನಿರ್ಮಾಣ ಕಾಮಗಾರಿ ಈಗಾಗಲೇ ತಡವಾಗಿದೆ. ರಸ್ತೆ ಅಗಲೀಕರಣ ಕುರಿತು ಪಾಲಿಕೆ ಅಧಿಕಾರಿಗಳು ಸರ್ವೇ ಪೂರ್ಣಗೊಳಿಸಿದ್ದು, ದಾಖಲೆಗಳ ಅನುಸಾರ ಪಾಲಿಕೆ ಜಾಗ ಹೆಚ್ಚಿದೆ. ಹಾಗಾಗಿ ಕಾಮಗಾರಿ ಕೈಗೊಳ್ಳಲು ಯಾವುದೇ ತೊಂದರೆ ಇಲ್ಲ ಎಂದರು.

ರಸ್ತೆ ನಿರ್ಮಾಣದಿಂದ ನೂತನ ನ್ಯಾಯಾಲಯ ಸಂಕೀರ್ಣ ಹಾಗೂ ಬಿಆರ್‌ಟಿಎಸ್‌ ಬಸ್‌ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಿದಂತೆ ಆಗುತ್ತದೆ. ರಸ್ತೆ ಕಿರಿದಾಗಿರುವುದರಿಂದ ಕಾಮಗಾರಿ ಕೈಗೊಳ್ಳಲು ಅಡಚಣೆ ಉಂಟಾಗಿತ್ತು. ರಸ್ತೆಯಲ್ಲಿ ಉಂಟಾಗಿರುವ ಒತ್ತುವರಿ ಮನೆಗಳು, ಮರಗಳು ಹಾಗೂ ಹೆಸ್ಕಾಂ ಕಂಬಗಳನ್ನು ಶೀಘ್ರ ಸ್ಥಳಾಂತರ ಮಾಡಲಾಗುವುದು. ಗೋಕುಲ ರಸ್ತೆ ಸಂಪರ್ಕಿಸುವ ವೃತ್ತದಿಂದ ನ್ಯಾಯಾಲಯದ ಕಡೆ 110 ಅಡಿ ವರೆಗೆ ಮನೆಗಳನ್ನು ನಿರ್ಮಿಸಲಾಗಿದೆ. ಇವರಿಗೆ ಆಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು. ಒಟ್ಟು 66 ಮನೆಗಳನ್ನು ಸ್ಥಳಾಂತರಿಸಲಾಗುತ್ತಿದೆ. 14 ಮರಗಳನ್ನು ಕಡಿಯಲು ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ. ನಿಗದಿತ ವೇಳಾಪಟ್ಟಿ ಸಿದ್ಧ್ದಪಡಿಸಿ ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ವಿವರಿಸಿದರು.

ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಸ್ಮಾರ್ಟ್‌ಸಿಟಿ ಅಧಿಕಾರಿ ಶಕೀಲ್ ಅಹ್ಮದ್‌, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತ ವಿರೂಪಾಕ್ಷಪ್ಪ ಯಮಕನಮರಡಿ ಇನ್ನಿತರರಿದ್ದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

  • ಧಾರವಾಡ: ಹನಿ ನೀರನ್ನು ಪರಿಪೂರ್ಣವಾಗಿ ಬಳಸಿ, ನಿಗದಿತ ಸಮಯದಲ್ಲಿ ಅದನ್ನು ಹಣವಾಗಿ ಪರಿವರ್ತಿಸುವ ಕೃಷಿ ವಿಧಾನವನ್ನು ಜಗತ್ತಿಗೆ ಮಾದರಿಯಾಗಿ ಕೊಟ್ಟಿದ್ದು ಇಸ್ರೇಲ್‌...

  • ಹುಬ್ಬಳ್ಳಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ದಿನವಾದ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಯಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ...

  • ಧಾರವಾಡ: ಕೃಷಿ ಮೇಳದ ಜಾನುವಾರು ಪ್ರದರ್ಶನದಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ಸಲ ಜಾನುವಾರುಗಳ ಸಂಖ್ಯೆ ಕಡಿಮೆ ಇದ್ದು, ವೀಕ್ಷಕರ ಸಂಖ್ಯೆಯೂ ತೀರಾ ಕಡಿಮೆ ಇತ್ತು....

  • ಧಾರವಾಡ: ದ್ರಾಕ್ಷಾರಸ ಮದಿರೆಯಾಗಿ ಮತ್ತೇರಿಸುವುದು ಇತಿಹಾಸದಲ್ಲಿತ್ತು. ಅದೇ ದ್ರಾಕ್ಷಾರಸ ವೈನ್‌ ಎಂಬ ಹೆಸರಿನೊಂದಿಗೆ ಆಧುನಿಕ ಜಗತ್ತಿನಲ್ಲಿ ಹೆಸರಾಗಿದೆ. ಇದೀಗ...

  • ಧಾರವಾಡ: ಕೃಷಿ ವಿಶ್ವವಿದ್ಯಾಲಯಗಳು ರೈತರ ಜೊತೆ ಕೃಷಿ ಅಭಿವೃದ್ಧಿಗೆ ಜಂಟಿ ಪ್ರಯೋಗ ಮಾಡುವುದು ಹಾಗೂ ಕೃಷಿ ಪದವೀಧರರು ಹೊಲಗಳಿಗೆ ಮರಳಿ ಆಧುನಿಕ ಕೃಷಿ ಮಾಡಿದರೆ...

ಹೊಸ ಸೇರ್ಪಡೆ