ಸರ್ಕಾರಿ ಶಾಲೆಗಳಿಂದ ಖಾಸಗಿ ಶಾಲೆಗಳಷ್ಟು  ಪ್ರಗತಿ ಅಸಾಧ್ಯ

Team Udayavani, Jul 5, 2018, 5:40 PM IST

5-july-22.jpg

ಬ್ಯಾಡಗಿ: ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ತಲುಪಲು ಸರ್ಕಾರಿ ಶಾಲೆಯ ಮಕ್ಕಳಿಂದ ಅಸಾಧ್ಯವಾಗುತ್ತಿದೆ. ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಉಚಿತ ಸೌಲಭ್ಯಗಳಿಗೆ ಮಾನ್ಯತೆ ಇಲ್ಲದಂತಾಗಿದೆ ಎಂಬುದಕ್ಕೆ ವಿದ್ಯಾರ್ಥಿಗಳಿಲ್ಲದೇ ಬಿಕೋ ಎನ್ನುತ್ತಿರುವ ಶಾಲೆಗಳೇ ಸಾಕ್ಷಿ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಕಳವಳ ವ್ಯಕ್ತಪಡಿಸಿದರು.

ಮೋಟೆಬೆನ್ನೂರಿನ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಎಸ್‌ ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ವಿದ್ಯಾವಂತರ ಸಂಖ್ಯೆಯನ್ನಾಧರಿಸಿ ಅಭಿವೃದ್ಧಿ ಮಾನದಂಡ ನಿರ್ಣಯವಾಗುತ್ತಿದೆ. ಹೀಗಾಗಿ ಯಾವುದೇ ಲಾಭವಿಲ್ಲದಿದ್ದರೂ ಸಾಕಷ್ಟು ಭರವಸೆಗಳನ್ನಿಟ್ಟು ಸರ್ಕಾರ ಕೋಟಿಗಟ್ಟಲೇ ಹಣವನ್ನು ವ್ಯಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಶೈಕ್ಷಣಿಕ ಪ್ರಗತಿಯನ್ನು ವಿದ್ಯಾರ್ಥಿಗಳು ಮೊಟಕುಗೊಳಿಸಬಾರದು. ಪ್ರತಿಷ್ಠೆಗಾಗಿ ಶೈಕ್ಷಣಿಕ ಪ್ರಮಾಣಪತ್ರ ಪಡೆಯುವುದನ್ನು ನಿಲ್ಲಿಸಬೇಕು ಎಂದರು.

ಖಾಸಗಿ ಶಿಕ್ಷಣ ಸಂಸ್ಥೆಗಳು, ದೇಶದ ಜನರಿಗೆ ಶೈಕ್ಷಣಿಕ ಸ್ವಾತಂತ್ರ ಕೊಡಿಸುವ ಮೂಲಕ ಮಾನವ ಸಂಪನ್ಮೂಲವನ್ನು ಸದ್ಭಳಕೆ ಮಾಡಿಕೊಳ್ಳುವಲ್ಲಿ ಸರ್ಕಾರಕ್ಕೆ ಅಪ್ರತ್ಯಕ್ಷವಾಗಿ ಸಹಕರಿಸುತ್ತಿವೆ, ಹೆಚ್ಚು ಶಿಕ್ಷಣವಂತರನ್ನು ಹೊಂದಿರುವ ಮುಂದುವರಿದ ಬಹುತೇಕ ರಾಷ್ಟ್ರಗಳು ಇಂದು ವಿಶ್ವವನ್ನೇ ತಮ್ಮ ಹಿಡಿತದಲ್ಲಿಟ್ಟುಕೊಳ್ಳುವಷ್ಟು ಬಲಶಾಲಿಯಾಗಿವೆ. ಇದಕ್ಕೆ ಪ್ರಮುಖ ಕಾರಣ ಅಲ್ಲಿನ ವಿದ್ಯಾವಂತರ ಪರಿಶ್ರಮ ಎಂದು ತಿಳಿಸಿದರು.

ಮುಚ್ಚುವ ಹಂತಕ್ಕೆ ಶಾಲೆಗಳು: ಕ್ಯಾನ್‌ಕೋರ್‌ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಕಿಶನಕುಮಾರ ಮಾತನಾಡಿ, ಸರ್ಕಾರಿ ಶಾಲೆಗಳಿಂದಲೇ ದೇಶದ ಮಕ್ಕಳು ಶೈಕ್ಷಣಿಕ ಸೌಲಭ್ಯಗಳನ್ನು ಪಡೆದುಕೊಳ್ಳುವಂತಾಗಿದ್ದರೇ ದೇಶದ ಪರಿಸ್ಥಿತಿ ಇನ್ನಷ್ಟು ಕ್ಲಿಷ್ಟಕರವಾಗಿರುತ್ತಿತ್ತು, ಸೌಲಭ್ಯಗಳ ಕೊರತೆಯಿಂದ ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗಿದ್ದು ಕೆಲವೆಡೆ ಮುಚ್ಚುವ ಹಂತಕ್ಕೆ ತಲುಪಿವೆ ಎಂದು ವಿಷಾದಿಸಿದರು.

ಇದೇ ಸಂದರ್ಭದಲ್ಲಿ ಸೇವೆಯಿಂದ ನಿವೃತ್ತರಾದ ಸಂಸ್ಥೆಯ ಅಧ್ಯಕ್ಷ ಪ್ರಭಾಕರ ಅತ್ತಿಗೇರಿ ಹಾಗೂ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸೇರಿದಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ 10ನೇ ರ್‍ಯಾಂಕ್‌   ಪಡೆದು ಸಾಧನೆಗೈದ ಉಮೇಶ್‌ ಬ್ಯಾಟಪ್ಪನವರ ಹಾಗೂ ಇನ್ನಿತರ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಗ್ರಾಪಂ ಅಧ್ಯಕ್ಷೆ ಲಲಿತಾ ಬ್ಯಾಟಪ್ಪನವರ, ನಿವೃತ್ತ ಪ್ರೊ| ಡಾ| ಪ್ರೇಮಾನಂದ ಲಕ್ಕಣ್ಣನವರ, ರಾಜೇಂದ್ರ ಕುಂಠೆ, ಗದಿಗೆಯ್ಯ ಹಾವೇರಿಮಠ, ಅಶೋಕ ಬಣಕಾರ, ಶಿವ ಪಾಲನಕರ, ಯು. ಎಸ್‌.ರುದ್ರದೇವರಮಠ, ಮಲ್ಲಿಕಾರ್ಜುನ ಬಳ್ಳಾರಿ, ಬಿ.ಸಿ.ಹಾವೇರಿಮಠ, ಎಲ್‌.ಎಸ್‌. ಹರಿಯಾಳ, ವಿ.ಎಫ್‌.ಕನ್ನಮ್ಮನವರ, ಎಸ್‌. ಎಚ್‌.ಗುಡಗೂರ, ಎ.ಬಿ.ಕುಲಕರ್ಣಿ, ಆಡಳಿತಾಧಿಕಾರಿ ವಿ.ವಿ.ಪಾಟೀಲ, ಮುಖ್ಯಶಿಕ್ಷಕರಾದ ಎಸ್‌.ಪಿ.ಚರಂತಿಮಠ, ಮಲ್ಲಿಕಾರ್ಜುನ ಮೋರೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಪ್ರಶಾಂತ್‌ ಗೊರವರ ಸ್ವಾಗತಿಸಿದರು. ಎ.ಟಿ.ಪೀಠದ ನಿರೂಪಿಸಿದರು. ನಿಂಗಪ್ಪ ಯಲಿಮಣ್ಣನವರ ವಂದಿಸಿದರು.

ಟಾಪ್ ನ್ಯೂಸ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Mamatha

West Bengal: ಬಾಂಗ್ಲಾ ಜೊತೆ ನೀರು ಹಂಚಿಕೆ ಮಾತುಕತೆಗೆ ಸಿಎಂ ಮಮತಾ ಆಕ್ಷೇಪ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

1-dd

Tulu Nadu ದೈವ ದೇವರ ಹೆಸರಿನಲ್ಲಿ ಬ್ರಿಜೇಶ್ ಚೌಟ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಆಕಾಶ ಮಠಪತಿ ಪ್ರಕರಣದಲ್ಲಿ 8 ಮಂದಿ ಬಂಧನ

Hubli; ಆಕಾಶ ಮಠಪತಿ ಪ್ರಕರಣದಲ್ಲಿ 8 ಮಂದಿ ಬಂಧನ

5-Kundgola

Kundgola: ಬೆನಕನಹಳ್ಳಿ ಜಲ ಜೀವನಾಡಿಗೆ ಅಸ್ವಚ್ಛತೆ ಬೇಡಿ

crime (2)

Hubballi; ಆಟೋರಿಕ್ಷಾ ಚಾಲಕರ, ಮಾಲಕರ ಸಂಘದ ಅಧ್ಯಕ್ಷ ನ ಪುತ್ರನ ಹತ್ಯೆ

Hubli; Protest demanding implementation of Dr. Sarojini Mahishi’s revised report

Hubli; ಡಾ.ಸರೋಜಿನಿ‌ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Janardhana Reddy: ಅಯೋಗ್ಯ ಜನಾರ್ದನ ರೆಡ್ಡಿ ಕ್ಷಮೆಯಾಚಿಸಲಿ; ಸಲೀಂ ಅಹ್ಮದ್‌

Janardhana Reddy: ಅಯೋಗ್ಯ ಜನಾರ್ದನ ರೆಡ್ಡಿ ಕ್ಷಮೆಯಾಚಿಸಲಿ; ಸಲೀಂ ಅಹ್ಮದ್‌

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.