ಮಗುವಿನ ತುಂಡಾದ ಪಾದ ಮರಳಿ ಜೋಡಿಸಿದ ಎಸ್‌ಡಿಎಂ ವೈದ್ಯರು

Team Udayavani, Aug 21, 2022, 1:10 PM IST

11

ಧಾರವಾಡ: ಬೈಕ್‌ ಅಪಘಾತದಲ್ಲಿ ತುಂಡಾಗಿದ್ದ ಎರಡು ವರ್ಷದ ಮಗುವಿನ ಪಾದವನ್ನು ಶಸ್ತ್ರಚಿಕಿತ್ಸೆ ಮೂಲಕ ಮರಳಿ ಜೋಡಿಸುವ ಮೂಲಕ ಎಸ್‌ಡಿಎಂ ವೈದ್ಯರು ಗಮನ ಸೆಳೆದಿದ್ದಾರೆ.

ಕಳೆದ ಗುರುವಾರ ಸಂಜೆ ಗದಗ ಸಮೀಪ ಸಂಚರಿಸುತ್ತಿದ್ದ ತಂದೆ-ತಾಯಿ ಮತ್ತು ಮಗು ಬೈಕ್‌ ಅಪಘಾತವಾಗಿ ಕೆಳಕ್ಕೆ ಬಿದ್ದಿದ್ದರು. ಈ ವೇಳೆ ಮಗುವಿನ ಪಾದ ಬೈಕ್‌ ಚಕ್ರದಲ್ಲಿ ಸಿಲುಕಿ ತುಂಡಾಗಿತ್ತು. ಗದಗದಲ್ಲಿ ಯಾವುದೇ ಸೌಲಭ್ಯವಿಲ್ಲದೇ ಪೋಷಕರು ಆತಂಕಕ್ಕೆ ಒಳಗಾಗಿದ್ದರು. ಡಾ| ಪ್ರಕಾಶ ಸಂಕನೂರ ಪ್ರಥಮ ಚಿಕಿತ್ಸೆ ನಡೆಸಿ ಮಗುವನ್ನು ಎಸ್‌ಡಿಎಂ ಆಸ್ಪತ್ರೆಗೆ ತುಂಡಾದ ಕಾಲಿನ ಸಮೇತ ಕಳುಹಿಸಿಕೊಟ್ಟರು.

ಮಗುವಿನ ತಪಾಸಣೆ ಮುಗಿದ ತಕ್ಷಣ(20 ನಿಮಿಷದೊಳಗೆ) ಮಗು ಹಾಗೂ ತುಂಡಾದ ಅಂಗಾಲು ಶಸ್ತ್ರಚಿಕಿತ್ಸಾ ಕೊಠಡಿ ತಲುಪಿದೆ. ನಾಲ್ಕು ಗಂಟೆಗಳ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರು ಅಂಗಾಲನ್ನು ಯಶಸ್ವಿಯಾಗಿ ಮರುಜೋಡಿಸಿದ್ದಾರೆ. ಹಿರಿಯ ಪ್ಲಾಸ್ಟಿಕ್‌ ಸರ್ಜನ್‌ ಡಾ| ನಿರಂಜನಕುಮಾರ್‌ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆದಿದ್ದು, ಡಾ| ಅವಿನಾಶ ಪ್ರಭು, ಡಾ| ಅನಿಲ್‌ ಆರ್‌. (ಪ್ಲಾಸ್ಟಿಕ್‌ ಸರ್ಜನ್‌), ಡಾ| ಶ್ರೀನಾಥ ಕೆ.ಎಂ., ಡಾ| ಅನಮೊಲ್‌ (ಎಲುಬು ತಜ್ಞ), ಡಾ| ಆಸಿಫ್‌, (ಅರವಳಿಕೆ ತಜ್ಞ), ಯುವರಾಜ ಮತ್ತು ಸಹಾಯಕ ತಂಡ ತೊಡಗಿಸಿಕೊಂಡಿದ್ದರು.

ಇದುವರೆಗೆ ಎಸ್‌ಡಿಎಂ ತಂಡವು 28 ರೋಗಿಗಳಿಗೆ ಯಶಸ್ವಿಯಾಗಿ ಕೈ ಅಥವಾ ಕೈಬೆರಳುಗಳ ಮರು ಜೋಡಣೆ ಶಸ್ತ್ರಚಿಕಿತ್ಸೆ ನಡೆಸಿದ್ದು, ಇದೇ ಮೊದಲ ಬಾರಿಗೆ ಅಂಗಾಲಿನ ಮರುಜೋಡಣೆ ಯಶಸ್ವಿಯಾಗಿ ಪೂರೈಸಿದೆ. ಇದು ದೇಶದಲ್ಲಿಯೇ ಅತ್ಯಂತ ವಿರಳವಾಗಿ ನಡೆದ ಶಸ್ತ್ರಚಿಕಿತ್ಸೆಯಾಗಿದೆ.

ತುಂಡಾದ ಭಾಗವನ್ನು ನೀರಿನಲ್ಲಿ ತೊಳೆದು ಸ್ವಚ್ಛ ಪ್ಲಾಸ್ಟಿಕ್‌ ಚೀಲದಲ್ಲಿ ಹಾಕಿ, ಮಂಜುಗಡ್ಡೆಗಳು ತುಂಬಿರುವ ಪೆಟ್ಟಿಗೆಯಲ್ಲಿ ಅದನ್ನು ಇಟ್ಟು ಆದಷ್ಟು ಬೇಗ ಆಸ್ಪತ್ರೆಗೆ ಬರಬೇಕು. ಎಸ್‌ಡಿಎಂ ಆಸ್ಪತ್ರೆಯಲ್ಲಿ ತುಂಡಾದ ಅಂಗಾಗ ಮರುಜೋಡಣೆಗೆ ಬೇಕಾಗಿರುವ ಸಕಲ ಸೌಲಭ್ಯಗಳು ಇವೆ. – ಡಾ| ನಿರಂಜನಕುಮಾರ್‌

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.