ಪ್ರತ್ಯೇಕ ಧರ್ಮ ಹೋರಾಟಕ್ಕೆ ಮರುಜೀವ


Team Udayavani, Jun 9, 2018, 6:05 AM IST

basawaraj-horatti.jpg

ಹುಬ್ಬಳ್ಳಿ: ವಿಧಾನಸಭೆ ಚುನಾವಣೆವರೆಗೆ ಮಾತ್ರ ಲಿಂಗಾಯತ ಪ್ರತ್ಯೇಕ ಹೋರಾಟ ಎಂಬುದು ಅನೇಕರ ಅನಿಸಿಕೆಯಾಗಿತ್ತು. ಆದರೆ, ಲಿಂಗಾಯತ ಪ್ರತ್ಯೇಕ ಹೋರಾಟ ಮತ್ತೆ ಪುಟಿದೇಳಲು ಸಜ್ಜಾಗಿದ್ದು, ಮಾಜಿ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿ ಸೋಮವಾರ ಮಹತ್ವದ ಸಭೆ ನಡೆಯಲಿದೆ ಎನ್ನಲಾಗಿದೆ.

ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅಲ್ಪವಿರಾಮ ಪಡೆದುಕೊಂಡಿತ್ತಾದರೂ, ಇದೀಗ ಮತ್ತೂಂದು ಸುತ್ತಿನ ಹೋರಾಟಕ್ಕೆ ವೇದಿಕೆ ಸಜ್ಜುಗೊಳಿಸಲು ಲಿಂಗಾಯತ ನಾಯಕರು ಮುಂದಾಗಿದ್ದಾರೆ. ಪ್ರತ್ಯೇಕ ಧರ್ಮ ಹೋರಾಟದಲ್ಲಿ ತೊಡಗಿದ ನಾಯಕರಲ್ಲಿ ಕೆಲವರು ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರೆ, ಇನ್ನು ಕೆಲವರು ಗೆದ್ದರೂ ಸಚಿವ ಸಂಪುಟದಿಂದ ಹೊರಗುಳಿಯುವಂತಾಗಿದೆ. ಹೋರಾಟವನ್ನು ಮತ್ತೆ ಚುರುಕುಗೊಳಿಸುವ ನಿಟ್ಟಿನಲ್ಲಿ ನಾಯಕರು ಮಹತ್ವದ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಲಿಂಗಾಯತ ಪ್ರತ್ಯೇಕ ಧರ್ಮದ ಮುಂಚೂಣಿ ನಾಯಕರನ್ನು ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟದಿಂದ ಹೊರಗಿಟ್ಟಿರುವುದು, ಲಿಂಗಾಯತ ಸಮಾಜಕ್ಕೆ ನಿರೀಕ್ಷಿತ ಸ್ಥಾನಗಳನ್ನು ನೀಡದಿರುವುದು ಸಹಜವಾಗಿಯೇ ಸಮಾಜದ ಅಸಮಾಧಾನಕ್ಕೆ ಕಾರಣವಾಗಿದೆ. ಆದರೆ, ಲಿಂಗಾಯತ ಪ್ರತ್ಯೇಕ ಧರ್ಮದ ಪರ-ವಿರೋಧ ವಿಚಾರದಲ್ಲಿ ಸಮ್ಮಿಶ್ರ ಸರ್ಕಾರ ತನ್ನದೇ ಲೆಕ್ಕಾಚಾರ ಹೊಂದಿದೆ ಎಂದು ಹೇಳಲಾಗುತ್ತಿದೆ.

ಲೋಕಸಭೆ ಚುನಾವಣೆ ಉದ್ದೇಶ: ಪ್ರತ್ಯೇಕ ಧರ್ಮ ಹೋರಾಟದಲ್ಲಿ ಪರ ಹಾಗೂ ವಿರೋಧವಾಗಿ ಸಕ್ರಿಯರಾಗಿದ್ದ ನಾಯಕರನ್ನು ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸಂಪುಟದಿಂದ ಹೊರಗಿಟ್ಟಿದ್ದರ ಹಿಂದೆ 2019ರಲ್ಲಿ ಎದುರಾಗುವ ಲೋಕಸಭಾ ಚುನಾವಣೆಯ ವೇಳೆ ಪ್ರತಿಕೂಲ ಪರಿಣಾಮ ಬೀರದಿರಲಿ ಎಂಬ ಉದ್ದೇಶ ಇದೆ ಎನ್ನಲಾಗುತ್ತಿದೆ. ಪ್ರತ್ಯೇಕ ಧರ್ಮದ ವಿಚಾರದಲ್ಲಿ ಮೊದಲಿನಿಂದಲೂ ಅಂತರ ಕಾಯ್ದುಕೊಂಡಿದ್ದ ಹಾಗೂ ಹೋರಾಟದ ವಿರುದ್ಧ ಹೇಳಿಕೆ ನೀಡಿದ್ದ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಜೆಡಿಎಸ್‌ನಿಂದ ಯಾವುದೇ ಕಾರಣಕ್ಕೂ ಬಸವರಾಜ ಹೊರಟ್ಟಿ ಅವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಬಾರದು ಎಂಬ ಫ‌ರ್ಮಾನು ಹೊರಡಿಸಿದ್ದರು ಎನ್ನಲಾಗಿದೆ.

ಕಾಂಗ್ರೆಸ್‌ ಹೈಕಮಾಂಡ್‌ ಸಹ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ನಿರೀಕ್ಷಿತ ಯಶಸ್ಸು ತಂದು ಕೊಟ್ಟಿಲ್ಲ. ಅಲ್ಲದೆ ವಿವಾದ ಸೃಷ್ಟಿಗೆ ಕಾರಣವಾಗಿದ್ದು, ಲಿಂಗಾಯತ ಪ್ರತ್ಯೇಕ ಧರ್ಮದ ಪರ ಹಾಗೂ ವಿರೋಧವಾಗಿ ಸಕ್ರಿಯರಾಗಿದ್ದ ನಾಯಕರನ್ನು ಸಂಪುಟದಿಂದ ದೂರ ಇರಿಸಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಲಿಂಗಾಯತ, ವೀರಶೈವ-ಲಿಂಗಾಯತ ವಿವಾದ ತೀವ್ರತೆ ಪಡೆದಿದ್ದು, ಎರಡು ಕಡೆಯವರಲ್ಲಿ ಯಾವುದೇ ಒಂದು ಗುಂಪಿಗೆ ಸಂಪುಟದಲ್ಲಿ ಅವಕಾಶ ನೀಡಿದರೂ ಇನ್ನೊಂದು ಗುಂಪಿನ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಲೋಕಸಭಾ ಚುನಾವಣೆ ವೇಳೆಯೂ ಇದು  ಪ್ರಭಾವ ಬೀರಬಹುದಾಗಿದೆ ಎಂಬ ಲೆಕ್ಕಾಚಾರ ಜೆಡಿಎಸ್‌, ಕಾಂಗ್ರೆಸ್‌ ವರಿಷ್ಠರ ಲೆಕ್ಕಾಚಾರವಾಗಿದೆ ಎನ್ನಲಾಗಿದೆ.

ಸೋಮವಾರ ಮಹತ್ವದ ನಿರ್ಣಯ?: ಪ್ರತ್ಯೇಕ ಧರ್ಮದ ಹೋರಾಟವನ್ನು ಮತ್ತೆ ತೀವ್ರಗೊಳಿಸುವ ನಿಟ್ಟಿನಲ್ಲಿ ಎಂ.ಬಿ. ಪಾಟೀಲ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸೋಮವಾರ ಮಹತ್ವದ ಸಭೆ ನಡೆಯಲಿದೆ ಎನ್ನಲಾಗಿದೆ. ಮುಂದಿನ ಹೋರಾಟದ ಸ್ವರೂಪ ಏನಾಗಿರಬೇಕು, ಬೇಡಿಕೆ ಈಡೇರುವವರೆಗೆ ಯಾವ ರೀತಿಯ ಒತ್ತಡವನ್ನು ಸರ್ಕಾರಗಳ ಮೇಲೆ ತರಬೇಕು ಎಂಬುದರ ಬಗ್ಗೆ ಚರ್ಚೆ ನಡೆದು ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಸುಪ್ರೀಂ ಮೊರೆ: ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನ ನೀಡಿಕೆ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಈಗಾಗಲೇ ಕೇಂದ್ರಕ್ಕೆ ಶಿಫಾರಸು ಮಾಡಿದ್ದು, ಕೇಂದ್ರದ ಮೇಲೆ ಒತ್ತಡ ತರುವ ಜತೆಗೆ  ಸೂಕ್ತ ಸ್ಪಂದನೆ ದೊರೆಯದಿದ್ದರೆ ಕಾನೂನು ಸಮರಕ್ಕೂ ಮುಂದಾಗಲು ಲಿಂಗಾಯತ ನಾಯಕರು ಮುಂದಾಗಿದ್ದಾರೆ. ಕೇಂದ್ರ ಸರ್ಕಾರಕ್ಕೆ ಈಗಾಗಲೇ ಅಲ್ಪಸಂಖ್ಯಾತ ಧರ್ಮ ಸ್ಥಾನದ ಶಿಫಾರಸು ಹೋಗಿದ್ದು, ಕೇಂದ್ರ ಅದಕ್ಕೆ ಅನುಮೋದನೆ ನೀಡಬೇಕು, ಇಲ್ಲವೆ ತಿರಸ್ಕರಿಸಬೇಕು. ಅದು ಬಿಟ್ಟು ಮತ್ತೂಮ್ಮೆ ಶಿಫಾರಸು ಮಾಡಿ ಎಂದು ಹೇಳುವುದನ್ನು ಸಹಿಸಲಾಗದು. ಇದೇ ಸ್ಥಿತಿ ಮುಂದುವರಿದರೆ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇದು ಕೇವಲ ವಿಧಾನಸಭಾ ಚುನಾವಣೆಗಾಗಿ ಮಾತ್ರ ಕೈಗೊಳ್ಳುವ ಹೋರಾಟವಲ್ಲ ಎಂಬುದನ್ನು ನಾವು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ನಮ್ಮ ಹೋರಾಟ ಯಾವುದೇ ಪಕ್ಷದ ಪರ ಅಥವಾ ವಿರುದ್ಧ ಅಲ್ಲ. ರಾಜಕೀಯಕ್ಕೂ ಹೋರಾಟಕ್ಕೂ ಸಂಬಂಧವಿಲ್ಲ. ಲಿಂಗಾಯತ ಸಮಾಜಕ್ಕೆ ಸೌಲಭ್ಯ ದೊರೆಯಬೇಕು, ಬಸವ ತತ್ವ ಮೊಳಗಬೇಕು ಎಂಬುದಾಗಿದೆ.
– ಬಸವರಾಜ ಹೊರಟ್ಟಿ, ಅಧ್ಯಕ್ಷ, ಜಾಗತಿಕ ಲಿಂಗಾಯತ ಮಹಾ ಪರಿಷತ್‌

ರಾಜಕೀಯ ಪ್ರಾತಿನಿಧ್ಯ: ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ
ಬೆಂಗಳೂರು: ಚುನಾವಣೆಗೂ ಮೊದಲು ವೀರಶೈವ ಮತ್ತು ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಹೋರಾಟ ನಡೆಸಿದ್ದ ವೀರಶೈವ ಲಿಂಗಾಯತರು ಈಗ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಒಡೆದ ಮನಸ್ಸುಗಳನ್ನು ಒಗ್ಗೂಡಿಸಿ ಒಂದಾಗಿ ಹೋರಾಟ ನಡೆಸಲು ಚಿಂತನೆ ನಡೆಸಿದ್ದಾರೆ.

ಈ ಕುರಿತು ಶುಕ್ರವಾರ ಎರಡೂ ಕಡೆಯ ನಾಯಕರ ನಡುವೆ ಔಪಚಾರಿಕ ಮಾತುಕತೆ ನಡೆದಿದ್ದು, ಸಮಾಜದ ಒಗ್ಗಟ್ಟು ಪ್ರದರ್ಶಿಸಿ ರಾಜಕೀಯ ಪ್ರಾತಿನಿಧ್ಯ ಪಡೆಯಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಅಖೀಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರೊಂದಿಗೆ ಜಾಗತಿಕ ಲಿಂಗಾಯತ ಮಹಾ ಸಭೆ ರಾಜ್ಯಾಧ್ಯಕ್ಷ ಡಾ. ಶರಣ ಪ್ರಕಾಶ್‌ ಪಾಟೀಲ್‌ ಮಾತುಕತೆ ನಡೆಸಿದ್ದು ಎರಡೂ ಬಣಗಳ ನಾಯಕರು ಜೂನ್‌ 13 ಅಥವಾ 14 ರಂದು ಸಭೆ ಸೇರಿ ಮುಂದಿನ ಹೋರಾಟಗಳ ಕುರಿತು ಚರ್ಚಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

– ಅಮರೇಗೌಡ ಗೋನವಾರ

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.