ಬಡವರ ಪರ ಶಿವಳ್ಳಿ ಕಾಳಜಿಯೇ ಕುಸುಮಾವತಿಗೆ ಶ್ರೀರಕ್ಷೆ
Team Udayavani, May 17, 2019, 10:13 AM IST
ಹುಬ್ಬಳ್ಳಿ: ಸಚಿವರಾಗಿದ್ದ ಸಿ.ಎಸ್. ಶಿವಳ್ಳಿ ಕುಂದಗೋಳ ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಕ್ಷೇತ್ರದ ಬಡವರ ಪರವಾದ ಕಾಳಜಿ ಅವರ ಪತ್ನಿ ಕುಸುಮಾವತಿ ಅವರಿಗೆ ಶ್ರೀರಕ್ಷೆಯಾಗಲಿದೆ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ಯರಗುಪ್ಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಐದು ವರ್ಷಗಳ ಕಾಲ ತಮ್ಮ ಆಡಳಿತಾವಧಿಯಲ್ಲಿ ದೇಶದ ಯಾವ ರಾಜ್ಯಗಳಲ್ಲೂ ನೀಡದಷ್ಟು ಉತ್ತಮವಾದ ಕಾರ್ಯಗಳನ್ನು ಬಡವರಿಗೆ, ದಲಿತರಿಗೆ ನೀಡಿದ್ದಾರೆ. ಈ ಎಲ್ಲ ಯೋಜನೆಗಳನ್ನು ಎಚ್.ಡಿ. ಕುಮಾರಸ್ವಾಮಿ ಅವರು ಮುಂದುವರಿಸಿಕೊಂಡು ಹೊರಟಿದ್ದಾರೆ. ನಮ್ಮ ಸರಕಾರ ಅಧಿಕಾರದಲ್ಲಿದ್ದಾಗ ಹಾಗೂ ಇಂದಿನ ಮೈತ್ರಿ ಸರಕಾರ ರೈತರ ಸಾಲ ಮನ್ನಾ ಮಾಡಿದೆ. ಈ ನಾಡಿನ ಅನ್ನದಾತರ ಕಣ್ಣೀರು ಒರೆಸುವ ಕೆಲಸ ನಾವು ಮಾಡಿದ್ದೇವೆ ಎಂದರು.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಯಾವುದೇ ಜನಪರ ಕಾರ್ಯಗಳನ್ನು ನೀಡಿಲ್ಲ. ಈ ದೇಶದಲ್ಲಿ ಶಾಂತಿ ನೆಲೆಸುವ ಕಾರಣಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆಯಿಂದ ರಾಜಕಾರಣ ಮಾಡುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್, ಸಿದ್ದರಾಮಯ್ಯ ಅವರು ಒಗ್ಗೂಡಿಕೊಂಡು ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದಾರೆ. ಬಿಜೆಪಿ ನಾಯಕರ ವಿವಾದಾತ್ಮಕ ಹೇಳಿಕೆಗಳಿಗೆ ನಾನು ಉತ್ತರಿಸಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ