ಸಿಎಂ ಜತೆ ಶೆಟ್ಟರ್‌ ವಿಡಿಯೋ ಸಂವಾದ


Team Udayavani, Jul 14, 2020, 11:57 AM IST

ಸಿಎಂ ಜತೆ ಶೆಟ್ಟರ್‌ ವಿಡಿಯೋ ಸಂವಾದ

ಧಾರವಾಡ: ಕೋವಿಡ್ ಮಹಾಮಾರಿ ನಿಯಂತ್ರಣ ಕ್ರಮಗಳು, ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ, ಮಳೆ ಪ್ರಮಾಣ, ನೀರಾವರಿ ಯೋಜನೆಗಳ ಕುರಿತಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಪ್ರಮುಖ ವಿಚಾರಗಳು ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪನವರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಕೈಗೊಂಡ ವಿಡಿಯೋ ಸಂವಾದದಲ್ಲಿ ಪ್ರಸ್ತಾಪವಾದವು.

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್‌ ಶೆಟ್ಟರ, ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಅವರು ಜಿಲ್ಲೆಯ ಕೋವಿಡ್‌ ನಿಯಂತ್ರಣ ಕ್ರಮಗಳು, ಮಳೆ ಪ್ರಮಾಣ, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು, ನೀರಾವರಿ ಸೌಕರ್ಯಗಳ ಕುರಿತು ಮಾಹಿತಿ ನೀಡಿದರು. ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳು ಧಾರವಾಡ ಸೇರಿದಂತೆ ವಿವಿಧ 11 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಧಿಕಾರಿಗಳೊಂದಿಗೆ ಚರ್ಚಿಸಿದರು.

ಸಚಿವ ಜಗದೀಶ ಶೆಟ್ಟರ ಮಾತನಾಡಿ, ನೆರೆ ಹೊರೆಯ ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆಗಾಗಿ ಕಿಮ್ಸ್‌ಗೆ ಬರುವುದು ಸಾಮಾನ್ಯ. ಜಿಲ್ಲೆಯಲ್ಲಿ ಇದುವರೆಗೆ 33ಜನ ಕೋವಿಡ್‌ ನಿಂದ ಮೃತಪಟ್ಟಿದ್ದಾರೆ. ಇದರಲ್ಲಿ ಶೇ.30 ಜನ ಬೇರೆ ಜಿಲ್ಲೆಯವರೇ ಆಗಿದ್ದಾರೆ. ಸೋಂಕು ತೀವ್ರತರವಾಗಿ ಏರಿಕೆಯಾಗುತ್ತಿರುವುದರಿಂದ ವಾಣಿಜ್ಯೋದ್ಯಮ ಸಂಸ್ಥೆ, ವ್ಯಾಪಾರಸ್ಥರ ಸಂಘಟನೆಗಳು ಮುಂಬರುವ 10 ದಿನಗಳ ಕಾಲ ಲಾಕ್‌ಡೌನ್‌ ಮಾಡುವುದು ಒಳಿತು ಎಂಬ ಅಭಿಪ್ರಾಯವನ್ನು ಸಾರ್ವಜನಿಕ ವಲಯದಲ್ಲಿ ವ್ಯಕ್ತಪಡಿಸುತ್ತಿದ್ದಾರೆಂದು ವಿವರಿಸಿದರು.

ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ದೃಢಪಟ್ಟು ಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ 1,135 ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ. ಲಕ್ಷಣ ರಹಿತ ರೋಗಿಗಳಿಗೆ 9,000 ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಕಳೆದ ಏಪ್ರಿಲ್‌ನಿಂದ ಪ್ರಸಕ್ತ ಜುಲೈ ತಿಂಗಳಿನವರೆಗೆ ಮುಂಗಾರು ಮಳೆ ಸರಾಸರಿಗಿಂತ ಅಧಿಕವಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮತ್ತು ವಿತರಣೆ ಸಮರ್ಪಕವಾಗಿದೆ ಎಂದರು.

ಹುಬ್ಬಳ್ಳಿ ಧಾರವಾಡ ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌, ಎಸ್ಪಿ ವರ್ತಿಕಾ ಕಟಿಯಾರ್‌, ಜಿಪಂ ಸಿಇ ಒ ಡಾಣಬಿ.ಸಿ. ಸತೀಶ್‌, ಮಹಾನಗರ ಪಾಲಿಕೆ ಆಯುಕ್ತ ಡಾಣಸುರೇಶ ಇಟ್ನಾಳ ಸೇರಿದಂತೆ ಕಿಮ್ಸ್‌, ಎಸ್‌ಡಿಎಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೃಷಿ, ನೀರಾವರಿ ಮತ್ತಿತರರ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.