ನಾಡಿದ್ದು ಸಿದ್ಧಾರೂಢ ಮಠ ಲಕ್ಷ ದೀಪೋತ್ಸವ

Team Udayavani, Nov 24, 2019, 10:45 AM IST

huballi-tdy-2

ಹುಬ್ಬಳ್ಳಿ: ಸದ್ಗುರು ಶ್ರೀ ಸಿದ್ಧಾರೂಢಸ್ವಾಮಿ ಮಠದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವ ನ. 26ರಂದು ಸಂಜೆ 6:30 ಗಂಟೆಗೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಠದ ಟ್ರಸ್ಟ್‌ ಕಮಿಟಿ ಚೇರ್ಮನ್ ದೇವೇಂದ್ರಪ್ಪ ಮಾಳಗಿ, ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಟ್ರಸ್ಟ್‌ ಕಮಿಟಿ ಮುಖ್ಯ ಆಡಳಿತಾಧಿಕಾರಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಈಶಪ್ಪ ಕೆ. ಭೂತೆ ಚಾಲನೆ ನೀಡಲಿದ್ದಾರೆ.

ಶ್ರೀಮಠದಲ್ಲಿ ಲಕ್ಷದೀಪೋತ್ಸವವನ್ನು ಕಳೆದ 25 ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರಸಕ್ತ ವರ್ಷ ರಾಜ್ಯದಲ್ಲಿ ಪ್ರವಾಹವುಂಟಾಗಿದ್ದರಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿಲ್ಲ. ವಾಹನಗಳ ಸಂಚಾರಕ್ಕೆ ಅಡಚಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀಮಠದ ಮುಂಭಾಗದ ಆವರಣದಲ್ಲಿ ಮಾತ್ರ ದೀಪೋತ್ಸವ ನಡೆಸಲಾಗುವುದು. 25-30 ಸಾವಿರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು.

ಸದ್ಗುರುವಿನ ಶಯನ ಮಂದಿರಕ್ಕೆ ನಿವೃತ್ತ ಅಧಿಕಾರಿ ಮುರಗೋಡ ಅವರು ಅಂದಾಜು 3.50 ಲಕ್ಷ ರೂ. ವೆಚ್ಚದಲ್ಲಿ ಬೆಳ್ಳಿ ಮತ್ತು ತಾಮ್ರದ ಚೌಕಟ್ಟು ನಿರ್ಮಿಸುತ್ತಿದ್ದಾರೆ. ಗೋಕಾಕದ ವಕೀಲರಾದ ಸೀಗಿಹಳ್ಳಿ ಅವರು ಅಂದಾಜು 85 ಕೆಜಿ ತೂಕದ ಬೆಳ್ಳಿ ರಥ, ಆನೆ ಅಂಬಾರಿ ನಿರ್ಮಿಸಿಕೊಟ್ಟಿದ್ದು, ಮೇ 14ರಿಂದ ಪ್ರತಿ ಸೋಮವಾರ ಸಿದ್ಧಾರೂಢ ಹಾಗೂ ಗುರುನಾಥರೂಢರ ಉತ್ಸವ ಮೂರ್ತಿಯ ಪ್ರದಕ್ಷಿಣೆ ಹಾಗೂ ತುಲಾಭಾರ ನಡೆಸಲಾಗುತ್ತಿದೆ. ಭಕ್ತರು 11 ಸಾವಿರ ರೂ. ಪಾವತಿಸಿದರೆ ಒಂದು ತಕ್ಕಡಿಯಲ್ಲಿ ಸಂಗಮುರಿ ಕಲ್ಲಿನಿಂದ ನಿರ್ಮಿಸಿದ 105 ಕೆಜಿ ತೂಕವುಳ್ಳ ಸಿದ್ಧಾರೂಢರ ಮೂರ್ತಿಯಿಟ್ಟು ನಾಣ್ಯದಲ್ಲಿ ತುಲಾಭಾರ ಮಾಡಲಾಗುತ್ತಿದೆ. ಭಕ್ತರ ಇಚ್ಛಾನುಸಾರ ಮುಂದಿನ ತಿಂಗಳ ಮೊದಲ ವಾರದಿಂದ ದವಸಧಾನ್ಯದ ತುಲಾಭಾರ ಆರಂಭಿಸಲಾಗುವುದು ಎಂದು ತಿಳಿಸಿದರು.

ಕವಿವಿಯ ತತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ಜುಕ್ತಿ ಹಿರೇಮಠ ಅವರು ಎಂಎ ಫಲಿತಾಂಶ ಬಂದ ನಂತರ ಶೈಕ್ಷಣಿಕ ವರ್ಷದಿಂದ ಪಿಎಚ್‌ಡಿ ಮಾಡಲಿಚ್ಛಿಸುವವಿದ್ಯಾರ್ಥಿಗಳಿಗೆ ಸಿದ್ಧಾರೂಢರ ಇತಿಹಾಸ, ಚರಿತ್ರೆ ಕುರಿತು ಅಧ್ಯಯನ ಮಾಡಲು ಒಂದು ವಿಷಯ ನೀಡುವುದಾಗಿ ತಿಳಿಸಿದ್ದಾರೆ. ಸಿದ್ಧಾರೂಢರ ಕುರಿತು ಪಿಎಚ್‌ಡಿ ಅಧ್ಯಯನ ಮಾಡಲಿಚ್ಛಿಸುವವರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಕೆರೆಯ ಮಧ್ಯಭಾಗದಲ್ಲಿ ಅಂದಾಜು 36ಲಕ್ಷ ರೂ. ವೆಚ್ಚದಲ್ಲಿ ಸಿದ್ಧಾರೂಢ-ಗುರುನಾಥರೂಢರ ಮಂಟಪ ಹಾಗೂ ಅದರ ಸುತ್ತಲು ಕಾರಂಜಿ ನಿರ್ಮಿಸಲು ಯೋಜಿಸಲಾಗಿದೆ. ಬೋಟ್‌ ವ್ಯವಸ್ಥೆ ಮೂಲಕ ಭಕ್ತರಿಗೆ ಮಂಟಪದ ದರ್ಶನ ಮಾಡಿಸಲು ಚಿಂತನೆ ನಡೆದಿದೆ. ಕೆರೆಗೆ ಗಲೀಜು ನೀರು ಬಾರದಂತೆ ಈಗಾಗಲೇ ಕೆರೆಯ ಸುತ್ತಲು ರಿಟೇನಿಂಗ್‌ ವಾಲ್‌ ಪೂರ್ಣಗೊಳಿಸಲಾಗಿದೆ. ಪಕ್ಕದಲ್ಲಿಯೇ ಉದ್ಯಾನವನ ನಿರ್ಮಿಸಲು ಯೋಜಿಸಲಾಗಿದೆ ಎಂದು ಹೇಳಿದರು.

ಧರ್ಮದರ್ಶಿಗಳಾದ ನಾರಾಯಣಪ್ರಸಾದಪಾಠಕ, ಜಗದೀಶ ಮಗಜಿಕೊಂಡಿ, ಗಣಪತಿ ನಾಯಕ, ಶ್ರೀಮಠದ ವ್ಯವಸ್ಥಾಪಕ ಈರಣ್ಣ ತುಪ್ಪದ, ತುಕಾರಾಮ ಗಣಾಚಾರಿ ಇದ್ದರು.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.