ಸ್ನೇಹಿತರು ಹೆದರಿಸಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Team Udayavani, Apr 13, 2019, 12:10 PM IST

ಹುಬ್ಬಳ್ಳಿ: ಬೈಲಹೊಂಗಲ ತಾಲೂಕು ಮದನಭಾವಿ ಗ್ರಾಮದ ವಿದ್ಯಾರ್ಥಿಯೊಬ್ಬ ನಗರದ ಲಾಡ್ಜ್ವೊಂದರಲ್ಲಿ ನೇಣಿಗೆ ಶರಣಾದ ಘಟನೆ ಶುಕ್ರವಾರ ಬೆಳಗ್ಗೆ ಇಲ್ಲಿನ ಕೋರ್ಟ್‌ ವೃತ್ತ ಬಳಿಯ ತೃಪ್ತಿ ಇಂಟರ್‌ ನ್ಯಾಷನಲ್‌ ಹೋಟೆಲ್‌ನಲ್ಲಿ ನಡೆದಿದೆ.
ಮದನಭಾವಿಯ ವಿಶಾಲ ಚನಗೌಡ ಹಟ್ಟಿಹೊಳಿ (20) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗಾವಿಯ ಶೇಷಗಿರಿ ಕೆಎಲ್‌ಇ ಇಂಜನಿಯರಿಂಗ್‌ ಕಾಲೇಜ್‌ನಲ್ಲಿ ಕಲಿಯುತ್ತಿದ್ದ ಈತನಿಗೆ ಸ್ನೇಹಿತರು ಹೆದರಿಸುತ್ತಿದ್ದರು. ಇದರಿಂದ ಭಯಗೊಂಡು ನಗರಕ್ಕೆ ಆಗಮಿಸಿ ಲಾಡ್ಜ್ನಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಲಾಡ್ಜ್ನಲ್ಲಿ ರೂಮ್‌ ತೆಗೆದುಕೊಳ್ಳುವಾಗ ಪರೀಕ್ಷೆ ಇದೆ ಎಂದು ಪಡೆದುಕೊಂಡಿದ್ದನೆಂದು ತಿಳಿದು ಬಂದಿದೆ. ಉಪನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
ಕಾರು-ಬೈಕ್‌ ಡಿಕ್ಕಿ: ಸವಾರ ಸಾವು: ತಾಲೂಕಿನ ಶೆರೇವಾಡ ಕ್ರಾಸ್‌ ಬಳಿ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟವನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಟಾ ಏಸ್‌ ಪಲ್ಟಿ: ವೇಗವಾಗಿ ಬರುತ್ತಿದ್ದ ಟಾಟಾ ಏಸ್‌ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಾರ್ಗ ಮಧ್ಯೆ ಪಲ್ಟಿಯಾಗಿ ತಲೆಕೆಳಗಾಗಿ ಬಿದ್ದ ಘಟನೆ ಶುಕ್ರವಾರ ಮಧ್ಯಾಹ್ನ ಇಲ್ಲಿನ ಭೈರಿದೇವರಕೊಪ್ಪದಲ್ಲಿ ನಡೆದಿದೆ. ಈ ವೇಳೆ ವಾಹನಕ್ಕೆ ಹಾನಿಯಾಗಿದ್ದು, ಯಾರಿಗೂ ಗಾಯವಾಗಿಲ್ಲ. ಸ್ಥಳಕ್ಕೆ ಉತ್ತರ ಸಂಚಾರ ಪೊಲೀಸರು ತೆರಳಿ ಪರಿಶೀಲಿಸಿದರು.
ಬಾಲಕಿ ಕಾಣೆ: ದೂರು ದಾಖಲು 
ಧಾರವಾಡ: ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ವಿದ್ಯಾ ನೀಲಪ್ಪ ಹಳಕಟ್ಟಿ (16) ಏ.6ರಂದು ಮನೆಯಿಂದ ಹೊರ ಹೋಗಿದ್ದು, ಮರಳಿ ಬಾರದೇ ಕಾಣೆ ಆಗಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯಿಂದ ಹೊರಗಡೆ ಹೋಗಿದ್ದು, ಈ ವೇಳೆ ಯಾರೋ ಅವಳನ್ನು ಅಪಹರಿಸಿಕೊಂಡು ಹೋಗಿರುವ ಸಂಶಯವಿದೆ. ಹೀಗಾಗಿ ಮಗಳನ್ನು ಹುಡುಕಿ ಕೊಡುವಂತೆ ತಂದೆ ನೀಲಪ್ಪ ಹಳಕಟ್ಟಿ ಅವರು ಧಾರವಾಡ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನ
ಧಾರವಾಡ: ಇಲ್ಲಿಯ ಟೈವಾಕ್‌ ಹಿಂದುಗಡೆಯ ನಿಸರ್ಗ ಲೇಔಟ್‌ ನಿವಾಸಿ ಮಹಾದೇವ ಅಂಗಡಿ ಅವರ ಮನೆಯಲ್ಲಿ ಗುರುವಾರ ಬೆಳಗಿನ ಜಾವ ಕಳ್ಳತನ ಮಾಡಲಾಗಿದೆ. ಮನೆಯಲ್ಲಿದ್ದ 71 ಗ್ರಾಂ ತೂಕದ ಚಿನ್ನಾಭರಣ, 205 ಗ್ರಾಂ ತೂಕದ ಬೆಳ್ಳಿ ಆಭರಣ, 15 ಸಾವಿರ ನಗದು ಸೇರಿ ಒಟ್ಟು 2,38,500 ರೂ. ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ವಿದ್ಯಾಗಿರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
ಮನೆ ಕೀ ಮುರಿದು ಚಿನ್ನಾಭರಣ, ನಗದು ದರೋಡೆ ಇಲ್ಲಿಯ ಶೀಲವಂತರ ಓಣಿಯ ನಿವಾಸಿ ಮಹ್ಮದಲಿ ಬಾಬುಸಾಬ ನದಾಫ್‌ ಅವರ ಮನೆಗೆ ಹಾಕಿದ್ದ ಕೀಲಿ ಮುರಿದು ಕಳ್ಳತನ ಮಾಡಲಾಗಿದೆ. ಮನೆಯಲ್ಲಿದ್ದ 19 ಗ್ರಾಂ ತೂಕದ ಚಿನ್ನದ ಆಭರಣ, 42 ಸಾವಿರ ನಗದು ಕಳ್ಳತನ ಮಾಡಲಾಗಿದ್ದು, ಉಪನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
ವ್ಯಾನಿಟಿ ಬ್ಯಾಗ್‌ ಸಮೇತ ನಗ-ನಾಣ್ಯ ಕಳವು
 ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ನಿಸರ್ಗ ಲೇಔಟ್‌ನ ಟೈವಾಕ್‌ ಕ್ವಾರ್ಟರ್ಸ್‌ ಹಿಂದುಗಡೆಯ ಮನೆಯೊಂದರಲ್ಲಿ ಅಂದಾಜು 2.38 ಲಕ್ಷ ರೂ. ಮೌಲ್ಯದ ನಗ-ನಾಣ್ಯವನ್ನು ವ್ಯಾನಿಟಿ ಬ್ಯಾಗ್‌ ಸಮೇತ ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಮಹದೇವ ಎಫ್‌. ಅಂಗಡಿ ಎಂಬುವರ ಮನೆಯಲ್ಲಿ ನಗ-ನಾಣ್ಯವಿದ್ದ ಬ್ಯಾಗ್‌ ಕಳ್ಳತನವಾಗಿದೆ. ಗುರುವಾರ ಬೆಳಗಿನ ಜಾವ ಇವರ ಮನೆಯಲ್ಲಿದ್ದ ಸುಮಾರು 2.13 ಲಕ್ಷ ರೂ. ಮೌಲ್ಯದ 71 ಗ್ರಾಂ ಚಿನ್ನಾಭರಣ, 15,500 ರೂ. ಕಿಮ್ಮತ್ತಿನ 205 ಗ್ರಾಂ ಬೆಳ್ಳಿ ಸಾಮಗ್ರಿ ಹಾಗೂ 10 ಸಾವಿರ ರೂ. ನಗದು ಕಳುವು ಆಗಿದೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ಧಾರವಾಡ: ನ್ಯಾಯವಾದಿ ಯಲ್ಲಪ್ಪ ಬೆಳ್ಳಕ್ಕಿ ಅವರ ಮೇಲೆ ನಡೆದ ಹಲ್ಲೆ ಖಂಡಿಸಿ ಹಾಗೂ ಅನುಚಿತವಾಗಿ ವರ್ತಿಸಿದ ಉಪನಗರ ಠಾಣೆ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ...

  • ಹುಬ್ಬಳ್ಳಿ: ಹಾಳಾದ ರಸ್ತೆಗೆ "ಅನಾಥ ರಸ್ತೆ' ಎಂದು ನಾಮಕರಣ ಮಾಡುವ ಮೂಲಕ ಹುಬ್ಬಳ್ಳಿ ಆಟೋ ರಿಕ್ಷಾ ಚಾಲಕರು ಹಾಗೂ ಮಾಲೀಕರ ಸಂಘದಿಂದ ಸೋಮವಾರ ವಿನೂತನವಾಗಿ ಪ್ರತಿಭಟನೆ...

  • ಧಾರವಾಡ: ವಾರದ ಪ್ರತಿ ಮಂಗಳವಾರ ಕೃಷಿರಂಗ ಕಾರ್ಯಕ್ರಮದಲ್ಲಿ ಪ್ರಸಾರ ಆಗುತ್ತಿರುವ ಎಸ್‌ಡಿಎಂ ಡಾಕ್ಟರ್‌ ಆರೋಗ್ಯ ಸಂವಾದ ಕಾರ್ಯಕ್ರಮದ 700ನೇ ಸಂಚಿಕೆಯ ಮಹೋತ್ಸವವನ್ನು...

  • ಧಾರವಾಡ: ಇಲ್ಲಿಯ ಜಿಲ್ಲಾ ವಾರ್ತಾ ಭವನದ ಕಟ್ಟಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅವರ ಜನಸಂಪರ್ಕ ಕಚೇರಿಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ...

  • ಧಾರವಾಡ: ನೂತನ ಕೈಗಾರಿಕಾ ನೀತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ...

ಹೊಸ ಸೇರ್ಪಡೆ

  • ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ಮತ್ತು ರಾಜ್ಯ ಗುಪ್ತಚರ ವಿಭಾಗ ಅಡಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಯೋತ್ಪಾದಕ ನಿಗ್ರಹ ವಿಭಾಗ...

  • ಬೆಂಗಳೂರು: ನಗರದ ಸುತ್ತ-ಮುತ್ತಲ ಪ್ರದೇಶಗಳಲ್ಲಿ ಜೆಎಂಬಿ(ಜಮಾತ್‌-ಉಲ್‌-ಮುಜಾಹಿದ್ದೀನ್‌) ಉಗ್ರರ ಅಡಗುತಾಣಗಳು ಪತ್ತೆಯಾಗಿವೆ ಎಂಬ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)...

  • ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ನನ್ನನ್ನು ಬಂಧಿಸಿರುವುದು ರಾಜಕೀಯ ಪಿತೂರಿ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ದೆಹಲಿ ಹೈಕೋರ್ಟ್‌ನಲ್ಲಿ ತಮ್ಮ...

  • ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ರೂಪಿಸಿರುವ "ಸಹಾಯ ಆ್ಯಪ್‌'ನಲ್ಲಿ ದಾಖಲಾಗುವ ದೂರುಗಳನ್ನು ಕಾಲಮಿತಿಯೊಳಗೆ ಬಗೆಹರಿಸುವುದಕ್ಕೆ...

  • ಬೆಂಗಳೂರು: ವೇತನ ಪರಿಷ್ಕರಣೆಗಾಗಿ ಎಚ್‌ಎಎಲ್‌ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನ ತಾರಕ್ಕೇರಿದ್ದು, ನೌಕರರ ಸಂಘಟನೆ ಮತ್ತು ಆಡಳಿತ...