ಸಾಂಕ್ರಾಮಿಕ ರೋಗ ಹತೋಟಿಗೆ ಮುಂಜಾಗ್ರತೆ ವಹಿಸಿ

Team Udayavani, Jul 21, 2018, 5:40 PM IST

21-july-22.jpg

ಹಾನಗಲ್ಲ: ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳ ತಡೆಗಟ್ಟುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಮುಂಜಾಗ್ರತಾ ಕ್ರಮವನ್ನು ಕಾಯ್ದುಕೊಳ್ಳುವ ಜೊತೆಗೆ ಮಾಧ್ಯಮಗಳ ಮುಖಾಂತರ ತಿಳಿಸುವುದರಿಂದ ಜನರಿಗೆ ಅರಿವು ಮೂಡಿಸಿದಂತಾಗುತ್ತದೆ ಎಂದು ಶಾಸಕ ಸಿ.ಎಮ್‌.ಉದಾಸಿ ಹೇಳಿದರು.

ಶುಕ್ರವಾರ ಹಾನಗಲ್ಲ ಪಟ್ಟಣದ ಕುಡಿಯುವ ನೀರಿನ ಜಲಮೂಲವಾದ ಆನಿಕೇರೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾರ್ಯಕ್ರಮದಲ್ಲಿ ಗಪ್ಪಿ ಮೀನು ಹಾಗೂ ಗಂಬುಸಿಯಾ ಮೀನಿನ ಮರಿಗಳನ್ನು ಕೆರೆಗೆ ಬಿಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ತಾಲೂಕಿನಲ್ಲಿ ಈಗಾಗಲೆ ಚಿಕನ್‌ಗುನ್ಯಾ, ಡೆಂಘೀ, ಮಲೇರಿಯಾದಂತ ರೋಗಗಳು ಉಲ್ಬಣಿಸಿದ್ದು ನಾಗರಿಕರಲ್ಲಿ ಆತಂಕ ಮನೆಮಾಡಿದೆ. ಇಲಾಖೆ ಜನರ ಆರೋಗ್ಯ ಕಡೆಗೆ ಗಮನಹರಿಸಿ ಕಾಲಕ್ಕೆ ತಕ್ಕಂತೆ ಆರೋಗ್ಯ ಜಾಗೃತಿ ಹಾಗೂ ಔಷದೋಪಚಾರಕ್ಕೆ ಮುಂದಾಗಬೇಕು. ಸೊಳ್ಳೆಗಳ ನಿಯಂತ್ರಣ, ನೀರಿನ ಸ್ವಚ್ಛತೆ ಬಗ್ಗೆ ಇಲಾಖಾ ಅಧಿಕಾರಿಗಳು ನಿಯಂತ್ರಣಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಎಂದರು.

ಜಿಲ್ಲಾ ಕೀಟ ಶಾಸ್ತ್ರ ತಜ್ಞೆ ಇಂದ್ರಾ ಪಾಟೀಲ ಮಾತನಾಡಿ, ಗಪ್ಪಿ ಮೀನು ಮತ್ತು ಗಂಬುಸಿಯಾ ಮೀನಿನ ಮರಿಗಳನ್ನು ಕೆರೆಗಳಿಗೆ ಬಿಡುವುದರಿಂದ ದಡದಲ್ಲಿರುವ ಸೊಳ್ಳೆಗಳನ್ನು ತಿಂದು ರೋಗ ಹರಡುವುದನ್ನು ನಿಯಂತ್ರಣ ಮಾಡುತ್ತವೆ. ಈಗಾಗಲೆ ತಾಲೂಕಿನ ವಿವಿಧ ಕೆರೆಗಳಿಗೆ ಇಂತಹ ಮೀನಿನ ಮರಿಗಳನ್ನು ಬಿಡಲಾಗಿದ್ದು, ಮೀನುಗಳ ಜೀವಿತಾವಧಿ 3 ರಿಂದ 5 ವರ್ಷ. ದಿನಕ್ಕೆ 300 ರಿಂದ 400 ಲಾರ್ವಾಗಳನ್ನು ತಿಂದು ಬದುಕುತ್ತವೆ. ಹೀಗಾಗಿ ಡೆಂಘೀನಂತಹ ಸಾಂಕ್ರಾಮಿಕ ರೋಗ ತಡೆಗೆ ಈ ಮೀನುಗಳು ಸಹಕಾರಿ ಎಂದು ತಿಳಿಸಿದರು.

ತಾಲೂಕು ಆರೋಗ್ಯ ಮೇಲ್ವಿಚಾರಕ ನಿಂಗಪ್ಪ ಎನ್‌.ಎಚ್‌ ಮಾತನಾಡಿ, ತಾಲೂಕಿನಲ್ಲಿ 12ಜನರಿಗೆ ಚಿಕನ್‌ಗುನ್ಯಾ ತಗುಲಿರುವ ವರದಿಯಾಗಿದೆ. 36 ಜನರನ್ನು ಶಂಕೆಯ ಮೇಲೆ ಪರೀಕ್ಷೆ ನಡೆಸಲಾಗಿದೆ. 6 ಜನರಲ್ಲಿ ಡೆಂಘೀ ಪತ್ತೆಯಾಗಿದ್ದು, 10 ಜನರಿಗೆ ಇರುವ ಸಂಶಯವಿದೆ. ಇನ್ನು ಮಲೇರಿಯಾ 9 ಜನರಿಗೆ ತಗುಲಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಮಲೇರಿಯಾ ಹಾಗೂ ಚಿಕೂನ್‌ಗುನ್ಯಾ ನಿಯಂತ್ರಣಕ್ಕೆ ಮುಂಜಾಗ್ರತ ಕ್ರಮಕ್ಕೆ ಶಾ ಕಾರ್ಯಕರ್ತರಿಂದ ಮನೆ ಮನೆಗೆ ಭೇಟಿ ನೀಡಿ ಜಾರ್ಗತಿ ಮೂಡಿಸಲಾಗುತ್ತಿದೆ ಎಂದರು.

ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಚನ್ನಬಸಪ್ಪ ಹೆಡಿಯಾಲ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕಸ್ತೂರವ್ವ ಬೊಮ್ಮನಹಳ್ಳಿ, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಸಿ.ಎಸ್‌.ನೇಗಳೂರ. ಡಾ| ರವೀಂದ್ರ ಗೌಡ ಪಾಟೀಲ, ಹಾದಿಮನಿ, ಕಲ್ಯಾಣ ಕುಮಾರ ಶೆಟ್ಟರ, ಸಂತೋಷ ಪಾಂಡೆ, ಸುಭಾಸ್‌ ಚೊಗಚಿಕೊಪ್ಪ, ರಾಜು ಅಂಬಿಗೇರ. ಪರಶುರಾಮ ನಿಂಗೋಜಿ ಇತರರಿದ್ದರು. 

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.