ಬೋಧಕರಿಗೆ ಕಲಿಕಾ ಪ್ರವೃತ್ತಿ ಅಗತ್ಯ


Team Udayavani, Jun 24, 2017, 2:27 PM IST

hub3.jpg

ಹುಬ್ಬಳ್ಳಿ: ಬೋಧಕರಲ್ಲಿ ಕಲಿಕಾ ಪ್ರವೃತ್ತಿ ಇಲ್ಲದಿದ್ದರೆ ಅವರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಅಕ್ಯಾಡೆಮಿಕ್‌ ಸ್ಟಾಫ್ ಕಾಲೇಜ್‌ ನಿರ್ದೇಶಕ ಡಾ| ಹರೀಶ ರಾಮಸ್ವಾಮಿ ಹೇಳಿದರು. ಕಾಮತ ಯಾತ್ರಿ ನಿವಾಸದಲ್ಲಿ ಐಇಎಂಎಸ್‌ ಬಿ-ಸ್ಕೂಲ್‌ ಶುಕ್ರವಾರ ಆಯೋಜಿಸಿದ್ದ “ಸಂಶೋಧನೆಯ ವಿವಿಧ ಆಯಾಮಗಳ ದೃಷ್ಟಿಕೋನ ಕುರಿತು ಬೋಧಕರ ಅಭಿವೃದ್ಧಿ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು. 

ಬೋಧಕರು ಓದುವ ಪರಿಪಾಠ ಬೆಳೆಸಿಕೊಳ್ಳಬೇಕು. ಅವರು ಅಪ್‌ಡೇಟ್‌ ಇರದಿದ್ದರೆ, ಹೊಸ ಸಂಗತಿಗಳನ್ನು ಅರಿತುಕೊಳ್ಳದಿದ್ದರೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲಾಗುವುದಿಲ್ಲ ಎಂದರು. ಒಬ್ಬ ಸೈನಿಕ ಒಬ್ಬ ವೈರಿಯನ್ನು ಕೊಲ್ಲಬಹುದು. ಆದರೆ, ಒಬ್ಬ ಬೋಧಕ ಸಮರ್ಪಕವಾಗಿ ಕಲಿಸದಿದ್ದರೆ ಒಂದು ತಲೆಮಾರನ್ನೇ ಸಾಯಿಸಬಹುದು.

ಬೋಧನೆ ತೃಪ್ತಿ ನೀಡುವ ವೃತ್ತಿಯಾಗಿದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ದಿಸೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಮುಖ್ಯ ಎಂದು ಹೇಳಿದರು. ಕೇವಲ ಪಠ್ಯಕ್ರಮ ಪೂರ್ಣ ಗೊಳಿಸುವುದಕ್ಕೆ ಸೀಮಿತರಾಗುವುದು ಬೇಡ. ಬೋಧಕರು ತಮ್ಮನ್ನು ಪರಾಮರ್ಷೆ ಮಾಡಿಕೊಳ್ಳುವುದು ಅವಶ್ಯ.

ಎಲ್ಲ ಶಿಕ್ಷಣ ಸಂಸ್ಥೆಗಳು ಬೋಧಕರ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಇದರಿಂದ ವೈಯಕ್ತಿಕ ಪ್ರಗತಿ ಸಾಧ್ಯವಾಗುತ್ತದೆ. ಇದು ಶಿಕ್ಷಣ ಸಂಸ್ಥೆಯ ಏಳ್ಗೆಗೂ ಪೂರಕ ಎಂದರು. ಇಂಟರ್‌ನೆಟ್‌ ಇದ್ದರೂ ಶಿಕ್ಷಕರ ನೆರವಿಲ್ಲದೆ ಯಾವುದೇ ವಿದ್ಯಾರ್ಥಿ ಸಾಧನೆ ಮಾಡಲಾಗುವುದಿಲ್ಲ. 

ಅಂತರ್ಜಾಲದಿಂದ ಯಾವ ಮಾಹಿತಿ ಪಡೆದುಕೊಳ್ಳಬೇಕು ಹಾಗೂ ಯಾವ ಪ್ರಮಾಣದಲ್ಲಿ, ಹೇಗೆ ಬಳಕೆ ಮಾಡಿಕೊಳ್ಳಬೇಕೆಂಬುದನ್ನು ತಿಳಿಸಿಕೊಡಲು ಶಿಕ್ಷಕರ ಅವಶ್ಯಕತೆಯಿದೆ ಎಂದರು. ಶಿಕ್ಷಣ ಎಂಬುದು ಉದ್ಯಮವಾಗುತ್ತಿದೆ. ಗಲ್ಲಿಗೊಂದರಂತೆ ಪಿಯು ವಿಜ್ಞಾನ ಕಾಲೇಜುಗಳು, ಬೀದಿಗೊಂದರಂತೆ ಐಎಎಸ್‌ ತರಬೇತಿ ಸಂಸ್ಥೆಗಳು ಹುಟ್ಟಿಕೊಳ್ಳುತ್ತಿವೆ.

ಎಷ್ಟೋ ಶಾಲೆಗಳಲ್ಲಿ ಮಕ್ಕಳಿಗೆ ಆಟವಾಡಲು ಮೈದಾನಗಳೇ ಇಲ್ಲ. ಶಿಕ್ಷಣ ಎಂಬುದು ಹಣ ಗಳಿಕೆಗಾಗಿ ಎಂಬಂತ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ಐಇಎಂಎಸ್‌ ಬಿ- ಸ್ಕೂಲ್‌ನ ಸಹಾಯಕ ಪ್ರಾಧ್ಯಾಪಕ ರೋಹಿದಾಸ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. 

ಮಣಿಪಾಲದ ಟಿಎಪಿಎಂಐ ಪ್ರಾಧ್ಯಾಪಕ ಡಾ| ದುರ್ಗಾಪ್ರಸಾದ ಎಂ., ಗೋವಾದ ವಿ.ಪಿ. ಕಾಲೇಜ್‌ ಆಫ್ ಮ್ಯಾನೇಜ್‌ಮೆಂಟ್‌ ಪ್ರಾಚಾರ್ಯ ಡಾ| ಎಂ.ಆರ್‌. ಪಾಟೀಲ, ಐಇಎಂಎಸ್‌ ಬಿ-ಸ್ಕೂಲ್‌ ನಿರ್ದೇಶಕ ಡಾ| ಶ್ರೀನಿವಾಸ ಪಾಟೀಲ, ಡಾ| ಅಲೋಕ ಗಡ್ಡಿ, ಪ್ರೊ| ಆರ್‌.ಎನ್‌. ನಾಯಕ ಇದ್ದರು.  

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.