ಬಿಜೆಪಿಗೆ ಕಾಡುತ್ತಿದೆ ಬೇರು ಮಟ್ಟದ ತಿಕ್ಕಾಟ

ಕುಂದಗೋಳದಲ್ಲಿ ಈಗಲೂ ಇದೆ ಚಿಕ್ಕನಗೌಡ್ರ, ಎಂ.ಆರ್‌.ಪಾಟೀಲ್ ಬೆಂಬಲಿಗರ ಮುಸುಕಿನ ಗುದ್ದಾಟ

Team Udayavani, May 6, 2019, 2:40 PM IST

hubali-6-t-dy

ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಉಪ ಸಮರದಲ್ಲಿ ಗೆಲುವು ನಮ್ಮದೇ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರಾದರೂ ಪಕ್ಷದೊಳಗಿನ ಆಂತರಿಕ ತಿಕ್ಕಾಟ ಬೇರು ಮಟ್ಟಕ್ಕಿಳಿದಿದ್ದು, ಇದು ಪರಿಣಾಮ ಬೀರುವ ಆತಂಕ ಪಕ್ಷದ ನಾಯಕರನ್ನು ಕಾಡುತ್ತಿದೆ.

ಕುಂದಗೋಳ ಕ್ಷೇತ್ರವನ್ನು ಕಾಂಗ್ರೆಸ್‌ ಹಾಗೂ ಬಿಜೆಪಿಗಳೆರಡೂ ಅತ್ಯಂತ ಪ್ರತಿಷ್ಠೆಯಾಗಿ ಪರಿಗಣಿಸಿವೆ. ಗೆಲುವನ್ನು ತಮ್ಮದಾಗಿಸಿಕೊಳ್ಳಲು ಸಣ್ಣ, ಸಣ್ಣ ಯತ್ನವನ್ನೂ ಕೈ ಚೆಲ್ಲದೆ, ಎದುರಾಳಿಗೆ ಅವಕಾಶ ನೀಡದಂತೆ ಎಚ್ಚರಿಕೆಯ ಹೆಜ್ಜೆಗಳನ್ನಿಡುತ್ತಿದ್ದಾರೆ. ಎರಡೂ ಕಡೆಯವರು ಅನುಕಂಪದ ದಾಳ ಉರುಳಿಸುತ್ತಿದ್ದಾರೆ. ಬಿಜೆಪಿಯವರು ಕಾಂಗ್ರೆಸ್‌ ಹಾಗೂ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸುತ್ತಿದ್ದಾರೆ. ಇಷ್ಟೆಲ್ಲದರ ನಡುವೆಯೂ ಬಿಜೆಪಿಗೆ ಎಲ್ಲೋ ಒಂದು ಸಣ್ಣ ಆತಂಕ ಕಾಡತೊಡಗಿದೆ.

ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಳೆದ ಎರಡು ಚುನಾವಣೆಗಳಲ್ಲಿ ಬಿಜೆಪಿಗೆ ಕಹಿ ಅನುಭವವಾಗಿದ್ದು, ಅಂತಹುದೇ ಮತ್ತೂಂದು ಕಹಿ ಅನುಭವ ಮರುಕಳಿಸದಿರಲಿ ಎಂಬುದು ಅನೇಕ ಮುಖಂಡರ ಅನಿಸಿಕೆ. ಮೇಲ್ನೋಟಕ್ಕೆ ಎಲ್ಲವೂ ಸರಿಯಾಗಿದೆ ಎಂದು ಕಂಡು ಬಂದರೂ ಆಂತರಿಕವಾಗಿ ಅಂದುಕೊಂಡ ರೀತಿಯಲ್ಲಿಲ್ಲ ಎಂಬ ಅನುಮಾನ, ಆತಂಕ ಒಂದಿಷ್ಟು ಮುಖಂಡರು ಹಾಗೂ ಕಾರ್ಯಕರ್ತರನ್ನು ಕಾಡತೊಡಗಿದೆ. ಕ್ಷೇತ್ರದಲ್ಲಿ ಟಿಕೆಟ್ ವಿಚಾರವಾಗಿ ಇಬ್ಬರು ಮುಖಂಡರ ನಡುವಿನ ತಿಕ್ಕಾಟ ಹಿಂದಿನಿಂದ ನಡೆದುಕೊಂಡು ಬಂದಿದೆ. ಉಪ ಚುನಾವಣೆ ಸಂದರ್ಭದಲ್ಲೂ ಇದು ಮರುಕಳಿಸಿತ್ತು. ಆದರೆ, ಪಕ್ಷದ ನಾಯಕರ ಭರವಸೆ, ಒತ್ತಾಯದ ಮೇರೆಗೆ ಇಬ್ಬರು ಮುಖಂಡರು ಒಂದಾಗಿದ್ದಾರೆ. ಆದರೆ, ತಳ ಹಂತದ ಕಾರ್ಯಕರ್ತರಲ್ಲಿ ಇದು ಎಷ್ಟರ ಮಟ್ಟಿಗೆ ಸಾಧ್ಯವಾಗಿದೆ ಎಂಬುದು ಇನ್ನೂ ಪ್ರಶ್ನಾರ್ಥಕವಾಗಿಯೇ ಉಳಿದಿದೆ.

2008ರಲ್ಲಿ ಮೊದಲ ಬಾರಿಗೆ ಕುಂದಗೋಳ ಕ್ಷೇತ್ರವನ್ನು ಕಾಂಗ್ರೆಸ್‌, ಜನತಾ ಪರಿವಾರ, ಪಕ್ಷೇತರರ ಆಳ್ವಿಕೆಯಿಂದ ಕಿತ್ತುಕೊಂಡು ತನ್ನ ಅಧಿಪತ್ಯ ಸ್ಥಾಪಿಸುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು. ಬಿಜೆಪಿ ಅಭ್ಯರ್ಥಿ ಎಸ್‌.ಐ.ಚಿಕ್ಕನಗೌಡ್ರ ಸುಮಾರು 6,376 ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ಸಿ.ಎಸ್‌.ಶಿವಳ್ಳಿ ವಿರುದ್ಧ ಗೆಲುವು ಸಾಧಿಸಿದ್ದರು. 2013ರಲ್ಲಿ ಬಿಜೆಪಿಯ ಇಬ್ಭಾಗದಿಂದಾಗಿ ಬಿಜೆಪಿ-ಕೆಜೆಪಿ ನಡುವಿನ ಸೆಣಸಾಟ ಕಾಂಗ್ರೆಸ್‌ಗೆ ಮತ್ತೆ ಗೆಲುವು ತಂದುಕೊಟ್ಟಿತ್ತು. 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ 52,690 ಮತಗಳನ್ನು ಪಡೆದಿತ್ತು. ಕೆಜೆಪಿ ಅಭ್ಯರ್ಥಿ ಎಸ್‌.ಐ.ಚಿಕ್ಕನಗೌಡ್ರ 31,618 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಎಂ.ಆರ್‌.ಪಾಟೀಲ 23,641 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ಸುಮಾರು 21,072 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಿ.ಎಸ್‌.ಶಿವಳ್ಳಿ 64,871 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಎಸ್‌.ಐ.ಚಿಕ್ಕನಗೌಡ್ರ 64,237 ಮತಗಳನ್ನು ಪಡೆದು ಕೇವಲ 634 ಮತಗಳ ಅಂತರದಿಂದ ಸೋಲು ಕಂಡಿದ್ದರು. ಈ ಸಮರದಲ್ಲಿ ಬಿಜೆಪಿಗೆ ಎದುರಾಳಿ ನಡೆಸಿದ ಸೆಣಸಾಟದ ಸಾಮರ್ಥ್ಯ ಎಷ್ಟು, ಪಕ್ಷದೊಳಗಿನ ಒಳಹೊಡೆತದ ಪೆಟ್ಟಿನ ನೋವು ಎಷ್ಟು ಎಂಬುದು ಬಿಜೆಪಿಯವರ ಮನದಲ್ಲಿ ಈಗಲೂ ಸುಳಿದಾಡುತ್ತಿದೆ.

● ಅಮರೇಗೌಡ ಗೋನವಾರ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.