ಬಿಜೆಪಿ ಅಂದ್ರೆ ಭ್ರಷ್ಟಾಚಾರಿ ಜನತಾ ಪಕ್ಷ

Team Udayavani, May 13, 2019, 11:08 AM IST

hub-1

ಹುಬ್ಬಳ್ಳಿ: ಕುಂದಗೋಳ ಮತ್ತು ಚಿಂಚೋಳಿಯಲ್ಲಿ ಬಿಜೆಪಿಯವರೇ ಹಣ, ಹೆಂಡದ ಹೊಳೆ ಹರಿಸುತ್ತಿದ್ದಾರೆ. ಬಿಜೆಪಿ ಅಂದರೆ ಭ್ರಷ್ಟಾಚಾರ. ಬಿ ಅಂದ್ರೆ ಭ್ರಷ್ಟಾಚಾರಿ ಜನತಾ ಪಕ್ಷ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕ ದಾಳಿ ಮಾಡೋದೇ ಬಿಜೆಪಿ

ಕೆಲಸ. ನಮ್ಮ ವೈಫಲ್ಯಗಳಿದ್ದರೆ ಟೀಕೆ ಮಾಡಲಿ. ಅದು ಬಿಟ್ಟು ಅನವಶ್ಯಕ ಟೀಕೆ ಮಾಡುವುದನ್ನು ಬಿಡಲಿ. ಅವರು ಭಯದಿಂದ ಇನ್ನಿಲ್ಲದನ್ನು ಮಾತನಾಡುತ್ತಿದ್ದಾರೆ. ನಾಲಿಗೆ ಹರಿಬಿಡುತ್ತಿದ್ದಾರೆ ಎಂದರು.

160 ಸೀಟು ದಾಟಲ್ಲ: ಲೋಕಸಭೆ ಚುನಾವಣೆ 5 ಹಂತಗಳ ಮತದಾನದ ಬಳಿಕ ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ ಯಾಗಿರುವ ಮಾಹಿತಿ ಇದೆ. ಆದರೆ ಸಮೀಕ್ಷಾ ವರದಿಗಳನ್ನು ಬಹಿರಂಗಪಡಿಸಿಲ್ಲ. 7 ಹಂತಗಳ ಮತದಾನ ಮುಗಿದ ಬಳಿಕ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 160 ಸೀಟುಗಳನ್ನು ದಾಟುವುದಿಲ್ಲ. ಇದು ಬಿಜೆಪಿ ಮುಖಂಡರನ್ನು ಕಂಗೆಡಿಸಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿ ಬಿಜೆಪಿಯ ಎಲ್ಲ ಮುಖಂಡರು ಹತಾಶೆಯಿಂದ ಹುಚ್ಚು ಹುಚ್ಚಾಗಿ ಮಾತನಾಡುತ್ತಿದ್ದಾರೆ. ಮೇ 23ರ ನಂತರ ದೇಶದಲ್ಲಿ ಎನ್‌ಡಿಎ ಸರ್ಕಾರ ಪತನವಾಗುತ್ತೆ. ರಾಜ್ಯದಲ್ಲಿ ಬರವಿದ್ದರೂ ಚುನಾವಣೆ ಆಯೋಗ ಬರ ಅಧ್ಯಯನ ಮಾಡಲು ಬಿಡುತ್ತಿಲ್ಲ. ನಮಗೆ ನಿರ್ಬಂಧ ಹಾಕಿದೆ. ಇದು ದುರ್ದೈವದ ಸಂಗತಿ. ಕೇಂದ್ರ ಸರ್ಕಾರ ಬರ ಪರಿಹಾರ ಕಾಮಗಾರಿಗೆ ದುಡ್ಡು ಕೊಟ್ಟಿಲ್ಲ. ಬರ ನಿರ್ವಹಣೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದರು.

ಏರ್‌ಪೋರ್ಟ್‌ಲ್ಲಿ ವೇಣು, ದಿನೇಶ, ಡಿಕೆಶಿ
ಹುಬ್ಬಳ್ಳಿ:
ಇಲ್ಲಿನ ವಿಮಾನ ನಿಲ್ದಾಣದಲ್ಲಿ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಹಾಗೂ ಸಚಿವ ಡಿ.ಕೆ. ಶಿವಕುಮಾರ ರವಿವಾರ ಮಾತುಕತೆ ನಡೆಸಿದರು. ಕುಂದಗೋಳ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ವೇಣುಗೋಪಾಲ, ದಿನೇಶ ಅವರು ಸಂಜೆ ಕುಂದಗೋಳಕ್ಕೆ ತೆರಳಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿ ಬೆಂಗಳೂರಿಗೆ ವಾಪಸ್‌ ತೆರಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಇದೇ ವೇಳೆ ಡಿ.ಕೆ. ಶಿವಕುಮಾರ ಬೆಂಗಳೂರಿನಿಂದ ನಗರಕ್ಕೆ ಆಗಮಿಸಿದರು. ಆಗ ಉಭಯ ನಾಯಕರು ನಿಲ್ದಾಣದಲ್ಲೇ ಕುಂದಗೋಳ ಮತ್ತು ಚಿಂಚೋಳಿ ಮತಕ್ಷೇತ್ರದ ಚುನಾವಣೆ ಕುರಿತು ಕೆಲ ಹೊತ್ತು ಮಾತುಕತೆ ನಡೆಸಿದರು ಎಂದು ತಿಳಿದು ಬಂದಿದೆ.

ಜಿಪಂ-ಗ್ರಾಪಂ ಸದಸ್ಯರ ಸಭೆ

ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾ , ತಾಲೂಕು ಹಾಗೂ ಗ್ರಾಪಂ ಸದಸ್ಯರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಸಭೆ ನಡೆಸಿದ್ದಲ್ಲದೆ, ಬಿಜೆಪಿಯ ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ಎಂದು ತಿಳಿಸಿದರು ಎಂದು ಹೇಳಲಾಗುತ್ತಿದೆ. ನಗರದಲ್ಲಿ ರವಿವಾರ ಸಭೆ ನಡೆಸಿದ ಅವರು, ಯಾವುದೇ ಸಂದರ್ಭದಲ್ಲೂ ಪಕ್ಷದ ಅಭ್ಯರ್ಥಿಯ ಗೆಲುವು ಕೈ ತಪ್ಪಬಾರದು. ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಆಗುವಂತೆ ನೋಡಿಕೊಳ್ಳಿ ಎಂದು ಸಲಹೆ-ಸೂಚನೆ ನೀಡಿದರು ಎನ್ನಲಾಗಿದೆ.

ಟಾಪ್ ನ್ಯೂಸ್

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.