ಸರ್ವಾಂಗೀಣ ಏಳ್ಗೆಗೆ ಸಂವಿಧಾನ ಪೂರಕ

Team Udayavani, Apr 15, 2017, 3:21 PM IST

hub4.jpg

ಧಾರವಾಡ: ಭಾರತರತ್ನ, ಸಂವಿಧಾನ ಶಿಲ್ಪಿ ಡಾ| ಬಿ.ಆರ್‌.ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನ ದೇಶದ ಸರ್ವಾಂಗೀಣ ಏಳ್ಗೆಗೆ ಅಗತ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. ಇಲ್ಲಿನ ಡಾ| ಮಲ್ಲಿಕಾರ್ಜುನ ಮನಸೂರ ಕಲಾಭವನದಲ್ಲಿ ಹಮ್ಮಿಕೊಂಡಿದ್ದ ಡಾ| ಅಂಬೇಡ್ಕರ್‌ ಅವರ 126ನೇ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. 

ಸಂವಿಧಾನದತ್ತ ಸೌಲಭ್ಯಗಳನ್ನು ಪಡೆದು ಮೇಲೆ ಬಂದ ಶೋಷಿತ ಸಮುದಾಯದ ಶಿಕ್ಷಿತರು, ಅಧಿಕಾರಿಗಳು ತಾವು ಬೆಳೆದು  ಬಂದ ಹಾದಿಯನ್ನು ಮರೆಯಬಾರದು. ಇಂದಿಗೂ ಹಳ್ಳಿಗಳಲ್ಲಿ ಕಷ್ಟಗಳ ಮಧ್ಯೆಯೇ ಬದುಕುತ್ತಿರುವ ನಮ್ಮವರ ಏಳ್ಗೆಗೆ ಸಹಾಯ ಹಸ್ತ ಚಾಚಬೇಕು ಎಂದರು. ಹುಬ್ಬಳ್ಳಿ-ಧಾರವಾಡ ಮಹಾನಗರದ ಜೊತೆಗೂ ಡಾ| ಅಂಬೇಡ್ಕರ್‌ ಅವರ ಒಡನಾಟವಿತ್ತು.

ಅಂದಿನ ಮುಂಬೈ ಸರಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಇಲ್ಲಿನ ಶಾಸಕ ಸರ್‌.ಸಿದ್ದಪ್ಪ ಕಂಬಳಿಯವರು ಡಾ| ಅಂಬೇಡ್ಕರ್‌ ಅವರಲ್ಲಿನ ಅಪಾರ ಪ್ರತಿಭೆ ಗುರುತಿಸಿ ಪ್ರಾಧ್ಯಾಪಕ ಹುದ್ದೆ ನೀಡಿದ್ದರು. ಮುಂದೆ ಅಂಬೇಡ್ಕರ್‌ ಅವರ ರಾಜಕೀಯ ಬೆಳವಣಿಗೆಗೂ ಕೂಡ ಕಂಬಳಿಯವರು ಒತ್ತಾಸೆಯಾಗಿ ನಿಂತಿದ್ದ ಇತಿಹಾಸವನ್ನು ನಾವೆಲ್ಲ ಅರಿಯಬೇಕು ಎಂದರು. 

ಕವಿವಿ ನಿವೃತ್ತ ಪ್ರಾಧ್ಯಾಪಕ ಎಂ.ಟಿ. ಕಾಂಬಳೆ ವಿಶೇಷ ಉಪನ್ಯಾಸ ನೀಡಿ, ಡಾ| ಅಂಬೇಡ್ಕರ್‌ ಅವರು ಬರೆದ ಸಂವಿಧಾನವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು. ಅಲ್ಲಿ ಎಲ್ಲ ಸಮಸ್ಯೆಗಳಿಗೂ ಉತ್ತರವಿದೆ. ಸರಕಾರ ಸಂವಿಧಾನದ ಮೂಲಪ್ರತಿಯನ್ನು ಮುದ್ರಿಸಿ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದರು. 

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿವಿಧ ರಂಗಗಳಲ್ಲಿ ಸಾಧನೆಗೈದ ಡಾ| ಸುಭಾಸಚಂದ್ರ ನಾಟಿಕಾರ, ಡಾ| ವೆಂಕನಗೌಡ ಆರ್‌.ಪಾಟೀಲ, ಚನ್ನಬಸು ಮಾಳಗಿ, ಪಾಂಡಪ್ಪ ಮಾದರ, ಡಾ| ವಿ.ಡಿ.ಕಪೂìರಮಠ ಅವರನ್ನು ಸನ್ಮಾನಿಸಲಾಯಿತು.

ಸರಕಾರಿ  ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಉಚಿತ ಲ್ಯಾಪ್‌ಟಾಪ್‌  ಗಳನ್ನು ಸಚಿವರು ವಿತರಿಸಿದರು. ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ, ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ನಾಗನಗೌಡ ಪಾಟೀಲ, ಜಿಪಂ ಸಿಇಒ  ಸ್ನೇಹಲ್‌.ಆರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧರ್ಮೇಂದರ್‌ ಕುಮಾರ ಮೀನಾ ಇದ್ದರು.

ಎನ್‌.ಮುನಿರಾಜು ಸ್ವಾಗತಿಸಿದರು. ವೈ.ಎ.ನಾಗಮ್ಮನವರ ವಂದಿಸಿದರು. ಇದಕ್ಕೂ ಮುನ್ನ ಬೆಳಿಗ್ಗೆ 9:00ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕುಲಕರ್ಣಿ ಡಾ| ಅಂಬೇಡ್ಕರ್‌ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಿದರು. ಜನಪದ ಕಲಾತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿತು. 

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.