ಧಾರವಾಡ ನೂತನ ಬಸ್‌ನಿಲ್ದಾಣ ಕಾಮಗಾರಿ ವೀಕ್ಷಣೆ


Team Udayavani, Apr 15, 2017, 2:57 PM IST

hub2.jpg

ಧಾರವಾಡ: ಬಿಆರ್‌ಟಿಎಸ್‌ ಯೋಜನೆಯಡಿ ಹಳೆ ಬಸ್‌ ನಿಲ್ದಾಣದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಬಸ್‌ ನಿಲ್ದಾಣ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳಿಸಲು ಆಯುಕ್ತ ದರ್ಪಣ ಜೈನ್‌ ಅವರೊಂದಿಗೆ ಚರ್ಚಿಸಲಾಗುವುದು ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. 

ನಗರದ ಹಳೇ ಬಸ್‌ ನಿಲ್ದಾಣದಲ್ಲಿ ಬಿಆರ್‌ ಟಿಎಸ್‌ ಯೋಜನೆಯಡಿ ನಿರ್ಮಿಸಲಾಗುತ್ತಿರುವ ನೂತನ ಬಸ್‌ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಮಗಾರಿ ವಿಳಂಬ ಕಂಡು ಗುತ್ತಿಗೆದಾರನಿಗೆ ನೀಡಿದ್ದ ಟೆಂಡರ್‌ ರದ್ದುಗೊಳಿಸಿ ಈಗ ಹೊಸ ಗುತ್ತಿಗೆದಾರರಿಗೆ ಕಾಮಗಾರಿ ನೀಡಲಾಗಿದೆ. 

ಹೊಸ ಗುತ್ತಿಗೆದಾರರಿಗೆ ಏಪ್ರಿಲ್‌-ಮೇ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ಅವಧಿ ನೀಡಲಾಗಿತ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಅಷ್ಟರೊಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇಲ್ಲ. ಹೀಗಾಗಿ ಈ ಅವಧಿಯನ್ನು ಸೆಪ್ಟೆಂಬರ್‌ವರೆಗೆ ವಿಸ್ತರಿಸಲಾಗಿದ್ದು, ಅಷ್ಟರೊಳಗೆ ಈ ಕಾಮಗಾರಿ ಪೂರ್ಣಗೊಳಿಸುವ ಗುರಿ ನೀಡಲಾಗಿದೆ.

ಈ ನಿಟ್ಟಿನಲ್ಲಿ ಆಯುಕ್ತ ದರ್ಪಣ ಜೈನ್‌ ಅವರೊಂದಿಗೆ ಚರ್ಚಿಸಲಿದ್ದು, ಇದಕ್ಕೆ ಬೇಕಾದ ಅಗತ್ಯ ಸಹಕಾರ, ಸೌಲಭ್ಯ, ಅನುದಾನ ನೀಡುವಿಕೆಯಲ್ಲಿ ವಿಳಂಬ ಮಾಡಬಾರದು ಎಂದರು. ನೂತನ ಬಸ್‌ ನಿಲ್ದಾಣ ಕಾಮಗಾರಿ ವಿಳಂಬದಿಂದ ಜನರು, ವ್ಯಾಪಾರಸ್ಥರಿಗೆ ಸಾಕಷ್ಟು ತೊಂದರೆ ಆಗಿದ್ದು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳ್ಳಬೇಕಿದೆ.

ಈ ಹಿಂದೆ ಬಿಆರ್‌ಟಿಎಸ್‌ ರೂಪಿಸಿದ್ದ ಯೋಜನೆಯಲ್ಲಿ ಬಸ್‌ ನಿಲ್ದಾಣದಲ್ಲಿ ಪಾರ್ಕಿಂಗ್‌ ವ್ಯವಸ್ಥೆಯೇ ಇರಲಿಲ್ಲ. ಕೊನೆಗೆ ಈ ಬಗ್ಗೆ ಗಮನ ಸೆಳೆದಾಗ ಈಗ ನಾಲ್ಕು ಚಕ್ರಗಳ 15 ವಾಹನ ಹಾಗೂ 250 ದ್ವಿಚಕ್ರ ವಾಹನ ನಿಲುಗಡೆಗೆ ಯೋಜನೆ ರೂಪಿಸಲಾಗಿದ್ದು, ಆದರೆ ಇದು ಕೂಡ ಸಾಲದು.  

ಕನಿಷ್ಠ 1000 ದ್ವಿಚಕ್ರ ವಾಹನಗಳು ನಿಲುಗಡೆ ಅವಕಾಶ ಆಗುವಂತೆ ಯೋಜನೆ ರೂಪಿಸುವ ಕುರಿತು ಆಯುಕ್ತರ ಗಮನ ಸೆಳೆಯಲಾಗುವುದು ಎಂದು ಸ್ಪಷ್ಟಪಡಿಸಿದರು. ವಿವಿಧ ಇಲಾಖೆಗಳ ಯೋಜನೆಗಳ ಮಧ್ಯೆ ಹೊಂದಾಣಿಕೆ ಇಲ್ಲ. ಹೀಗಾಗಿ ಬೇಕಾಬಿಟ್ಟಿ ಕಾಮಗಾರಿ ಆಗುತ್ತಿದ್ದು, ಇಲಾಖೆಗಳ ಮಧ್ಯೆ ಹೊಂದಾಣಿಕೆ ತಂದು  ಏಕರೂಪದಲ್ಲಿ ಕಾಮಗಾರಿ ಕೈಗೊಳ್ಳುವ ಅಗತ್ಯವಿದೆ.

ಈ ನಿಟ್ಟಿನಲ್ಲಿ ಸರಕಾರ ಗಮನ ಹರಿಸಬೇಕಿದೆ ಎಂದರು. ಪಾಲಿಕೆ ಸದಸ್ಯರಾದ ಶಿವು ಹಿರೇಮಠ, ವಿಜಯಾನಂದ ಶೆಟ್ಟಿ, ಸಂಜಯ ಕಪಟಕರ, ಮೋಹನ ರಾಮದುರ್ಗ ಸೇರಿದಂತೆ ಬಿಆರ್‌ ಟಿಎಸ್‌ ಯೋಜನೆಯ ಅಧಿಕಾರಿಗಳು ಇದ್ದರು. 

ಟಾಪ್ ನ್ಯೂಸ್

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

prahlad-joshi

CM ಸಿದ್ದರಾಮಯ್ಯ ಬುಡಕ್ಕೆ ನೀರು ಬಂದಿದ್ದಕ್ಕೆ ಯಡಿಯೂರಪ್ಪ ಗುರಿ: ಕೇಂದ್ರ ಸಚಿವ ಜೋಶಿ

ಸ್ಥಾವರ ಸಂಸ್ಕೃತಿಗೆ ಮೊರೆ ಹೋಗುವುದು ಸಲ್ಲ: ಸಾಣೇಹಳ್ಳಿ ಶ್ರೀ

Dharwad; ಸ್ಥಾವರ ಸಂಸ್ಕೃತಿಗೆ ಮೊರೆ ಹೋಗುವುದು ಸಲ್ಲ: ಸಾಣೇಹಳ್ಳಿ ಶ್ರೀ

ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ: ಸಚಿವ ಎಂ.ಬಿ. ಪಾಟೀಲ

POCSO Case; ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ: ಸಚಿವ ಎಂ.ಬಿ. ಪಾಟೀಲ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.