ಕೇಂದ್ರ ಅಧ್ಯಯನ ತಂಡಕ್ಕೆ ಬರ ದರ್ಶನ


Team Udayavani, Feb 13, 2017, 2:21 PM IST

hub1.jpg

ಹುಬ್ಬಳ್ಳಿ: ಕೇಂದ್ರ ಬರ ಅಧ್ಯಯನ ತಂಡ ಭಾನುವಾರ ಹುಬ್ಬಳ್ಳಿ, ನವಲಗುಂದ ಹಾಗೂ ಕುಂದಗೋಳ ತಾಲೂಕಿನ ಕೆಲ ಗ್ರಾಮಗಳಿಗೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ ಮಾಹಿತಿ ಪಡೆಯಿತು. ಕೇಂದ್ರ ಗ್ರಾಮೀಣಾಭಿವೃದ್ಧಿ ಅಧೀನ ಕಾರ್ಯದರ್ಶಿ ಎಸ್‌.ಬಿ.ತಿವಾರಿ, ಕೇಂದ್ರ ಇಂಧನ ಇಲಾಖೆ ಉಪನಿರ್ದೇಶಕ ಕಮಲ್‌ ಚವ್ಹಾಣ ಹಾಗೂ ಸಲೀಂ ಹೈದರ್‌ ಅವರನ್ನೊಳಗೊಂಡ ಕೇಂದ್ರ ಬರ ಅಧ್ಯಯನ ತಂಡ ಹಲವು ಗ್ರಾಮಗಳಿಗೆ ಭೇಟಿ ಪರಿಶೀಲಿಸಿತು. 

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ತಂಡದ ಸದಸ್ಯ ಹಾಗೂ ಕೇಂದ್ರ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಸಹಾಯಕ ಸಲಹೆಗಾರ ಸಲೀಂ ಹೈದರ್‌, ಧಾರವಾಡ ಜಿಲ್ಲೆಯಲ್ಲಿ ಭೀಕರ ಬರ ಸ್ಥಿತಿಯಿದ್ದು, ಈ ಕುರಿತು ಒಂದು ವಾರದಲ್ಲಿ ವರದಿ ನೀಡಲಾಗುವುದು. ನೀರಿನ ಸಮಸ್ಯೆ ಹೆಚ್ಚಾಗಿದೆ. ಬರದ ಸ್ಥಿತಿ ಅವಲೋಕಿಸಿ ತಂಡದ ಮುಖ್ಯಸ್ಥರಿಗೆ ವರದಿ ನೀಡಲಾಗುವುದು ಎಂದರು. 

ಅನುದಾನ ಬಳಕೆಗೆ ಸರ್ಕಾರ ವಿಫ‌ಲ: ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ಕೇಂದ್ರ ಅನುದಾನ ನೀಡುತ್ತಿದ್ದರೂ ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ. ಅನಗತ್ಯವಾಗಿ ಕೇಂದ್ರದ ಮೇಲೆ ಆರೋಪ ಮಾಡುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ಕಳೆದ 10 ವರ್ಷಗಳಲ್ಲಿ ಅತಿ ಹೆಚ್ಚು ಅನುದಾನ ನೀಡಿದ್ದೇ ಸದ್ಯದ ಎನ್‌ಡಿಎ ಸರ್ಕಾರ.

ಅಗತ್ಯ ಬಿದ್ದರೆ ರಾಜ್ಯ ಸರ್ಕಾರ ಖರ್ಚು ಮಾಡಿ ಬರ ಪರಿಹಾರ ಕ್ರಮ ಕೈಗೊಳ್ಳಬಹುದು. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ 500 ಕೋಟಿ ರೂ. ಖರ್ಚು ಮಾಡದಷ್ಟು ದುಸ್ಥಿತಿಗೆ ತಲುಪಿದೆಯೇ ಎಂಬ ಸಂದೇಹ ಮೂಡುತ್ತಿದೆ ಎಂದರು. ಕೇಂದ್ರ ಸರ್ಕಾರ ಇನ್ನಷ್ಟು ಅನುದಾನ ನೀಡಬಾರದೆಂದೇನಿಲ್ಲ. ಅಗತ್ಯ ಬಿದ್ದರೆ  ಇನ್ನಷ್ಟು ಅನುದಾನ ನೀಡುವಂತೆ ಕೇಂದ್ರದ ಕೃಷಿ ಸಚಿವರು ಹಾಗೂ ಗೃಹ ಸಚಿವರಿಗೆ ಮನವಿ ಮಾಡಲಾಗುವುದು ಎಂದರು. 

ಗ್ರಾಮಗಳಲ್ಲಿ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಸಮರ್ಪಕ ನೀರು ಪೂರೈಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಗೋಶಾಲೆಗಳನ್ನು ತೆರೆದು ದನಕರುಗಳಿಗೆ ಆಶ್ರಯ ನೀಡಬೇಕು. ಗುಣಮಟ್ಟದ ಮೇವು ನೀಡಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಶಾಸಕ ಎನ್‌.ಎಚ್‌.ಕೋನರೆಡ್ಡಿ ಮಾತನಾಡಿ, 4782 ಕೋಟಿ ರೂ. ಅನುದಾನ ನೀಡಲು ಮನವಿ ಮಾಡಿದರೆ ಕೇಂದ್ರ ಸರ್ಕಾರ 1700 ಕೋಟಿ ರೂ. ನೀಡಲು ಒಪ್ಪಿಗೆ ಸೂಚಿಸಿ, ಕೇವಲ 450  ಕೋಟಿ ರೂ. ಮಾತ್ರ ಅನುದಾನ ನೀಡಿದೆ. ರಾಜ್ಯದ ಜನರು ಸಂಕಷ್ಟದಲ್ಲಿದ್ದು, ಇಲ್ಲಿನ ಸ್ಥಿತಿ-ಗತಿ ಕುರಿತ ವರದಿ ನೀಡಿದ ಕೂಡಲೇ ಕೇಂದ್ರ ಸರ್ಕಾರ ಅಗತ್ಯ ಪ್ರಮಾಣದ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.  

ಟಾಪ್ ನ್ಯೂಸ್

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

9-hunsur

Hunsur: ನಾಗರಹೊಳೆ ಉದ್ಯಾನದಲ್ಲಿ ಕಾಡಾನೆ ಶವ ಪತ್ತೆ

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

1

Koppal: ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

Judge

ಒಂದೇ ದಿನ 600 ಅರ್ಜಿ ವಿಚಾರಣೆ! ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ವಿಕ್ರಮ

7-sagara

Sagara: ಸಿಗಂದೂರು ಲಾಂಚ್; ವಾಹನಗಳ ಸಾಗಾಣಿಕೆ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಿಎಂ ಕಿಸಾನ್ ಸಮ್ಮಾನ್ ಅನ್ನದಾತರ ಕಾಳಜಿಗೆ ಸಾಕ್ಷಿ: ಕುಮಾರಸ್ವಾಮಿ

Dharwad; ಪಿಎಂ ಕಿಸಾನ್ ಸಮ್ಮಾನ್ ಅನ್ನದಾತರ ಕಾಳಜಿಗೆ ಸಾಕ್ಷಿ: ಕುಮಾರಸ್ವಾಮಿ

hd kumaraswamy

ಸಂಡೂರು ಗಣಿಗಾರಿಕೆಗೆ ಪರ್ಯಾಯವಾಗಿ 808 ಹೆಕ್ಟೇರ್ ಪ್ರದೇಶದಲ್ಲಿ ಅರಣ್ಯೀಕರಣ: ಕುಮಾರಸ್ವಾಮಿ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

Bakrid 2024;

Bakrid 2024; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಂದ ಸಾಮೂಹಿಕ ಪ್ರಾರ್ಥನೆ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Chilli chicken Movie: ಜೂ. 21ಕ್ಕೆ ಚಿಲ್ಲಿ ಚಿಕನ್‌

Chilli chicken Movie: ಜೂ. 21ಕ್ಕೆ ಚಿಲ್ಲಿ ಚಿಕನ್‌

Sandalwood: ಶಿವಣ್ಣ ಭೈರತಿ ಮುಂದಕ್ಕೆ?

Sandalwood: ಶಿವಣ್ಣ ಭೈರತಿ ಮುಂದಕ್ಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.