101 ಗ್ರಾಮಗಳಲ್ಲಿಲ್ಲ ಪ್ರತ್ಯೇಕ ರುದ್ರಭೂಮಿ


Team Udayavani, Jan 2, 2020, 10:41 AM IST

HUBALLI-TDY-1

ಸಾಂಧರ್ಬಿಕ ಚಿತ್ರ

ಹುಬ್ಬಳ್ಳಿ: ಪ್ರತಿ ಹಳ್ಳಿಗೆ ಕನಿಷ್ಠ ಒಂದು ಸ್ಮಶಾನ ಭೂಮಿ ಕಲ್ಪಿಸಬೇಕೆಂಬ ಸರಕಾರದ ಕಾಳಜಿ ಸಮರ್ಪಕ ಅನುಷ್ಠಾನದ ಕೊರತೆ ಕಾಣುವಂತಾಗಿದೆ. ಧಾರವಾಡ ಜಿಲ್ಲೆಯ 395 ಗ್ರಾಮಗಳ ಪೈಕಿ, ಇನ್ನು 101 ಗ್ರಾಮಗಳಿಗೆ ಪ್ರತ್ಯೇಕ ಸ್ಮಶಾನ ಭೂಮಿ ಇಲ್ಲವಾಗಿದೆ.

ಅಗದಲಿದವರಿಗೆ ಮುಕ್ತಿ ಕಲ್ಪಿಸಬೇಕು ಎನ್ನುವ ಕಾರಣಕ್ಕೆ ಹಿಂದೆ ಪ್ರತಿಯೊಂದು ಗ್ರಾಮದಲ್ಲಿ ಸ್ಮಶಾನ ಭೂಮಿಯಂತಲೇ ಗುರುತಿಸಿ ರಕ್ಷಣೆ ಮಾಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಹೊಸಗ್ರಾಮಗಳು ಹುಟ್ಟಿಕೊಂಡಂತೆ  ಮನೆ, ಕಟ್ಟಡಗಳಿಗೆ ನೀಡಿದ ಆದ್ಯತೆ ಪ್ರತ್ಯೇಕ ಸ್ಮಶಾನ ಭೂಮಿಗೆ ನೀಡಲಿಲ್ಲ. ಪ್ರತಿ ವರ್ಷ ನೂರಾರು ಕೋಟಿ ರೂಪಾಯಿ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸುರಿಯಲಾಗುತ್ತಿದೆ. ಮಹಾನಗರ ವ್ಯಾಪ್ತಿಯೊಂದರಲ್ಲಿ ಒಂದೊಂದು ಯೋಜನೆಗಳ ವೆಚ್ಚ ಸಾವಿರಾರು ಕೋಟಿ ರೂಪಾಯಿ. ಆದರೆ ಮೂಲ ಸೌಲಭ್ಯಗಳ ಪೈಕಿ ಒಂದಾದ ಗ್ರಾಮೀಣ ಪ್ರದೇಶದಲ್ಲಿ ಪ್ರತ್ಯೇಕ ಸ್ಮಶಾನ ಭೂಮಿ ವ್ಯವಸ್ಥೆ ಕಲ್ಪಿಸುವ ಕುರಿತು ಚಿಂತನೆಗಳು ಇಲ್ಲಂದತಾಗಿವೆ.

ಸರಕಾರಿ ನಿಯಮಗಳ ಪ್ರಕಾರ ಒಂದುಸ್ಮಶಾನಕ್ಕೆ ಗರಿಷ್ಠ 2 ಎಕರೆ ಭೂಮಿ ಸಾಕು. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಭೂಮಿಗೆ ಕೊರತೆಯೇನು ಇಲ್ಲ. ಆದರೂ ಜಿಲ್ಲೆಯಲ್ಲಿ 101 ಗ್ರಾಮಗಳಲ್ಲಿ ರುದ್ರ ಭೂಮಿಯಿಲ್ಲ. ಪ್ರತಿಯೊಂದು ಗ್ರಾಮಗಳಲ್ಲೂ ಮುಕ್ತಿಧಾಮ ಕಲ್ಪಿಸಬೇಕೆನ್ನುವ ಸರಕಾರದ ಕಾಳಜಿ ಕೇವಲ ಯೋಜನೆಯಾಗೇ ಉಳಿದಿದೆ.

ಇದರಿಂದ ಶವ ಸಂಸ್ಕಾರಕ್ಕಾಗಿ ಕೆಲ ಗ್ರಾಮಸ್ಥರು ಪಡಬಾರದ ಕಷ್ಟ ಪಡುವಂತಾಗಿದೆ. ಇನ್ನೂ ಕೆಲ ಗ್ರಾಮಗಳಲ್ಲಿ ಮಳೆಗಾದಲ್ಲಂತೂ ಸತ್ತವರ ಮನೆಯವರ ಪಾಡಂತೂ ಹೇಳತೀರದು. ಇದಕ್ಕಾಗಿಯೇ ಕೆಲ ಗ್ರಾಮಸ್ಥರು ಸ್ಮಶಾನಕ್ಕಾಗಿಯೇ ರಸ್ತೆಗಿಳಿದ ಮಾಡಿದ ಉದಾಹರಣೆಗಳಿವೆ.

ಎಲ್ಲೆಲ್ಲಿ ಕೊರತೆ: ಜಿಲ್ಲೆಯ ಎಂಟು ತಾಲೂಕುಗಳಪೈಕಿ ಕುಂದಗೋಳ ತಾಲೂಕಿನಲ್ಲಿ 57 ಗ್ರಾಮಗಳ ಪೈಕಿ 29 ಗ್ರಾಮಗಳಲ್ಲಿ ಸ್ಮಶಾನ ಭೂಮಿ ಇಲ್ಲ. ಹುಬ್ಬಳ್ಳಿ ನಗರ ತಾಲೂಕಿನಲ್ಲಿ 20 ಗ್ರಾಮಗಳಿದ್ದರೂ ಎಲ್ಲಾ ಗ್ರಾಮಗಳಲ್ಲಿಸ್ಮಶಾನಗಳಿವೆ. 17 ಗ್ರಾಮಗಳಲ್ಲಿ ಸರಕಾರಿ ಜಮೀನು ಗುರುತಿಸಿದ್ದು, ಮಂಜೂರಾತಿಗಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. 42 ಗ್ರಾಮಗಳಲ್ಲಿ ಖಾಸಗಿಯವರಿಂದ ಭೂಮಿ ಖರೀದಿಸಬೇಕಾಗಿದೆ. ಇನ್ನೂ 42 ಗ್ರಾಮಗಳಲ್ಲಿ ಜಾಗ ಗುರುತಿಸಬೇಕಾಗಿದೆ. ನವಲಗುಂದ, ಅಣ್ಣಿಗೇರಿ, ಧಾರವಾಡ ಹಾಗೂ ಹುಬ್ಬಳ್ಳಿ ಗ್ರಾಮಗಳಲ್ಲಿ ಭೂಮಿ ಖರೀದಿಸಲು ಅನುದಾನ ಬಿಡುಗಡೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಹಳ್ಳ, ಕೆರೆ ದಂಡೆಯೇ ಗತಿ: ನಗರ, ಪಟ್ಟಣ, ಕೈಗಾರಿಕೆ ಪ್ರದೇಶಗಳಿಗೆ ಹೊಂದಿ ಕೊಂಡಿರುವ ಗ್ರಾಮಗಳ ಭೂಮಿಗೆ ಚಿನ್ನದ ಮೌಲ್ಯ ಬರುತ್ತಿರುವುದು ಸ್ಮಶಾನ ಭೂಮಿ ದೊರೆಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಲತಲಾಂತರ ದಿಂದ ಶವ ಸಂಸ್ಕಾರ ಮಾಡಿಕೊಂಡು ಬರುತ್ತಿದ್ದರೂ ಭೂ ಮಾಲಿಕರ ತಕರಾರಿನಿಂದ ಸಮಸ್ಯೆಯಾಗಿಯೇ ಪರಿಣಮಿಸಿವೆ. ಮನೆಯ ಸದಸ್ಯರನ್ನು ಕಳೆದುಕೊಂಡು ದುಃಖ ಒಂದೆಡೆಯಾದರೆ ಅಂತ್ಯಸಂಸ್ಕಾರ ಮಾಡುವುದಾದರೂ ಎಲ್ಲಿ ಎನ್ನುವ ಚಿಂತೆ ಸೂತಕದ ಮನೆಗೆ ದೊಡ್ಡ ಸಮಸ್ಯೆಯಾಗಿದೆ. ಹೊಲ, ತೋಟ, ಸ್ವಂತ ಕೃಷಿ ಜಮೀನು ಹೊಂದಿದವರಿಗೆ ಇದೊಂದು ಸಮಸ್ಯೆಯಲ್ಲ. ಆದರೆ ಸ್ವಂತ ಭೂಮಿ ಇಲ್ಲದವರ ಪಾಡು ದೇವರಿಗೆ ಪ್ರೀತಿ. ಹೀಗಾಗಿಯೇ ಹಳ್ಳ, ನಾಲೆ, ಕರೆ ಅಕ್ಕಪಕ್ಕದ ಸ್ಥಳ ನೆಚ್ಚಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಭೂಮಿ ಕೊಡುವವರಿಲ್ಲ: ಕೆಲ ಗ್ರಾಮಗಳಲ್ಲಿ ಸರಕಾರಿ ಭೂಮಿಯಿದ್ದರೂ ರಕ್ಷಣೆಯ ಕೊರತೆ ಹಿನ್ನೆಲೆಯಲ್ಲಿ ಒತ್ತುವರಿ ಯಾಗಿವೆ. ಪ್ರತಿಯೊಂದು ಗ್ರಾಮಗಳಿಗೆ ರುದ್ರಭೂಮಿ ಕಲ್ಪಿಸಬೇಕೆನ್ನುವ ಕಾರಣಕ್ಕೆ ಸರಕಾರ ಬಿಡುಗಡೆ ಮಾಡುತ್ತಿರುವ ಹಣ ಯಾವುದಕ್ಕೂ ಸಾಲುತ್ತಿಲ್ಲ. ಜಿಲ್ಲೆಯೊಂದಕ್ಕೆ ಪ್ರತಿ ವರ್ಷ 20-22 ಲಕ್ಷ ರೂ. ಬಿಡುಗಡೆಯಾಗುತ್ತಿರುವುದು ಯಾವುದಕ್ಕೂ ಸಾಲುತ್ತಿಲ್ಲ. ಭೂಮಿಯ ಬೆಲೆ ಹೆಚ್ಚಾಗಿರುವುದರಿಂದ ಸರಕಾರ ಕೇಳುವ ದರಕ್ಕೆ ಯಾರೂ ಭೂಮಿ ಮಾರಾಟ ಮಾಡಲು ಮುಂದೆ ಬರುತ್ತಿಲ್ಲ. ಸರಕಾರದಿಂದ ಬಿಡುಗಡೆಯಾಗುವ ಅನುದಾನದಲ್ಲಿ ಭೂಮಿ ಖರೀದಿಸಿ ಅಭಿವೃದ್ಧಿಪಡಿಸುವುದು ಅಸಾಧ್ಯ ಎನ್ನುವಂತಾಗಿದೆ.

ಕೆಲ ಗ್ರಾಮಗಳಲ್ಲಿ ಸರಕಾರಿ ಭೂಮಿ ಲಭ್ಯತೆ ಗುರುತಿಸಿ ಮಂಜೂರಾತಿಗೆ ಪ್ರಸ್ತಾವನೆ ಹಾಗೂ ನೇರ ಖರೀದಿಗೆ ಸಲ್ಲಿಸಿದ ಪ್ರಸ್ತಾವನೆಗಳು ಕೇವಲ ಪತ್ರ ವ್ಯವಹಾರಕ್ಕೆ ಸಿಮೀತವಾಗುತ್ತಿವೆ. ಬೇರೆ ಇಲಾಖೆಯಿಂದ ಕಂದಾಯ ಇಲಾಖೆಗೆ ಭೂಮಿ ಪರಭಾರೆ ಕಾರ್ಯ ಕೂಡ ಅಷ್ಟೊಂದು ಸುಲಭವಾಗಿ ಆಗುತ್ತಿಲ್ಲ. ಇನ್ನೂ ನೇರ ಖರೀದಿಗೆ ಬೇಕಾದ ಅಗತ್ಯ ಅನುದಾನ ಕೂಡ ಬಾರದಿರುವುದು ಇಷ್ಟೊಂದು ವರ್ಷ ಕಳೆದರೂ ಪ್ರತಿಯೊಂದು ಗ್ರಾಮಕ್ಕೆ ರುದ್ರಭೂಮಿ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಿಲ್ಲ.

ಶವ ಸಂಸ್ಕಾರಕ್ಕಾಗಿ ಹಿಂದಿನಿಂದಲೂ ಪ್ರತಿಯೊಂದು ಗ್ರಾಮದಲ್ಲಿ ಒಂದಿಲ್ಲಾ ಒಂದು ವ್ಯವಸ್ಥೆ ಮಾಡಿಕೊಂಡಿದ್ದಾರೆ. ಪ್ರತ್ಯೇಕವಾಗಿ ಸ್ಮಶಾನ ಇಲ್ಲದ ಗ್ರಾಮಗಳಿಗೆ ಸರಕಾರದಿಂದಲೇ ಕಲ್ಪಿಸಲಾಗುತ್ತಿದೆ. ಪ್ರತ್ಯೇಕ ಸ್ಮಶಾನ ಇಲ್ಲದ ಗ್ರಾಮಗಳಲ್ಲಿ ಸರಕಾರಿ ಭೂಮಿ ಹಾಗೂ ಖಾಸಗಿಯವರಿಂದ ಖರೀದಿಸಿ ಒದಗಿಸಲಾಗುತ್ತಿದೆ. ಅಗತ್ಯಕ್ಕೆ ಹಾಗೂ ಸರಕಾರದ ಅನುದಾನ ಮೇರೆಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.ಶಿವಾನಂದ ಕರಾಳೆ, ಅಪರ ಜಿಲ್ಲಾಧಿಕಾರಿ

 

­ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.