ಹುಬ್ಬಳ್ಳಿಯಲ್ಲಿ ಪೊಲೀಸರ ಹತ್ಯೆಗೆ ನಡೆದಿತ್ತು ಸಂಚು!

ಕರ್ತವ್ಯಕ್ಕೆ ತೆರಳಿದ್ದ ಇಬ್ಬರು ಪೇದೆಗಳ ಹತ್ಯೆಗೆ ಮುಂದಾಗಿದ್ದ ಕಿಡಿಗೇಡಿಗಳು

Team Udayavani, Apr 21, 2022, 12:45 PM IST

12

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಗಲಭೆ ವೇಳೆ ಕಿಡಿಗೇಡಿಗಳು ಪೊಲೀಸರನ್ನೇ ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಲ್ಲದೆ, ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಸತ್ಯ ಹೊರ ಬಿದ್ದಿದೆ.

ಅಂದು ಗಲಭೆ ನಡೆಯುತ್ತಿದ್ದ ಸ್ಥಳಕ್ಕೆ ಕರ್ತವ್ಯಕ್ಕೆಂದು ತೆರಳುತ್ತಿದ್ದ ಇಬ್ಬರು ಕಾನ್ಸ್ಟೇಬಲ್ ಗ‌ಳಿಗೆ ನೂರಾರು ಜನರಿದ್ದ ಕಿಡಿಗೇಡಿಗಳ ಗುಂಪು ಅಡ್ಡಗಟ್ಟಿ ನಿಲ್ಲಿಸಿದ್ದಲ್ಲದೆ, ಅವರ ಕೊಲೆಗೆ ಯತ್ನಿಸಿದ್ದಾರೆ. ಆಗ ಸ್ವಲ್ಪದರಲ್ಲಿಯೇ ಇವರಿಬ್ಬರು ಬಚಾವ್‌ ಆಗಿ ತಮ್ಮ ಜೀವ ರಕ್ಷಿಸಿಕೊಂಡಿದ್ದಾರೆ.

ಕಸಬಾಪೇಟೆ ಠಾಣೆ ಕಾನ್ಸ್ಟೇಬಲ್ ಗ‌ಳಾದ ಮಂಜುನಾಥ ರಾಯ ರಡ್ಡಿ ಮತ್ತು ಅನಿಲ ಕಾಂಡೇಕರ ಗಲಭೆಕೋರರಿಂದ ಬಚಾವ್‌ ಆಗಿದ್ದಾರೆ. ಇವರು ಅಂದು ಗಲಾಟೆ ನಡೆಯುತ್ತಿದ್ದ ಸ್ಥಳಕ್ಕೆ ಕರ್ತವ್ಯಕ್ಕೆಂದು ಬೈಕ್‌ನಲ್ಲಿ ತೆರಳುತ್ತಿದ್ದಾಗ ಕಿಡಿಗೇಡಿಗಳ ಗುಂಪು ದಿಡ್ಡಿ ಹನುಮಂತ ದೇವಸ್ಥಾನ ಬಳಿ ತಡೆದು ಅವಾಚ್ಯವಾಗಿ ನಿಂದಿಸಿದ್ದಲ್ಲದೆ, ವಿವಾದಾತ್ಮಕ ಪೋಸ್ಟ್‌ ಮಾಡಿದವನನ್ನು ಬಂಧಿಸದಿದ್ದರೆ ನಿಮಗೆ ಹಾಗೂ ಪೊಲೀಸರನ್ನೆಲ್ಲ ಕೊಲೆ ಮಾಡುತ್ತೇವೆಂದು ಜೀವ ಬೆದರಿಕೆ ಹಾಕಿದ್ದಾರೆ.

ಮುಂದೆ ಸಾಗುವಾಗ ಇವರನ್ನು ಬಿಡಬ್ಯಾಡರಿ, ಕೊಂದ ಬಿಡ್ರಿ ಎಂದು ಪ್ರಚೋದನೆ ನೀಡಿದಾಗ 5-6 ಜನರಿದ್ದ ಗುಂಪು ದೊಡ್ಡ ಅಳತೆಯ ಕಲ್ಲನ್ನು ಇವರ ಮೇಲೆ ಎಸೆದು ಹತ್ಯೆಗೆ ಯತ್ನಿಸಿದ್ದಾರೆ. ಆಗ ಪೊಲೀಸರು ಬೈಕ್‌ ಅಲ್ಲಿಯೇ ಬಿಟ್ಟು, ಜೀವ ಉಳಿಸಿಕೊಂಡಿದ್ದಾರೆ.

ನಂತರ ಗಲಭೆಕೋರರು ಪೊಲೀಸರ ಬೈಕ್‌ಗೆ ಹಾನಿ ಪಡಿಸಿದ್ದಾರೆ. ಈ ಕುರಿತು ಹಳೇ ಹುಬ್ಬಳ್ಳಿ ಠಾಣೆಯಲ್ಲಿ ದೂರು ದಾಖಲಾಗಿ, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸ್ಟೇಟಸ್ ಹಾಕಿದ್ದ ಯುವಕನಿಗೆ ಪರೀಕ್ಷೆ ಬರೆಯಲು ಅವಕಾಶ: ವಾಟ್ಸ್‌ಆ್ಯಪ್‌ನಲ್ಲಿ ವಿವಾದಾತ್ಮಕ ಸ್ಟೇಟಸ್‌ ಹಾಕಿ ಬಂಧಿತನಾಗಿರುವ ಇಲ್ಲಿನ ಆನಂದನಗರ ನಿವಾಸಿ ಅಭಿಷೇಕ ಹಿರೇಮಠಗೆ ಮಧ್ಯಂತರ ಜಾಮೀನು ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೆ ಪೊಲೀಸ್‌ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪೊಲೀಸರಿಗೆ ಆದೇಶಿಸಿದೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಅಭಿಷೇಕ ವಿವಾದಾತ್ಮಕ ಸ್ಟೇಟಸ್‌ ಹಾಕಿದ ಆರೋಪದಡಿ ಏ.16ರಂದು ಬಂಧಿತನಾಗಿದ್ದ. ಈತನಿಗೆ ಏ.22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಇದೆ. ಕಾರಣ ಅದಕ್ಕೆ ಅನುವು ಮಾಡಿಕೊಡಿ. ಇಲ್ಲವೇ ಕೂಡಲೇ ಜಾಮೀನು ನೀಡಿ ಎಂದು ವಕೀಲ ಸಂಜೀವ ಬಡಸ್ಕರ ಅವರು 4ನೇ ಅಪರ ದಿವಾಣಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಜಾಮೀನು ಅರ್ಜಿ ವಜಾಗೊಳಿಸಿದೆ. ಆದರೆ ಅಭಿಷೇಕನಿಗೆ ಪರೀಕ್ಷೆ ಬರೆಯಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಕಾರಾಗೃಹ ಅಧಿಕಾರಿಗಳು ಆತನಿಗೆ ಪ್ರತ್ಯೇಕ ಸೆಲ್‌ನಲ್ಲಿಟ್ಟು ಅಭ್ಯಾಸ ಮಾಡಲು ಪುಸ್ತಕ, ಮತ್ತಿತರೆ ವ್ಯವಸ್ಥೆ ಮಾಡಬೇಕು. ಪೊಲೀಸರು ಬಂದೋಬಸ್ತ್ನಲ್ಲಿ ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಬೇಕು ಹಾಗೂ ಆತನನ್ನು ಎಲ್ಲ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆಗೆ ಹಾಜರುಪಡಿಸದೆ ಪ್ರತ್ಯೇಕ ಪರೀಕ್ಷಾ ಕೊಠಡಿ ಸೌಲಭ್ಯ ಕಲ್ಪಿಸಿ ಬಂದೋಬಸ್ತ್ ನಲ್ಲಿಯೇ ಪರೀಕ್ಷೆ ಬರೆಯಿಸಬೇಕು ಎಂದು ಪೊಲೀಸರಿಗೆ ಸೂಚಿಸಿದೆ.

ಮೌಲ್ವಿ ಅಲ್ಲ ಲಾರಿ ಚಾಲಕ: ಗಲಭೆಗೆ ಪ್ರಚೋದನೆ ನೀಡಿದ ಇಲ್ಲಿನ ಮಂಟೂರ ರಸ್ತೆಯ ಮಿಲ್ಲತ್‌ ನಗರ ನಿವಾಸಿ ಮೌಲ್ವಿ ಅಲ್ಲ, ಲಾರಿ ಚಾಲಕನಾಗಿದ್ದಾನೆ. ಈ ಹಿಂದೆ ಲಾರಿ ಚಾಲಕನಾಗಿದ್ದ ಈತ ಇತ್ತೀಚೆಗೆ ಮೌಲ್ವಿ ತರಹ ಬಟ್ಟೆ ಹಾಕಿಕೊಂಡು ಓಡಾಡುತಿದ್ದ. ಅಲ್ಲದೇ ತನ್ನದೇ ಆದ ಬೆಂಬಲಿಗರ ಗುಂಪು ಕಟ್ಟಿಕೊಂಡಿದ್ದ ಎಂದು ತಿಳಿದು ಬಂದಿದೆ.

ಹೈದರಾಬಾದ್‌ಗೆ ತೆರಳಿದ ತಂಡ: ಶನಿವಾರ ರಾತ್ರಿ ಗಲಭೆಗೆ ಪ್ರಚೋದನೆ ನೀಡಿದ ಮಂಟೂರ ರಸ್ತೆ ಮಿಲ್ಲತ್‌ ನಗರದ ಮೌಲ್ವಿ ತಲೆಮರೆಸಿಕೊಂಡು ಹೈದರಾಬಾದ್‌ನಲ್ಲಿ ಇದ್ದಾನೆಂಬ ಮಾಹಿತಿ ಮೇರೆಗೆ ತನಿಖಾ ತಂಡದ ಅಧಿಕಾರಿಯೊಬ್ಬರು ತಮ್ಮ ಸಿಬ್ಬಂದಿಯೊಂದಿಗೆ ಆತನ ಪತ್ತೆಗಾಗಿ ಹೈದರಾಬಾದ್‌ಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಮತ್ತೆ 12 ಮಂದಿ ವಶಕ್ಕೆ: ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಬುಧವಾರ 12 ಜನ ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಘಟನೆಗೆ ಸಂಬಂ ಧಿಸಿ ಪೊಲೀಸರು ಇದುವರೆಗೆ ಒಟ್ಟು 115 ಜನರನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಅವರಲ್ಲಿ 103 ಜನರನ್ನು ಕಲಬುರಗಿಯ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದಾರೆ. ಇನ್ನುಳಿದವರನ್ನು ಧಾರವಾಡದ ಕೇಂದ್ರ ಕಾರಾಗೃಹದಲ್ಲಿರಿಸಿದ್ದಾರೆ.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.