ಪೊಲೀಸ್‌ ಠಾಣೆಯಲ್ಲಿ ಸಾರಿಗೆ ಸಂಧಾನ!

Team Udayavani, Jul 10, 2018, 5:12 PM IST

10-july-22.jpg

ಕಲಘಟಗಿ: ತಾಲೂಕಿನ ಮಸಳಿಕಟ್ಟಿ, ಸಚ್ಚಿದಾನಂದನಗರ ಹಾಗೂ ಸೂಳಿಕಟ್ಟಿ ಗ್ರಾಮಗಳಿಂದ ಬೆಳಗಿನ ಸಮಯದಲ್ಲಿ
ವಿದ್ಯಾರ್ಥಿಗಳಿಗೆ ತೆರಳಲು ರಾಜ್ಯ ರಸ್ತೆಸಾರಿಗೆ ಸಂಸ್ಥೆ ಬಸ್‌ ಸೌಕರ್ಯವನ್ನು ಜು. 16ರಿಂದ ಕಲ್ಪಿಸಲಾಗುವುದು
ಎಂದು ಘಟಕ ವ್ಯವಸ್ಥಾಪಕ ಜೆ.ಎಸ್‌. ದಿವಾಕರ ಅವರು ಸಿಪಿಐ ವಿಜಯ ಬಿರಾದಾರ ಸಮ್ಮುಖದಲ್ಲಿ ಸಾರ್ವಜನಿಕರಿಗೆ ಭರವಸೆ ನೀಡಿದರು.

ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಬಸ್‌ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಈ ಮೊದಲೇ ಮನವಿ ಸಲ್ಲಿಸಿ, ಸೋಮವಾರದಂದು ಬಸ್‌ ನಿಲ್ದಾಣದಲ್ಲಿ ಪ್ರತಿಭಟಿಸುವುದಾಗಿ ಎಚ್ಚರಿಸಿದ್ದರು. ಪ್ರತಿಭಟನೆಗೆ ಮುಂದಾಗದಂತೆ ಮಧ್ಯಸ್ಥಿಕೆ ವಹಿಸಿದ ಸಿಪಿಐ ವಿಜಯ ಬಿರಾದಾರ, ಇಲ್ಲಿನ ಪೊಲೀಸ್‌ ಠಾಣೆಯಲ್ಲಿಯೇ ಗ್ರಾಮಸ್ಥರ ಮತ್ತು ಸಾರಿಗೆ ಸಂಸ್ಥೆ ಅಧಿಕಾರಿಗಳ ಸಂಧಾನ ಸಭೆ ನಡೆಸಿ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸುವಲ್ಲಿ ಯಶಸ್ವಿಯಾದರು.

ಮೂರೂ ಗ್ರಾಮಗಳಿಂದ ಪ್ರತಿನಿತ್ಯ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಬೆಳಗಿನ ಸಮಯದಲ್ಲಿ ಬೇರೆಡೆಗೆ ಹೋಗಲು ಸುಮಾರು ಐದು ಕಿಮೀ ನಡೆದುಕೊಂಡು ಹೋಗಬೇಕಾಗಿದೆ. 150ಕ್ಕೂ ಮಿಕ್ಕಿದ ವಿದ್ಯಾರ್ಥಿಗಳು ಸಂಗಮೇಶ್ವರ, ಕಲಘಟಗಿ ಪಟ್ಟಣ, ಹಳಿಯಾಳ, ಮುರ್ಕವಾಡ, ಹುಬ್ಬಳ್ಳಿ ಮತ್ತು ಧಾರವಾಡದ ಶಾಲಾ – ಕಾಲೇಜುಗಳಿಗೆ ಹೋಗಬೇಕಾದ ಅನಿವಾರ್ಯತೆ ಇದೆ. ಬೆಳಗಿನ 8 ಗಂಟೆ ಸಮಯಕ್ಕೆ ಬಸ್‌ ಸೌಲಭ್ಯ ಒದಗಿಸುವುದರಿಂದ ಗ್ರಾಮಸ್ಥರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಬೆಳಗಿನ ಸಮಯದಲ್ಲಿ ಬಸ್‌ ವ್ಯವಸ್ಥೆ ಕಲ್ಪಿಸಲೇಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ರಸ್ತೆ ಸಾರಿಗೆ ಸಂಸ್ಥೆ ಘಟಕ ವ್ಯವಸ್ಥಾಪಕ ಜೆ.ಎಸ್‌. ದಿವಾಕರ ಹಾಗೂ ಸಹಾಯಕ ಸಂಚಾರ ಅ ಧೀಕ್ಷಕ ಎಸ್‌.ಎಲ್‌. ನಾಗಾವಿ ಮಾತನಾಡಿ, 10 ಗಂಟೆಯ ಬಸ್‌ನ್ನು ರದ್ದುಗೊಳಿಸಿ ಬೆಳಗ್ಗೆ ಬಸ್‌ ವ್ಯವಸ್ಥೆ ಮಾಡಲಾಗುವುದು ಎಂದಾಗ ಅದಕ್ಕೆ ಗ್ರಾಮಸ್ಥರು ಒಪ್ಪಲಿಲ್ಲ. ನಂತರ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಬೆಳಗಿನ ಸಮಯದಲ್ಲಿ ಬಸ್‌ ಸೌಕರ್ಯ ಒದಗಿಸುವ ಭರವಸೆ ನೀಡಿದರು.

ಪಿಎಸ್‌ಐ ಆನಂದ ದೊಣಿ, ಬಿಜೆಪಿ ಮುಖಂಡ ಸದಾನಂದ ಚಿಂತಾಮಣಿ, ಫಕ್ಕಿರೇಶ ನೆಸ್ರೇಕರ, ರೈತ ಮುಖಂಡ ಉಳವಪ್ಪ ಬಳಿಗೇರ, ಇಮಾಮ್‌ ಸಾಬ್‌ ನಾಯ್ಕರ, ಬಲವಂತ ಗೆವಡೆ, ಮಹಾಂತೇಶ ಮಿರಾಶಿ, ಗ್ರಾಪಂ ಸದಸ್ಯ ಸಂಜು ಪಾಟೀಲ, ನಾಗೇಂದ್ರ ಹೊನ್ನಾಳಕರ, ಸುರೇಶ ಪೀಳೂಕರ, ಮಂಜುನಾಥ ಪಾಟೀಲ, ಅರ್ಜುನ ಪಾಟೀಲ, ಮಲ್ಲಯ್ಯ ಕರಡಿಮಠ, ಸಿದ್ದಪ್ಪ ತಿರ್ಲಾಪುರ, ಯಲ್ಲಪ್ಪ ದುಶ್ಕೇಕರ, ಗುರುಸಿದ್ಧಗೌಡ ಭರಮಗೌಡ್ರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.