ವಿವೇಕಾನಂದರು ಆದರ್ಶಪ್ರಾಯ


Team Udayavani, Jan 13, 2017, 12:04 PM IST

hub2.jpg

ಧಾರವಾಡ: ಯುವ ಸಮುದಾಯದಲ್ಲಿ ವಯೋ ಸಹಜವಾಗಿ ಆಕರ್ಷಣೆಗಳು ಉಂಟಾಗುತ್ತವೆ. ಆದರೆ ಅವು ಕ್ಷಣಿಕವಾಗಿರುತ್ತವೆ. ಅವುಗಳನ್ನು ನಮ್ಮ ಅಧೀನ ದಲ್ಲಿರಿಸಿಕೊಂಡು ಮುಂದೆ ಸಾಗಿದಾಗ ವ್ಯಕ್ತಿಗತ ಮತ್ತು ದೇಶದ ಭವಿಷ್ಯ ರೂಪಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಸ್ವಾಮಿ ವಿವೇಕಾನಂದರು ಸಾಗಿದ ಹಾದಿ ನಮಗೆ ಆದರ್ಶಪ್ರಾಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿ.ಶ್ರೀಶಾನಂದ ಹೇಳಿದರು. 

ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾ ಆಡಳಿತ, ಜಿಪಂ, ಪೊಲೀಸ್‌ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಕೀಲರ ಸಂಘಗಳ ಆಶ್ರಯದಲ್ಲಿ ನಗರದ ಕರ್ನಾಟಕ ಕಲಾ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಜಗತ್ತಿನಲ್ಲೇ ಅತಿ ಹೆಚ್ಚು ಯುವ ಶಕ್ತಿಯ ಸಂಪನ್ಮೂಲಧಿ ವನ್ನು ಭಾರತ ಹೊಂದಿದೆ. ಸಂಸ್ಕೃತಿಯ ಮೇಲೆ ನಾನಾ ರೀತಿಯ ದಾಳಿಗಳ ಮೂಲಕ ಯುವಶಕ್ತಿಯನ್ನು ತಪ್ಪು ಹಾದಿಗೆ ಎಳೆಯುವ ಪ್ರಯತ್ನಗಳು ನಡೆಯುತ್ತಿದ್ದು, ಯುವಜನತೆ ತಮ್ಮ ಜವಾಬ್ದಾರಿ ಅರಿತು ಹೆಜ್ಜೆ ಇಡಬೇಕು ಎಂದರು. ಅಭಿವ್ಯಕ್ತಿ ಸ್ವಾತಂತ್ರದ ಹೆಸರಿನಲ್ಲಿ ಮತ್ತೂಬ್ಬರಿಗೆ ನೋವಾಗುವಂತಹ ಮಾತುಗಳನ್ನು ಆಡಬಾರದು ಎಂದರು. 

ಜಿಪಂ ಸಿಇಒ ಆರ್‌.ಸ್ನೇಹಲ್‌ ಮಾತನಾಡಿ, ಧಾರವಾಡದ ಕರ್ನಾಟಕ ಕಾಲೇಜು ತನ್ನ ಶೈಕ್ಷಣಿಕ ಉತ್ಕೃಷ್ಟತೆಗೆ ಹೆಸರಾಗಿದೆ. ಇಲ್ಲಿ ಅಧ್ಯಯನ ಮಾಡಿದವರು ಮಹಾನ್‌ ಸಾಧನೆ ಮಾಡಿದ್ದಾರೆ. ಅಂತಹ ಪವಿತ್ರ ಸ್ಥಳದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆ ಹಿರಿಯರ ಹಾದಿಯನ್ನೇ ಮುಂದುವರಿಸಿಕೊಂಡು ಹೋಗಬೇಕು ಎಂದರು.  

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸ್ವಾಮಿ ವಿವೇಕಾನಂದರ ಜನ್ಮ ದಿನೋತ್ಸವ ಅಂಗವಾಗಿ ಹೊರ ತಂದ ಕಿರು ಪುಸ್ತಕವನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಿ, ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕೆಸಿಡಿ ಉಪ ಪ್ರಿನ್ಸಿಪಾಲ್‌ ಡಾ| ರಾಜೇಶ್ವರಿ ಮಹೇಶ್ವರಯ್ಯ ಅಧ್ಯಕ್ಷತೆ ವಹಿಸಿದ್ದರು. 

ವಕೀಲರ ಸಂಘದ ಅಧ್ಯಕ್ಷ ವಿ.ಡಿ.ಕಾಮರಡ್ಡಿ, ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಾದ ಬಿ.ಎಸ್‌. ಸಂಗಟಿ, ಪ್ರಫುಲ್ಲಾ ಎಸ್‌.ನಾಯಕ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಚೇತಾ ನೆಲವಗಿ, ನೆಹರೂ ಯುವ ಕೇಂದ್ರದ ಪುರಾಣಿಕಮಠ ಇದ್ದರು. ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಎಸ್‌.ಎನ್‌. ಹೆಗಡೆ ಸ್ವಾಗತಿಸಿದರು. ಎನ್‌.ಎಸ್‌.ಎಸ್‌. ಅಧಿಕಾರಿ ಡಾ|ಬಿ.ಎಸ್‌.ಭಜಂತ್ರಿ ವಂದಿಸಿದರು.  

ಟಾಪ್ ನ್ಯೂಸ್

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

14-thirthahalli

Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.