ನವೆಂಬರ್‌ ಅಂತ್ಯಕ್ಕೆ ತ್ಯಾಜ್ಯ ನೀರು ಘಟಕ ಪೂರ್ಣ

| ಐದು ವರ್ಷ ಕಾಲ ಗುತ್ತಿಗೆದಾರರಿಂದಲೇ ನಿರ್ವಹಣೆ | ಮಹಾನಗರ ಪಾಲಿಕೆ ಮೇಲೆ ಇಲ್ಲ ಯಾವುದೇ ಭಾರ: ಶಾಸಕ ಶೆಟ್ಟರ

Team Udayavani, Jul 2, 2019, 7:37 AM IST

hubali-tdy-2..

ಹುಬ್ಬಳ್ಳಿ: ಬೈರಿದೇವರಕೊಪ್ಪದಲ್ಲಿ ನಿರ್ಮಾಣವಾಗುತ್ತಿರುವ ತ್ಯಾಜ್ಯ ನೀರು ಸಂಸ್ಕರಣ ಘಟಕ ಕಾಮಗಾರಿಯನ್ನು ಮಾಜಿ ಸಿಎಂ ಜಗದೀಶ ಶೆಟ್ಟರ ಪರಿಶೀಲಿಸಿದರು.

ಹುಬ್ಬಳ್ಳಿ: ಅಮೃತ ಯೋಜನೆಯಲ್ಲಿ ನಗರದಲ್ಲಿ ನಡೆಯುತ್ತಿರುವ ತ್ಯಾಜ್ಯ ನೀರು ಶುದ್ಧೀಕರಣ ಘಟಕಗಳು ಹಾಗೂ ವೆಟ್ವೆಲ್ಗಳ ಕಾಮಗಾರಿ ನವೆಂಬರ್‌ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿಳಿಸಿದರು.

ಸೋಮವಾರ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 156 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ 5 ತ್ಯಾಜ್ಯ ನೀರು ಸಂಸ್ಕರಣ ಘಟಕಗಳು ಹಾಗೂ 6 ವೆಟ್ವೆಲ್ಗಳ ಕಾಮಗಾರಿ ನಡೆಯುತ್ತಿದ್ದು, ನಿಗದಿತ ವೇಳೆಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ ಐದು ವರ್ಷಗಳ ಕಾಲ ಗುತ್ತಿಗೆದಾರರು ನಿರ್ವಹಣೆ ಮಾಡಲಿದ್ದು, ಮಹಾನಗರ ಪಾಲಿಕೆ ಮೇಲೆ ಯಾವುದೇ ಭಾರ ಇರುವುದಿಲ್ಲ ಎಂದರು.

177.50 ಕಿಮೀ ಪೂರ್ಣ: 156 ಕೋಟಿ ರೂ. ವೆಚ್ಚದಲ್ಲಿ 202 ಕಿಮೀ ಒಳಚರಂಡಿ ನಿರ್ಮಿಸುವ ಗುರಿ ಹೊಂದಲಾಗಿತ್ತು. ಇಲ್ಲಿಯವರೆಗೆ 177.50 ಕಿಮೀ ಪೂರ್ಣಗೊಂಡಿದೆ. 7900 ಛೇಂಬರ್‌ನಲ್ಲಿ ಈಗಾಗಲೇ 6103 ನಿರ್ಮಿಸಲಾಗಿದೆ. ಈಗಾಗಲೇ ಗಬ್ಬೂರು ಹೊರವಲಯದಲ್ಲಿ 40 ಎಂಎಲ್ಡಿ ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸಲಾಗಿದೆ. ಅಲ್ಲಲ್ಲಿ ಚರಂಡಿ ವ್ಯವಸ್ಥೆ ಕಡಿತಗೊಂಡಿದ್ದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಕೊಳಚೆ ನೀರು ಬರುತ್ತಿಲ್ಲ. ಇಂತಹ ಸ್ಥಳಗಳನ್ನು ಗುರುತಿಸಿ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ವಿವರಿಸಿದರು.

ಅವಳಿ ನಗರದ ಕೆಲ ಕಾಲೋನಿಗಳು ಒಳಚರಂಡಿ ವ್ಯವಸ್ಥೆಯಿಂದ ವಂಚಿತವಾಗಿದ್ದು, ಅಂತಹ ಪ್ರದೇಶಗಳಲ್ಲೂ ಒಳಚರಂಡಿ ವ್ಯವಸ್ಥೆ ಕಲ್ಪಿಸುವುದಕ್ಕಾಗಿ ಪ್ರಸ್ತಾವನೆ ಸಿದ್ಧಪಡಿಸಲು ಸೂಚಿಸಲಾಗಿತ್ತು. 350 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸಲಾಗಿದೆ. ಬಿಆರ್‌ಟಿಎಸ್‌ ರಸ್ತೆ, ಸಿಆರ್‌ಎಫ್‌ ರಸ್ತೆಗಳಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ಸಮಸ್ಯೆಯಾಗುತ್ತಿರುವ ಕುರಿತು ಅಧಿಕಾರಿಗಳ ಗಮನಕ್ಕೆ ತಂದಿದ್ದು, ಕೂಡಲೇ ಪರಿಹಾರ ಕಲ್ಪಿಸುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಒತ್ತುವರಿ ತೆರವಿಗೆ ಅಧಿಕಾರಿಗಳಿಗೆ ಹೇಳಿ ಹೇಳಿ ಸುಸ್ತಾಗಿ ಹೋಗಿದೆ

ನಗರದಲ್ಲಿ ಒತ್ತುವರಿಗೆ ಸಮಸ್ಯೆಯಿಂದ ರಸ್ತೆ ಅಗಲೀಕರಣಕ್ಕೆ ಸಾಕಷ್ಟು ಸಮಸ್ಯೆಯಾಗಿದೆ. ಈ ಕುರಿತು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಸೂಚನೆ ನೀಡಿದ್ದು, ಕೆಲವೊಂದು ಕಡೆ ಅತಿಕ್ರಮಣ ತೆರವು ಕೆಲಸ ಆಗಿದೆ. ಕೆಲವೆಡೆ ಬಾಕಿ ಇರುವುದರಿಂದ ರಸ್ತೆ ನಿರ್ಮಾಣಕ್ಕೆ ಸಾಕಷ್ಟು ತೊಂದರೆಯಾಗಿದೆ. ಈ ಕುರಿತು ಅಧಿಕಾರಿಗಳಿಗೆ ಹೇಳಿ ನನಗೆ ಸುಸ್ತಾಗಿ ಹೋಗಿದೆ. ರಾಜ್ಯ ಸರಕಾರವೇ ಗೊಂದಲದಿಂದ ಕೂಡಿದ ಪರಿಣಾಮ ಸ್ಥಳೀಯವಾಗಿ ಅಧಿಕಾರಿಗಳಿಂದ ಕೆಲಸ ತೆಗೆದುಕೊಳ್ಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶೆಟ್ಟರ ಅಸಮಾಧಾನ ವ್ಯಕ್ತಪಡಿಸಿದರು.
ಅತಿಕ್ರಮಣದಾರರಿಗೆ ನೋಟಿಸ್‌; ದಾಖಲೆಗಳ ಪರಿಶೀಲನೆ

ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಒತ್ತುವರಿಯನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಸಂಬಂಧಿಸಿದವರಿಗೆ ಈಗಾಗಲೇ ನೋಟಿಸ್‌ ನೀಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಪ್ರಶಾಂತ ಮಿಶ್ರಾ ತಿಳಿಸಿದರು. ಕಮರಿಪೇಟೆ ಪೊಲೀಸ್‌ ಠಾಣೆ ಮುಂಭಾಗದ ರಸ್ತೆಯ ಪ್ರಾರ್ಥನಾ ಮಂದಿರ ಹಾಗೂ ಆದರ ಹಿಂಭಾಗದಲ್ಲಿರುವ ಶೆಡ್‌ವೊಂದಕ್ಕೆ ನೋಟಿಸ್‌ ಅಂಟಿಸಲಾಗಿದೆ. ಇಲ್ಲಿಯವರೆಗೂ ಯಾರೂ ನೋಟಿಸ್‌ ಕುರಿತು ಸಂಪರ್ಕಿಸಿಲ್ಲ. ಕಾನೂನು ಪ್ರಕಾರ ಮೂರು ನೋಟಿಸ್‌ ಜಾರಿ ಮಾಡಿ ತೆರವುಗೊಳಿಸಲಾಗುವುದು. ಒತ್ತುವರಿ ಕುರಿತು ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ. ಅತಿಕ್ರಮಣ ತೆರವಿಗೆ ಯಾವ ರಾಜಕೀಯ ನಾಯಕರ ಒತ್ತಡವಿಲ್ಲ. ನಗರದ ಅಭಿವೃದ್ಧಿ ದೃಷ್ಟಿಯಿಂದ ತೆರವು ಖಚಿತ ಎಂದು ಹೇಳಿದರು.
ನಗರದಲ್ಲಿ ಈಗಾಗಲೇ 250 ಕಿಮೀ ವ್ಯಾಪ್ತಿಯ ಒಳಚರಂಡಿ ವ್ಯವಸ್ಥೆಯಿತ್ತು. ಇದೀಗ 202 ಕಿಮೀ ಯೋಜನೆ ಕೈಗೊಳ್ಳಲಾಗಿದೆ. ಈ ಯೋಜನೆಯಲ್ಲಿ ಬಿಟ್ಟು ಹೋಗಿರುವ ಪ್ರದೇಶ ಸೇರಿದಂತೆ ಒಟ್ಟಾರೆ 180 ಕಿಮೀ ವಿಸ್ತೀರ್ಣದ ಒಳ ಚರಂಡಿ ವ್ಯವಸ್ಥೆ ಕಲ್ಪಿಸಲು 350 ಕೋಟಿ ರೂ. ವೆಚ್ಚದ ವಿಸ್ತೃತ ವರದಿ ಸರಕಾರಕ್ಕೆ ನೀಡಲಾಗಿದೆ. • ಡಿ.ಎಲ್. ರಾಜು, ಒಳಚರಂಡಿ-ಜಲಮಂಡಳಿ ಮುಖ್ಯ ಅಭಿಯಂತರ

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.