ಮೂವರು ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ

Team Udayavani, Aug 14, 2019, 11:31 AM IST

ಧಾರವಾಡ: ತನ್ನ ಮೂವರು ಮಕ್ಕಳೊಂದಿಗೆ ತಾಯಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ತನ್ನ ಮಕ್ಕಳೊಂದಿಗೆ ಕೆಲಗೇರಿ ಕೆರೆಗೆ ಹಾರಿದ ಮಹಿಳೆಯನ್ನು ರತ್ನವ್ವ ವೇದಾರ ಎಂದು ಗುರುತಿಸಲಾಗಿದೆ.

ಘಟನೆ ನಡೆದ ತಕ್ಷಣವೇ ಸ್ಥಳೀಯರು ತಾಯಿ ಮತ್ತು ಇಬ್ಬರು ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇನ್ನೊಂದು ಮಗು ಮಾತ್ರ ನೀರಿನಲ್ಲಿ ಕೊಚ್ಚಿಹೋಗಿದ್ದು ಹುಡುಕಾಟ ಮುಂದುವರೆದಿದೆ.

ಮೂಲತಃ ಕೆಲಗೇರಿಯವರಾಗಿರುವ ರತ್ನವ್ವರನ್ನು ಜಮಖಂಡಿಯ ವ್ಯಕ್ತಿಯೊಬ್ಬರಿಗೆ ವಿವಾಹ ಮಾಡಿಕೊಡಲಾಗಿತ್ತು. ಪಂಚಮಿ ಹಬ್ಬಕ್ಕೆಂದು ರತ್ನವ್ವ ತನ್ನ ಮೂವರು ಮಕ್ಕಳೊಂದಿಗೆ ತವರು ಮನೆಗೆ ಬಂದಿದ್ದರು. ಇಂದು ಏಕಾಏಕಿ ಮಕ್ಕಳೊಂದಿಗೆ ತಾನೂ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದು ಮಾತ್ರ ಯಾಕೆ ಎಂಬ ವಿಚಾರ ಇದೀಗ ಸ್ಥಳೀಯರ ಅಚ್ಚರಿಗೆ ಕಾರಣವಾಗಿದೆ.

ಘಟನೆಯಲ್ಲಿ ರಕ್ಷಣೆಗೊಳಗಾದ ತಾಯಿ ಮತ್ತು ಇಬ್ಬರು ಮಕ್ಕಳನ್ನು ಇದೀಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ