ಸಸಿ ನೆಟ್ಟು ಬೆಳೆಸುವುದೇ ಭೂದೇವಿಯ ಪೂಜೆ

Team Udayavani, Sep 19, 2018, 5:48 PM IST

19-sepctember-23.jpg

ಹುಬ್ಬಳ್ಳಿ: ನಮ್ಮನ್ನು ಪೋಷಿಸುವ ಭೂಮಿಯನ್ನು ಇನ್ನಾದರೂ ರಕ್ಷಿಸಬೇಕಿದೆ. ಆ ನಿಟ್ಟಿನಲ್ಲಿ ಸಸಿ ನೆಟ್ಟು ಬೆಳೆಸುವುದೇ ಭೂದೇವಿಯ ಪೂಜೆಯೆಂದು ಪಾಲಿಸಬೇಕಾಗಿದೆ ಎಂದು ವೃಕ್ಷಕ್ರಾಂತಿ ಅಭಿಯಾನದ ಹರಿಕಾರ ಬಿ.ಎಸ್‌. ಕೊಣ್ಣೂರ ಹೇಳಿದರು. ಇಲ್ಲಿನ ವಿದ್ಯಾನಗರದ ಅಕ್ಷಯ ಕಾಲೊನಿಯ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನದ ಕೋರ್‌ ವಿಜ್ಞಾನ ಚಟುವಟಿಕಾ ಕೇಂದ್ರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ದೇಶಪಾಂಡೆ ಪ್ರತಿಷ್ಠಾನದ ಸಹಯೋಗದಲ್ಲಿ ವಿಶ್ವ ಓಝೋನ್‌ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಬೀಜ ಮೊಳೆಯಲು ಬೊಗಸೆ ಮಣ್ಣು ಅಭಿಯಾನ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಗಿಡ-ಮರಗಳು ಪ್ರಾಣವಾಯು ನೀಡುವ ಸಂಜೀವಿನಿ. ಉಸಿರಾಡುವವರೆಲ್ಲ ಸಸಿ ನೆಟ್ಟು ಹೆಮ್ಮರವಾಗಿ ಬೆಳೆಸಬೇಕು. ಮರಗಳೇ ಈ ಭೂಮಿಯನ್ನು ಅಮರವಾಗಿಸುವುದು. ಪ್ರಕೃತಿಯಲ್ಲಿನ ಹಸಿರು ಮನುಷ್ಯನ ದುರಾಸೆಯಿಂದ ಕ್ಷೀಣಿಸುತ್ತಿದೆ. ಜೀವರಾಶಿಗಳಿಗೆ ಇರುವುದೊಂದೇ ಭೂಮಿ. ಅದನ್ನು ವಿನಾಶದಂಚಿಗೆ ತಂದ ಮನುಷ್ಯನಿಗೆ ಇನ್ನೊಂದು ಭೂಮಿ ಸೃಷ್ಟಿಯಲು ಸಾಧ್ಯವಿಲ್ಲ ಎಂದರು.

ವಿಜ್ಞಾನ ಕೇಂದ್ರದ ಮುಖ್ಯಸ್ಥ ಗುರು ಮದ್ನಳ್ಳಿ ಪ್ರಾಸ್ತಾವಿಕ ಮಾತನಾಡಿ, ಪ್ರಕೃತಿಯನ್ನು ತಾನಿರುವಂತೆಯೇ ಬಿಟ್ಟಿದ್ದರೆ ಇಂದು ಪರಿಸರ ದಿನದ ಆಚರಣೆಗಳ ಅಗತ್ಯವಿರಲಿಲ್ಲ. ಮರಗಳನ್ನೆಲ್ಲ ಕಡಿದುಹಾಕಿ, ಇಡೀ ಭೂಮಿಯನ್ನೇ ಕಾಂಕ್ರೀಟ್‌ ಕಾಡಾಗಿಸಿ ಅದನ್ನೇ ಅಭಿವೃದ್ಧಿ ಎಂದು ಭಾವಿಸಿರುವ ಮನುಷ್ಯ ಉಸಿರಾಡುವ ಗಾಳಿ, ಸೇವಿಸುವ ಆಹಾರ, ಕುಡಿಯುವ ನೀರು ಎಲ್ಲವನ್ನೂ ತನ್ನ ದುರಾಸೆಯಿಂದ ವಿಷವಾಗಿಸಿದ್ದಾನೆ. ಜೀವಗ್ರಹದ ಎಲ್ಲ ಜೀವಿಗಳಿಗೂ ಕಂಟಕವಾಗಿದ್ದಾನೆ ಎಂದು ಹೇಳಿದರು.

ಶಿವಶಂಕರ ಗಾಣಗೇರ, ಇಮ್ರಾನ್‌ ಹಳ್ಳಿಕೇರಿ, ದೀಪಾ ಹಜೇರಿ, ಅಶ್ವಿ‌ನಿ ಟೊಂಗಳೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ಕುಸುಗಲ್ಲನ ಸರಕಾರಿ ಪ್ರೌಢಶಾಲೆ ಹಾಗೂ ನಗರದ ಆರ್‌.ಕೆ. ಕೊಕಾಟೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಬಿ.ಎಸ್‌. ಕೊಣ್ಣೂರ ಮಾರ್ಗದರ್ಶನದಲ್ಲಿ ವೆಚ್ಚವಿಲ್ಲದೆ ಸಸಿ ತಯಾರಿಸುವ ಕುರಿತು ತರಬೇತಿ ಪಡೆದರು. ವಿದ್ಯಾರ್ಥಿಗಳು ತಮ್ಮ ಜನ್ಮದಿನದಂದು ಸಸಿ ನೆಟ್ಟು ಬೆಳೆಸುವ ಸಂಕಲ್ಪ ಮಾಡಿದರು. ವಿಜ್ಞಾನ ಕೇಂದ್ರದ ಶಂಕರ ಕುರುಬರ, ಬಸವರಾಜ ತಡಹಾಳ, ಫಕ್ಕೀರೇಶ್ವರ ಮಡಿವಾಳರ, ಶಶಿಕಲಾ ಗೌರಿ, ನಿವೇದಿತಾ ಜವಳಿಮಠ, ಸುಜಯ ಭೋಜಕರ, ದೀಪ್ತಿ ಗಾಯಕವಾಡ, ಪುಂಡಲೀಕ ದೇವರಮನಿ, ರಮೇಶ ಹಣಸಿ, ಬಸವರಾಜ ಮುದಗಲ್ಲ, ಜ್ಯೋತಿ ಕಾಪರೆ, ಹನ್ನಿಫಾ ಗೋಟೇಗಾರ ಇದ್ದರು. ನಿಂಗನಗೌಡ ಸತ್ತಿಗೌಡ್ರ, ಮಂಜುನಾಥ ಜಾಣಣ್ಣವರ ನಿರೂಪಿದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.