ಸ್ಮಾರ್ಟ್‌ಸಿಟಿ ಟೆಂಡರ್‌ಗೆ ವರ್ಷಾಂತ್ಯದ ಗಡುವು


Team Udayavani, Sep 18, 2019, 9:35 AM IST

huballi-tdy-3

ಹುಬ್ಬಳ್ಳಿ: ಕೇಂದ್ರ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಸ್ಮಾರ್ಟ್‌ ಸಿಟಿ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ. ಕಾಮಗಾರಿಗಳು ಗೋಚರಿಸುತ್ತಿಲ್ಲ ಎಂಬ ಅಸಮಾಧಾನ-ಆರೋಪಗಳ ನಡುವೆ, 2019ರ ಡಿಸೆಂಬರ್‌ದೊಳಗೆ ಪ್ರೊಜೆಕ್ಟ್ಗಳ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳ್ಳಬೇಕು. 2020ರ ಮಾರ್ಚ್‌ದೊಳಗೆ ಕಾಮಗಾರಿಗಳಿಗೆ ಕೆಲಸದ ಕಾರ್ಯಾದೇಶ(ವರ್ಕ್‌ ಆರ್ಡರ್‌)ನೀಡಬೇಕೆಂದು ಕೇಂದ್ರ ಸರಕಾರ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ.

ಸ್ಮಾರ್ಟ್‌ ಸಿಟಿ ಯೋಜನೆಯ ಎರಡನೇ ಪಟ್ಟಿಯಲ್ಲಿ ಅವಕಾಶ ಗಿಟ್ಟಿಸಿಕೊಂಡಿರುವ ಹುಬ್ಬಳ್ಳಿ-ಧಾರವಾಡದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ ಎಂಬ ಬೇಸರ ಜನರದ್ದಾಗಿದೆ. ಸ್ಮಾರ್ಟ್‌ ಸಿಟಿ ಯೋಜನೆ ಅನುಷ್ಠಾನ ತೀವ್ರಗೊಳಿಸುವ, ಕಾಲಮಿತಿಯೊಳಗೆ ಕಾಮಗಾರಿಗಳ ಪೂರ್ಣಗೊಳಿಸಲು ಒತ್ತು ನೀಡಿರುವ ಕೇಂದ್ರ ಸರಕಾರ, ಕಾಲಮಿತಿಯ ಪಟ್ಟಿಯಂತೆಯೇ ಎಲ್ಲ ಯೋಜನೆಗಳ ಅನುಷ್ಠಾನ ಆಗಲೇಬೇಕೆಂದು ಸ್ಮಾರ್ಟ್‌ ಸಿಟಿ ಯೋಜನೆಗೆ ಆಯ್ಕೆಯಾಗಿರುವ ಎಲ್ಲ ಮಹಾನಗರಗಳಿಗೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದೆ.

ಶೇ.25 ಕಾಮಗಾರಿ ಪೂರ್ಣ ಅವಶ್ಯ: ಸ್ಮಾರ್ಟ್‌ ಸಿಟಿ ಯೋಜನೆ ಅನುಷ್ಠಾನ ನಿಟ್ಟಿನಲ್ಲಿ ಆಯಾ ರಾಜ್ಯಗಳ ರಾಜ್ಯ ಸರಕಾರದ ಸಹಕಾರವೂ ಅವಶ್ಯವಾಗಿದೆ. ಯೋಜನೆಗೆ ಕೇಂದ್ರ-ರಾಜ್ಯ ಸರಕಾರಗಳು ಸಮಾನ ಹಣ ನೀಡುತ್ತಿವೆ. ಯೋಜನೆ ಪ್ರಗತಿ ಮಾತ್ರ ನಿರೀಕ್ಷಿತ ರೀತಿಯಲ್ಲಿ ಇಲ್ಲದಿರುವುದು ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಲ್ಲಿ ಬೇಸರ ತರಿಸುವಂತೆ ಮಾಡಿದೆ.

ಸ್ಮಾರ್ಟ್‌ ಸಿಟಿ ಯೋಜನೆ ಅನುಷ್ಠಾನ ನಿಟ್ಟಿನಲ್ಲಿ ವಿವಿಧ ಕಡೆ ಟೀಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರಕಾರ ಹಲವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಕೇಂದ್ರದ ನಿಯಮದ ಪ್ರಕಾರ 2019ರ ಡಿಸೆಂಬರ್‌ ಅಂತ್ಯದೊಳಗೆ ಸ್ಮಾರ್ಟ್‌ ಯೋಜನೆಯ ಎಲ್ಲ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳ್ಳಲೇಬೇಕಿದೆ.

2020ರ ಮಾರ್ಚ್‌ ಅಂತ್ಯದೊಳಗೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿದ ಎಲ್ಲ ಕಾಮಗಾರಿಗಳಿಗೆ ಕೆಲಸದ ಆದೇಶ ಪತ್ರ ನೀಡಬೇಕಿದೆ. ಅದೇ ರೀತಿ 2020ರ ಜೂನ್‌ ಅಂತ್ಯದೊಳಗೆ ವಿವಿಧ ಯೋಜನೆಗಳ ಕಾಮಗಾರಿ ಕನಿಷ್ಠ ಶೇ.25ರಷ್ಟಾದರೂ ಮುಗಿಯಬೇಕಿದೆ.

ಹು.ಧಾ.ದಲ್ಲಿ 54 ಪ್ರೊಜೆಕ್ಟ್: ಅವಳಿನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ಅಡಿಯಲ್ಲಿ ಒಟ್ಟು 54 ಪ್ರೊಜೆಕ್ಟ್ಗಳನ್ನು ಕೈಗೊಳ್ಳಲಾಗುತ್ತಿದೆ. ಇದರಲ್ಲಿ ಅಂದಾಜು 304.51ಕೋಟಿ ರೂ.ವೆಚ್ಚದ 17 ಕಾಮಗಾರಿಗಳು ಟೆಂಡರ್‌ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿವೆ. ಅದೇ ರೀತಿ 368.57ಕೋಟಿ ರೂ.ವೆಚ್ಚದ ಸುಮಾರು 25 ಪ್ರೊಜೆಕ್ಟ್ಗಳು ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಕಾಮಗಾರಿ ಕೆಲಸದಾದೇಶ ಪತ್ರ ನೀಡಲಾಗಿದೆ. ಕೆಲ ಕಾಮಗಾರಿಗಳು ಪ್ರಗತಿ ಹಂತದಲ್ಲಿವೆ. ಅಂದಾಜು 283.05 ಕೋಟಿ ರೂ.ವೆಚ್ಚದಲ್ಲಿನ ನಾಲಾ ಅಭಿವೃದ್ಧಿ, ನೆಹರು ಮೈದಾನ, ಉಣಕಲ್ಲ ಕೆರೆ ಇನ್ನಿತರ ಕಾಮಗಾರಿಗಳು ಡಿಪಿಆರ್‌ ಹಂತದಲ್ಲಿವೆ. ಒಟ್ಟು ಎಂಟು ಕಾಮಗಾರಿಗಳು ಇನ್ನೂ ಬಾಕಿ ಇದ್ದು, ಇದರಲ್ಲಿ ಆರು ಕಾಮಗಾರಿ ಡಿಪಿಆರ್‌ ಹಂತದಲ್ಲಿದ್ದರೆ, ಎರಡು ಕಾಮಗಾರಿ ಕಾನ್ಸೆಪ್ಟ್ ಹಂತದಲ್ಲಿವೆ. ಅಕ್ಟೋಬರ್‌ ಅಂತ್ಯದೊಳಗೆ ಟೆಂಡರ್‌ ಪ್ರಕ್ರಿಯೆ ಕೈಗೊಳ್ಳಲು ನಿರ್ಧರಿಸಲಾಗಿದೆ.

ಹೊಸೂರು ವೃತ್ತದ ಬಳಿ ಇರುವ ವೇರ್‌ಹೌಸ್‌ ಜಾಗ ಬಳಕೆ ಇಲ್ಲದೆ ಇದ್ದು, ಆ ಜಾಗ ಪಡೆದು ಅಲ್ಲಿ ಸಾರ್ವಜನಿಕರ ಬಳಕೆಗೆ ಕೆಲ ಸೌಲಭ್ಯಗಳನ್ನು ನೀಡಲು ಯೋಜಿಸಲಾಗಿದೆಯಾದರೂ, ಜಾಗ ನೀಡಿಕೆಗೆ ವಾರ್ಷಿಕ 1.29 ಕೋಟಿ ರೂ.ಗಳ ಬಾಡಿಗೆ ಬೇಡಿಕೆ ಇರಿಸಿದ್ದರಿಂದ ಸ್ಮಾರ್ಟ್‌ ಸಿಟಿ ಯೋಜನೆ ಹಾಗೂ ವೇರ್‌ಹೌಸ್‌ಗೆ ಸಂಬಂಧಿಸಿದ ಇಲಾಖೆ ನಡುವೆ ಚರ್ಚೆ ನಡೆಯುತ್ತಿದೆ.

ಈಗಾಗಲೇ ಎಸ್‌ಪಿವಿ ರಚನೆಯಾಗಿದ್ದು, ಕಂಟ್ರೋಲ್ ಆ್ಯಂಡ್‌ ಕಮಾಂಡ್‌ ರೂಂ ರೂಪುಗೊಂಡಿದೆ. ಜನತಾ ಬಜಾರ್‌, ಎಂ.ಜಿ.ಮಾರುಕಟ್ಟೆ ಅಭಿವೃದ್ಧಿ ಕಾಮಗಾರಿ ಇನ್ನು ತೀವ್ರತೆ ಪಡೆಯಬೇಕಿದೆ. ಬಹುಪಯೋಗಿ ಕಾರುಗಳ ನಿಲುಗಡೆ ಕಟ್ಟಡ ಕಾಮಗಾರಿ ಶುರುವಾಗಿದೆ. ಕೆಲ ಕಾಮಗಾರಿಗಳಿಗೆ ಟೆಂಡರ್‌ ಹಾಕಲು ಗುತ್ತಿಗೆದಾರರು ಮುಂದೆ ಬಾರದ್ದರಿಂದ ಮತ್ತೆ ಟೆಂಡರ್‌ ಕರೆಯಬೇಕಿದೆ.

ಸ್ಮಾರ್ಟ್‌ ಸಿಟಿ ಯೋಜನೆಗೆ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರು ಇರಲಿಲ್ಲ, ಸಿಬ್ಬಂದಿ ಕೊರತೆ ಇತ್ತು. ಆದರೆ ಇದೀಗ ಪೂರ್ಣಾವಧಿ ಎಂಡಿ ಬಂದಿದ್ದು, ಸ್ಮಾರ್ಟ್‌ ಸಿಟಿ ಯೋಜನೆ ನಿರ್ವಹಣೆಗೆ ಹೊರಗುತ್ತಿಗೆ ಆಧಾರದಲ್ಲಿ ಮುಖ್ಯ ಅಭಿಯಂತರ, ಸಹಾಯಕ ಹಾಗೂ ಕಿರಿಯ ಅಭಿಯಂತರು ಸೇರಿದಂತೆ ಒಟ್ಟು 33 ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಸಿಬ್ಬಂದಿ ಕೊರತೆ ಇಲ್ಲವಾಗಿದೆ. ಇನ್ನಾದರೂ ಸ್ಮಾರ್ಟ್‌ ಸಿಟಿ ಯೋಜನೆ ನಿರೀಕ್ಷಿತ ರೀತಿಯಲ್ಲಿ ಅನುಷ್ಠಾನಗೊಳ್ಳುವುದೇ ಕಾದು ನೋಡಬೇಕು.

ಕ್ವಾಲಿಟಿ ಕಂಟ್ರೋಲ್ ಕಚೇರಿ: ವಿವಿಧ ಕಾಮಗಾರಿಗೆ ಬಳಸುವ ಸಾಮಗ್ರಿಗಳ ಗುಣಮಟ್ಟ ಪರೀಕ್ಷೆಗೆ ಸ್ಮಾರ್ಟ್‌ ಸಿಟಿ ಯೋಜನೆ ಅಡಿಯಲ್ಲಿ ಕ್ವಾಲಿಟಿ ಕಂಟ್ರೋಲ್ ಕಚೇರಿಯನ್ನು ಇಲ್ಲಿನ ಹೊಸೂರು ಬಳಿ ಆರಂಭಿಸಲಾಗುತ್ತದೆ. ವಿವಿಧ ಕಾಮಗಾರಿಗಳಿಗೆ ಬಳಸುವ ಜಲ್ಲಿ, ಮರಳು ಇನ್ನಿತರ ಸಾಮಗ್ರಿಗಳ ಗುಣಮಟ್ಟ ಪರೀಕ್ಷೆಯನ್ನು ಈ ಕಚೇರಿಯಲ್ಲಿ ಕೈಗೊಳ್ಳಲಾಗುತ್ತದೆ. ಸರಕಾರದ ಲೋಕೋಪಯೋಗಿ, ಜಲಸಂಪನ್ಮೂಲ ಇಲಾಖೆ ಸೇರಿದಂತೆ ಸರಕಾರದ ವಿವಿಧ ಇಲಾಖೆಗಳು ತಾವು ಬಳಸುವ ಸಾಮಗ್ರಿಗಳ ಗುಣಮಟ್ಟ ಪರೀಕ್ಷೆಯನ್ನು ಇಲ್ಲಿ ಕೈಗೊಳ್ಳಬಹುದಾಗಿದೆ. ಅಂದಾಜು 85 ಲಕ್ಷ ರೂ.ವೆಚ್ಚದಲ್ಲಿ ಕ್ವಾಲಟಿ ಕಂಟ್ರೋಲ್ ಕಚೇರಿ ರೂಪುಗೊಳ್ಳಲಿದ್ದು, ಗುಣಮಟ್ಟ ಪರೀಕ್ಷೆಗೆ ಅಗತ್ಯವಿರುವ ಅತ್ಯಾಧುನಿಕ ಸಮಾಗ್ರಿಗಳನ್ನು ಇದು ಹೊಂದಲಿದೆ. ಅದೇ ರೀತಿ ಕಚೇರಿಯಲ್ಲಿ ಒಬ್ಬರು ಸಹಾಯಕ ಅಭಿಯಂತರ ಹಾಗೂ ಇಬ್ಬರು ಸಿಬ್ಬಂದಿ ಇರಲಿದ್ದಾರೆ. ಸುಮಾರು 3ಸಾವಿರ ಚದರ ಅಡಿ ಜಾಗದಲ್ಲಿ ಕಚೇರಿ ರೂಪುಗೊಳ್ಳಲಿದೆ.

 

 

•ಅಮರೇಗೌಡ ಗೋನವಾರ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.