ಸೇನೆ ಸೇರಲು ಯುವಕರು ಆಸಕ್ತಿ ತೋರಲಿ

Team Udayavani, Apr 11, 2019, 10:27 AM IST

hub-2
ಹುಬ್ಬಳ್ಳಿ: ಯುವಕರು ಎಂಜಿನಿಯರ್‌, ಡಾಕ್ಟರ್‌ ಆಗಲು ಆಸಕ್ತಿ ತೋರುವಂತೆ ಭಾರತೀಯ ಸೇನೆ ಸೇರಲು ಆಸಕ್ತಿ ತೋರಬೇಕು ಎಂದು ನಿವೃತ್ತ ಸೇನಾಧಿಕಾರಿ ಬಸಪ್ಪ ಜಿನ್ನೂರ ಹೇಳಿದರು.
ಗ್ಲೋಬಲ್‌ ಕಾಲೇಜ್‌ ಆಫ್‌ ಮ್ಯಾನೇಜ್‌ ಮೆಂಟ್‌, ಐಟಿ ಹಾಗೂ ಕಾಮರ್ಸ್‌ ವತಿಯಿಂದ ಭಾರತೀಯ ಸೈನಿಕರಿಗೆ ಗೌರವ
ನೀಡಲು ಬುಧವಾರ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಆಯೋಜಿಸಿದ್ದ ಸ್ವಾಭಿಮಾನ ಕಾರ್ಯಕ್ರಮದಲ್ಲಿ ಅವರು
ಮುಖ್ಯ ಅತಿಥಿಯಾಗಿ ಮಾತನಾಡಿದರು.
ದೇಶಕ್ಕೆ ಎಂಜಿನಿಯರ್‌ಗಳು, ವೈದ್ಯರ, ವ್ಯವಸ್ಥಾಪಕರ ಅವಶ್ಯತೆಯಿದ್ದಂತೆ ದೇಶ ರಕ್ಷಣೆಗೆ ಸೈನಿಕರ ಅವಶ್ಯಕತೆ ಕೂಡ ಇರುತ್ತದೆ. ಆಸಕ್ತ ಯುವಕರು ಭಾರತೀಯ ಸೇನೆ ಸೇರಬೇಕು. ದೇಶಸೇವೆಯ ಸತ್ಕಾರ್ಯ ಮಾಡಬೇಕು ಎಂದರು.
ಸೇನಾಧಿಕಾರಿ ಪರಶುರಾಮ ದಿವಾನದ ಮಾತನಾಡಿ, ಭಾರತದ ಸೈನಿಕರು ಗಡಿಯಲ್ಲಿ ಪಾಕಿಸ್ತಾನ ಹಾಗೂ ಚೀನಾ ದಾಳಿಗೆ ಪ್ರತ್ಯುತ್ತರ ನೀಡಿದಾಗ ಮಾತ್ರ ನಮ್ಮ ಜನರಿಗೆ ಸೈನಿಕರ ಬಗ್ಗೆ ಗೌರವ ಮೂಡುತ್ತದೆ.ಉಳಿದ ಸಂದರ್ಭದಲ್ಲಿ
ಸೈನಿಕರು ಮಾಡುವ ಕಾರ್ಯವನ್ನು ಯಾರೂ ಕೂಡ ಶ್ಲಾಘಿಸುವುದಿಲ್ಲ ಎಂದರು.
ಸೈನಿಕರು ದಿನದ 24 ಗಂಟೆ ವರ್ಷದ 12 ತಿಂಗಳು ಗಡಿಯಲ್ಲಿ ದೇಶ ಕಾಯುತ್ತಾರೆ. ಶತ್ರುಗಳು ಗಡಿಯಲ್ಲಿ ನುಸುಳದಂತೆ
ತಡೆಯುತ್ತಾರೆ. ಹವಾಮಾನ ವೈಪರಿತ್ಯ ಸಂದರ್ಭದಲ್ಲಿ ಕೂಡ ದೇಶ ಕಾಯುವ ಕಾಯಕ ಮಾಡುತ್ತಾರೆ ಎಂದರು.
 ಆಸಕ್ತರು ಭಾರತೀಯ ಸೈನ್ಯ ಸೇರಬಹುದು. ಭೂಸೇನೆ, ವಾಯುಸೇನೆ ಹಾಗೂ ಜಲಸೇನೆಯಲ್ಲಿ ಸಾಕಷ್ಟು ಅವಕಾಶಗಳಿದ್ದು, ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದರು.
ಯುವಕರು ದೃಢಸಂಕಲ್ಪ ಮಾಡಿದರೆ ಯಾವುದೇ ಕ್ಷೇತ್ರದಲ್ಲಾದರೂ ಅಮೋಘ ಸಾಧನೆ ಮಾಡಲು ಸಾಧ್ಯ. ಗುರಿ ಇಟ್ಟುಕೊಂಡು ನಿರಂತರ ಕಾರ್ಯಪ್ರವೃತ್ತರಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಗ್ಲೋಬಲ್‌ ಕಾಲೇಜ್‌ ಆಫ್‌ ಕಾಮರ್ಸ್‌ ಹಳೆ ವಿದ್ಯಾರ್ಥಿಗಳ ಅಸೋಸಿಯೇಶನ್‌ ಉದ್ಘಾಟಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ನೀಡಲಾಯಿತು. ಗ್ಲೋಬಲ್‌ ಎಜುಕೇರ್‌ ಫೌಂಡೇಶನ್‌ ಅಧ್ಯಕ್ಷ ಎನ್‌.ಬಿ.ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಡಾ| ಮಹೇಶ ದೇಶಪಾಂಡೆ, ಪುಷ್ಪಾ ಹಿರೇಮಠ, ಸಚಿನಕುಮಾರ, ಸವಿತಾ ಶೇಜವಾಡಕರ ವೇದಿಕೆ ಮೇಲಿದ್ದರು.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.