ಸರ್ಕಾರಿ ಬಾಲ ಮಂದಿರ ಅಭಿವೃದ್ಧಿಗೆ ಸಾರ್ವಜನಿಕ ಸಹಭಾಗಿತ್ವ ಅಗತ್ಯ

ಉದ್ದಿಮೆದಾರರ ಸಂಘಗಳ ಸಭೆ ಕರೆಯಲು ಡಿಸಿ ಸೂಚನೆ

Team Udayavani, Jun 28, 2019, 3:17 PM IST

ವಿಜಯಪುರ: ನಗರದಲ್ಲಿ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಹಾಗೂ ತನಿಖಾ ಸಮಿತಿಯ ಮೊದಲನೇ ತ್ತೈ ಮಾಸಿಕ ಸಭೆ ಜರುಗಿತು.

ವಿಜಯಪುರ: ಸರ್ಕಾರಿ ಬಾಲ ಮಂದಿರಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಹಾಗೂ ಸಮಗ್ರ ಅಭಿವೃದ್ಧಿಗೆ ಸಾರ್ವಜನಿಕರ ಸಹಭಾಗಿತ್ವ ಪಡೆಯಬೇಕು. ಮಕ್ಕಳ ಪಾಲನಾ ಸಂಸ್ಥೆಗಳಿಗೆ ಹೆಚ್ಚಿನ ಸೌಕರ್ಯಗಳನ್ನು ಕಲ್ಪಿಸಲು ಉದ್ದಿಮೆದಾರರು, ವಿವಿಧ ಸಂಘಟನೆಗಳ ಸಭೆ ಕರೆಯುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಹಾಗೂ ತನಿಖಾ ಸಮಿತಿ ಮೊದಲನೆ ತ್ತೈ ಮಾಸಿಕ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

ಮಕ್ಕಳ ರಕ್ಷಣೆ ಮತ್ತು ಪಾಲನೆ ಹಾಗೂ ಪುನರ್ವಸತಿಗೆ ಬಾಲ ಮಂದಿರಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕಲ್ಪಿಸಬೇಕು. ಬಾಲಕಿಯರ ಬಾಲ ಮಂದಿರದಲ್ಲಿ ಹೆಚ್ಚುವರಿ ಕಾವಲುಗಾರ, ಶೌಚಾಲಯ ದುರಸ್ತಿ, ಇತರೆ ಬಾಲ ಮಂದಿರಗಳಲ್ಲಿ ಇ-ಲರ್ನಿಂಗ್‌ ಲ್ಯಾಬ್‌, ಮಕ್ಕಳಿಗೆ ತುರ್ತು ಚಿಕಿತ್ಸೆಗೆ ಸಹಾಯಕ ಶುಶ್ರೂಷಕರ ನೇಮಕ, ಆವರಣದಲ್ಲಿ ಸಿಮೆಂಟ್ ಆಸನಗಳು, ಸೋಲಾರ್‌ ವಿದ್ಯುತ್‌ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ನಗರದ ಟಕ್ಕೆ ಪ್ರದೇಶದಲ್ಲಿರುವ ಬಾಲಕರ (ಕಿರಿಯ) ಬಾಲ ಮಂದಿರದಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ಬಾಲ ಮಂದಿರಗಳನ್ನು ಉದ್ದಿಮೆದಾರರು ದತ್ತು ನೀಡಬೇಕು. ಬಾಲ ಮಂದಿರಗಳ ಅಭಿವೃದ್ಧಿಯಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಗೆ ಮೂಲಕ ಗ್ರಂಥಾಲಯ ನಿರ್ಮಾಣಕ್ಕೆ ದಾನಿಗಳ ನೆರವು ಪಡೆಯಬೇಕು. ಇದಕ್ಕಾಗಿ ಶೀಘ್ರವೇ ಉದ್ದಿಮೆದಾರರ ಸಂಘಗಳ ಸಭೆ ಕರೆಯುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು, ಪೋಕ್ಸೊ ಪ್ರಕರಣಗಳ ಕುರಿತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಭೆಯ ಗಮನಕ್ಕೆ ತಂದಾಗ, ಬಾಲ್ಯವಿವಾಹ ತಡೆಗಟ್ಟಲು ಎಲ್ಲ ಬಾಲ್ಯ ವಿವಾಹ ನಿಷೇಧಾಧಿಕಾರಿಗಳ ಸಹಕಾರದ ಅಗತ್ಯವಿದೆ. ಬಾಲ್ಯ ವಿವಾಹ ಕಾನೂನಿನ ಕುರಿತು ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರ ಹಾಗೂ ಅರಿವು ಮೂಡಿಸುವ ಕೆಲಸ ಮಾಡಬೇಕು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಪರಿಣಾಮಕಾರಿ ಕಾರ್ಯ ನಿರ್ವಹಿಸಬೇಕು. ಮಕ್ಕಳ ಮೇಲೆ ದೌರ್ಜನ್ಯ ನಡೆಯದಂತೆ ವ್ಯಾಪಕ ಪ್ರಚಾರ ಮಾಡಲು ನಿರ್ದೇಶನ ನೀಡಿದರು.

ತನಿಖಾ ಸಮಿತಿ ಸದಸ್ಯ ಪೀಟರ್‌ ಅಲೆಕ್ಸಾಂಡರ್‌ ಮಾತನಾಡಿ, ನಗರದಲ್ಲಿರುವ 2 ಮಕ್ಕಳ ಪಾಲನಾ ಸಂಸ್ಥೆಗಳಲ್ಲಿಯ ಎಚ್ಐವಿ ಸೋಂಕಿತ ಮಕ್ಕಳಿಗೆ ಪೌಷ್ಟಿಕ ಆಹಾರದ ಅವಶ್ಯಕತೆ ಇದೆ. ಕೂಡಲೇ ಜಿಲ್ಲಾಡಳಿತ ಈ ವಿಷಯದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಿರ್ಮಲಾ ಸುರಪುರ, ಜಿಲ್ಲಾ ತನಿಖಾ ಸಮಿತಿ ಸದಸ್ಯರಾದ, ಡಾ| ರುದ್ರಾಂಬಿಕಾ ಬಿರಾದಾರ, ಡಾ| ಮರುಳಸಿದ್ದಪ್ಪ, ಸರಕಾರಿ ಬಾಲ ಮಂದಿರಗಳ ಅಧೀಕ್ಷಕ ಬಸವರಾಜ ಜಿಗಳೂರ, ದೀಪಾಕ್ಷಿ ಜಾನಕಿ, ವೀಕ್ಷಣಾಲಯದ ಪರಿವೀಕ್ಷಕಿ ಇಂದುಮತಿ ನಾಯಕ ಸೇರಿದಂತೆ ಇತರರು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ