ತವರಿಗೆ ತೆರಳಿದ 466 ವಲಸೆ ಕಾರ್ಮಿಕರು

Team Udayavani, Jun 7, 2020, 2:02 PM IST

ತವರಿಗೆ ತೆರಳಿದ 466 ವಲಸೆ ಕಾರ್ಮಿಕರು

ಸಾಂದರ್ಭಿಕ ಚಿತ್ರ

ಗದಗ: ಕೋವಿಡ್‌-19 ಸೋಂಕು ನಿಯಂತ್ರಣಕ್ಕಾಗಿ ಕೇಂದ್ರ ಸರಕಾರ ಹೊರಡಿಸಿದ್ದ ಲಾಕ್‌ಡೌನ್‌ ನಿಂದಾಗಿ ಜಿಲ್ಲೆಯಲ್ಲಿ ಸಿಲುಕಿದ್ದ ವಿವಿಧ ರಾಜ್ಯಗಳ ಒಟ್ಟು 466 ವಲಸೆ ಕಾರ್ಮಿಕರನ್ನು ವಿಶೇಷ ಶ್ರಮಿಕ ರೈಲಿನ ಮೂಲಕ ತಮ್ಮ ಊರುಗಳಿಗೆ ರವಾನಿಸಲಾಗಿದೆ ಎಂದು ಕಾರ್ಮಿಕ ಇಲಾಖೆಯ ಅಧಿಕಾರಿ ಸುಧಾ ಗರಗ ತಿಳಿಸಿದ್ದಾರೆ.

ಈ ಪೈಕಿ ಬಿಹಾರದ 116, ಉತ್ತರ ಪ್ರದೇಶದ 193, ರಾಜಸ್ಥಾನ 24, ಜಾರ್ಖಂಡ್‌ 56, ಒರಿಸ್ಸಾ 49, ಪಶ್ಚಿಮ ಬಂಗಾಳ 16, ಆಂಧ್ರಪ್ರದೇಶದ 12 ಜನ ವಲಸೆ ಕಾರ್ಮಿಕರ ವಿವರಗಳನ್ನು ಸೇವಾಸಿಂಧು ತಂತ್ರಾಂಶದಲ್ಲಿ ದಾಖಲಿಸಿ, ಜಿಲ್ಲಾಡಳಿತ ಭವನದಿಂದ ಜಿಲ್ಲಾಡಳಿತ ವ್ಯವಸ್ಥೆ ಮಾಡಿದ್ದ ಬಸ್‌ಗಳಲ್ಲಿ ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ತಲುಪಿಸಿ, ಅಲ್ಲಿಂದ ಶ್ರಮಿಕ ರೈಲಿನಲ್ಲಿ ತಮ್ಮ ತಮ್ಮ ರಾಜ್ಯಗಳಿಗೆ ತೆರಳುವಂತೆ ವ್ಯವಸ್ಥೆ ಮಾಡಲಾಗಿದೆ. ಲಾಕ್‌ಡೌನ್‌ ಜಾರಿಯಿಂದಾಗಿ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದರು.

ಅದರಂತೆ ಅಂತರರಾಜ್ಯ ವಲಸೆ ಕಾರ್ಮಿಕರಿಗೆ ತೊಂದರೆಯಾಗಬಾರದು ಎಂಬ ಸದುದ್ದೇಶದಿಂದ ರಾಜ್ಯ ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ ಗುರುತಿಸಿದ್ದ 629 ವಲಸೆ ಕಾರ್ಮಿಕರಿಗೆ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಯಿತು. ಜಿಲ್ಲೆಯ ಕಟ್ಟಡ, ಇತರ ನಿರ್ಮಾಣ ಕಾರ್ಮಿಕರು ಮತ್ತು ಅಂಸಂಘಟಿತ ವಲಯದ ಕಾರ್ಮಿಕರಿಗೆ ಅವರ ಸುರಕ್ಷತೆಗಾಗಿ ರೆಡ್‌ಕ್ರಾಸ್‌ ಸಂಸ್ಥೆಯ ವತಿಯಿಂದ ಮಾಸ್ಕ್, ಸೋಪ್‌ ಮತ್ತು ಸ್ಯಾನಿಟೈಸರ್‌ ಹಂಚಿಕೆ ಮಾಡಲಾಗಿದೆ. ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ನಿಯಮಿತವಾಗಿ ಕಾರ್ಮಿಕರ ವೈದ್ಯಕೀಯ ತಪಾಸಣೆ ಮಾಡಿಸಲಾಯಿತು. ಅಲ್ಲದೇ, ಇಲಾಖೆಯ ಸಹಾಯವಾಣಿಯಲ್ಲಿ ಆಹಾರ ಧಾನ್ಯ ಪೂರೈಕೆಯ ಕೋರಿಕೆ ಬಂದ ಸಂದರ್ಭದಲ್ಲಿ ಅಗತ್ಯ ಆಹಾರ ಧಾನ್ಯಗಳನ್ನು ವಿತರಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 25,080 ನೋಂದಾಯಿತ ಕಟ್ಟಡ ಕಾರ್ಮಿಕರಿದ್ದಾರೆ. ರಾಜ್ಯ ಕಲ್ಯಾಣ ಕಾರ್ಮಿಕ ಮಂಡಳಿಯಿಂದ ತಲಾ 5 ಸಾವಿರ ಪರಿಹಾರಧನವನ್ನು ಒಟ್ಟು 16,639 ಕಾರ್ಮಿಕರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗಿದೆ. ಅದರಂತೆ ಇನ್ನುಳಿದ ಫಲಾನುಭವಿಗಳ ಖಾತೆಗೆ ಪರಿಹಾರ ಜಮಾ ಮಾಡುವ ಪ್ರಕ್ರಿಯೆ ನಡೆದಿದೆ ಎಂದು ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.