
ಇಳಕಲ್ ಚೆಕ್ ಪೋಸ್ಟ್; 6.40 ಲಕ್ಷ ನಗದು ಹಾಗೂ 5 ಲಕ್ಷ ರೂ. ಮೌಲ್ಯದ ಬಟ್ಟೆಗಳು ಸೀಜ್
Team Udayavani, Mar 26, 2023, 12:05 PM IST

ಗದಗ: ಜಿಲ್ಲೆಯ ಎರಡು ಪ್ರತ್ಯೇಕ ಚೆಕ್ ಪೋಸ್ಟ್ ನಲ್ಲಿ 6.40 ಲಕ್ಷ ನಗದು ಹಾಗೂ 5 ಲಕ್ಷ ರೂ. ಮೌಲ್ಯದ ಬಟ್ಟೆಗಳನ್ನು ರವಿವಾರ ಪೊಲೀಸರು ಸೀಜ್ ಮಾಡಿದ್ದಾರೆ.
ಜಿಲ್ಲೆಯ ಗಜೇಂದ್ರಗಡ ಪಟ್ಟಣ ಸಮೀಪದ ಇಳಕಲ್ ನಾಕಾ ಚೆಕ್ ಪೋಸ್ಟ್ ನಲ್ಲಿ ವ್ಯಕ್ತಿಯೊಬ್ಬ ಕೊಪ್ಪಳದಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ ಪೊಲೀಸರು ತಪಾಸಣೆಗೆ ಒಳಪಡಿಸಿದಾಗ ದಾಖಲೆ ಇಲ್ಲದ 6.40 ಲಕ್ಷ ರೂ. ನಗದು ಪತ್ತೆಯಾಗಿದ್ದು, ಹಣವನ್ನು ಸೀಜ್ ಮಾಡಿದ್ದಾರೆ.
ಇದನ್ನೂ ಓದಿ:ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ 19 ಮಂದಿ ಮೃತ್ಯು: 4 ದಿನದಲ್ಲಿ 5ನೇ ಘಟನೆ
ತಾಲೂಕಿನ ಮುಳಗುಂದ ಚೆಕ್ ಪೋಸ್ಟ್ ಬಳಿ ಬೆಂಗಳೂರಿನಿಂದ ಗದಗಗೆ ಆಗಮಿಸುತ್ತಿದ್ದ ಗೂಡ್ಸ್ ವಾಹನದಲ್ಲಿ 5 ಲಕ್ಷ ರೂ. ಮೌಲ್ಯದ ಬಟ್ಟೆ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದ್ದು ಬಟ್ಟೆ ಸಹಿತ ಗೂಡ್ಸ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
