ವಿಶಿಷ್ಟ ಕೌಶಲ ವೃದ್ಧಿಸಿಕೊಳ್ಳಲು ಸಲಹೆ

ತೋಂಟದಾರ್ಯ ಕಾಲೇಜಿನಲ್ಲಿ ಕ್ರೀಡಾ-ಸಾಂಸ್ಕೃತಿಕ ಚಟುವಟಿಕೆಗೆ ಚಾಲನೆ

Team Udayavani, Aug 11, 2019, 12:13 PM IST

ಗದಗ: ಕೆಎಲ್ಇ ಸಂಸ್ಥೆಯ ಜ| ತೋಂಟದಾರ್ಯ ಮಹಾವಿದ್ಯಾಲಯದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರೊ| ಎಸ್‌.ವಿ. ಸಂಕನೂರ ಮಾತನಾಡಿದರು.

ಗದಗ: ವಿದ್ಯಾರ್ಥಿಗಳು ಜೀವನದ ಉದ್ದಕ್ಕೂ ಸ್ವಯಂ ಪ್ರೇರಣೆ ಹಾಗೂ ಕ್ರಿಯಾಶೀಲತೆಯಿಂದ ಎಲ್ಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಇದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಲು ಸಹಾಯಕಾರಿಯಾಗುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಪ್ರೊ| ಎಸ್‌.ವಿ. ಸಂಕನೂರ ಹೇಳಿದರು.

ನಗರದ ಕೆಎಲ್ಇ ಸಂಸ್ಥೆಯ ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಕೇವಲ ಹೆಚ್ಚು ಅಂಕ ಪಡೆಯಬೇಕೆಂಬ ಹುಮ್ಮಸ್ಸು ಹೊಂದದೇ ತಮ್ಮ ಆಸಕ್ತಿದಾಯಕ ಕ್ಷೇತ್ರಗಳಿಗೆ ಅನುಗುಣವಾಗಿ ಪಠ್ಯದೊಂದಿಗೆ ವಿಶಿಷ್ಟ ಕೌಶಲ ವೃದ್ಧಿಸಿಕೊಳ್ಳಬೇಕು. ಉತ್ಸಾಹದಿಂದ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಾಗುತ್ತದೆ. ಇದಕ್ಕಿಂತ ಮಿಗಿಲಾಗಿ ಭಾವನಾತ್ಮಕ ಬೆಳವಣಿಗೆಯೂ ಹೆಚ್ಚುತ್ತದೆ. ಆಗಮಾತ್ರ ಸರ್ವತೋಮುಖ ಅಭಿವೃದ್ಧಿಯಾಗಲು ಸಾಧ್ಯ ಎಂದರು.

ಯುಪಿಎಸ್‌ಸಿಯಲ್ಲಿ ದೇಶಕ್ಕೆ 17ನೇ ರ್‍ಯಾಂಕ್‌ ಗಳಿಸಿದ ರಾಹುಲ್ ಸಂಕನೂರ ಮಾತನಾಡಿ, ಹಳ್ಳಿಯ ಯುವಜನರು ಕೀಳರಿಮೆ ತೊರೆದು ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು ಎಂದರು.

ಪದವಿ ಕಾಲೇಜಿನ ಪ್ರಾಚಾರ್ಯ ಸಿ. ಲಿಂಗಾರೆಡ್ಡಿ ಮಾತನಾಡಿ, ಬಡತನ, ಹಳ್ಳಿ ಬದುಕು ಸಾಧನೆಗೆ ಅಡೆತಡೆಯಾಗದು ಎಂದರು. ಪ್ರೊ| ಎಸ್‌.ಎಂ. ಬೆಂಗಳೂರ, ಶರಣಪ್ಪ ಸಂಕನೂರ, ಎಸ್‌.ಪಿ. ಸಂಶಿಮಠ, ವೀರೇಶ ಕೂಗು, ಅಶೋಕ ನಿಲೂಗಲ್ ಇದ್ದರು. ಪ್ರೊ| ಎಸ್‌.ಜೆ. ಹಿರೇಮಠ ಸ್ವಾಗತಿಸಿದರು. ಪ್ರೊ| ಎಂ.ಎಂ. ನರಗುಂದ ಪರಿಚಯಿಸಿದರು. ರಘುವೀರ ಕಲ್ಬುರ್ಗಿ ವಂದಿಸಿದರು. ಪ್ರೊ| ಶ್ವೇತಾ ಗುಂಡಾ ಹಾಗೂ ಪ್ರೊ| ಎಸ್‌.ಬಿ. ಹಾವೇರಿ ನಿರೂಪಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಕಳೆದ ಆರು ದಶಕಗಳಿಂದ ಕನ್ನಡ ಸಾಹಿತ್ಯಾಧ್ಯಯನ, ಸಾಹಿತ್ಯಿಕ-ಸಾಮಾಜಿಕ ಮೌಲ್ಯಗಳನ್ನು ಸಮೀಕ್ಷಿಸುವ ಉದ್ದೇಶದ ಸಂಶೋಧನ ಕಾರ್ಯಗಳಲ್ಲಿ ನಿರತರಾಗಿ ಹಲವು ವರ್ಷಗಳ...

  • ಕನ್ನಡ ನಾಡು ಕಂಡಿರುವ ಬಹುಮುಖಿ ಆಸಕ್ತಿಯ ರೇಖಾಚಿತ್ರ ಕಲಾವಿದ ಕಮಲೇಶ್‌ (1943-2014) ನಿಸರ್ಗದೃಶ್ಯ, ಸ್ಮಾರಕ ದೃಶ್ಯ, ವಿಶಿಷ್ಟ ಶಿಲ್ಪ ವೈಭವ ಕಾಣಿಸುವ ಚಿತ್ರಗಳ ರಚನೆಯ...

  • ಬೆಂಗಳೂರು: ನಗರದಲ್ಲಿರುವ ಜಾಹೀರಾತು (ಕಬ್ಬಿಣದ ಸ್ಟ್ರಕ್ಚರ್‌) ಫ‌ಲಕಗಳನ್ನು 15ದಿನಗಳ ಒಳಗಾಗಿ ತೆರವು ಮಾಡುವುದಕ್ಕೆ ಕ್ರಮ ವಹಿಸುವಂತೆ ಬಿಬಿಎಂಪಿ ಆಯುಕ್ತ ಬಿ.ಎಚ್‌....

  • ಬೆಳಗಾವಿ: ಪಕ್ಕದಲ್ಲೇ ಜೀವನದಿ ಕೃಷ್ಣೆ ಹರಿಯುತ್ತಿದ್ದರೂ ಪ್ರತಿ ವರ್ಷ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುವ ನದಿ ತೀರದ ನೂರಾರು ಗ್ರಾಮಗಳಿಗೆ...

  • ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ 1,253 ಕೋಟಿ ರೂ.ಮೀಸಲಿಡುವಂತೆ ಮನವಿ ಮಾಡಲಾಗಿದೆ ಎಂದು ಬಿಬಿಎಂಪಿಯ...