ಬೆಳೆ ಹಾನಿ ಸಮೀಕ್ಷೆಗೆ ಬರಲಿದೆ ಮತ್ತೂಂದು ತಂಡ

ಸಂತ್ರಸ್ತರ ಪರಿಹಾರ ಬಿಡುಗಡೆಗೆ ಮೊದಲ ಆದ್ಯತೆ

Team Udayavani, Aug 27, 2019, 11:46 AM IST

ಗದಗ: ಹೊಳೆಆಲೂರು ಪ್ರವಾಸಿ ಮಂದಿರದಲ್ಲಿ ನೆರೆ ಅಧ್ಯಯನ ತಂಡ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ಸಭೆ ನಡೆಸಿತು.

ಗದಗ: ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಲ್ಲಿ ಅತ್ಯಗತ ಗಂಭೀರ ಪರಿಸ್ಥಿತಿ ಇದೆ. ಮನೆ, ಬೆಳೆಗಳು, ರಸ್ತೆ ಸೇತುವೆ ಮತ್ತಿತರೆ ಮೂಲ ಸೌಲಭ್ಯಗಳು ಹಾನಿಯಾಗಿದ್ದು, ಇವುಗಳ ಸುಧಾರಣೆ, ಪುನರ್ವಸತಿಗಾಗಿ ಸಾಕಷ್ಟು ಸಮಯ ಹಿಡಿಯಬಹುದು. ಆದರೆ, ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಹೇಳಿದರು.

ನರಗುಂದ ಹಾಗೂ ರೋಣ ತಾಲೂಕಿನಲ್ಲಿ ಮಲಪ್ರಭಾ ನವಿಲುತೀರ್ಥ ಜಲಾಶಯದ ಹೊರ ಹರಿವಿನ ನೆರೆಯಿಂದ ಹಾನಿಗೊಳಗಾಗಿರುವುದನ್ನು ವೀಕ್ಷಿಸಿದ ಬಳಿಕ ಕೊಣ್ಣೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳೆ ಹಾನಿ ಕುರಿತಂತೆ ಮತ್ತೂಂದು ಕೇಂದ್ರ ತಂಡ ಸಮೀಕ್ಷೆಗೆ ಬರಲಿದೆ ಎಂದರು.

ಈಗಾಗಲೇ ಮನೆ, ಬೆಳೆ, ರಸ್ತೆ, ಸೇತುವೆ ಹಾನಿಯ ಪ್ರಾಥಮಿಕ ವರದಿಯನ್ನಾಧರಿಸಿ ರಾಜ್ಯ ಸರ್ಕಾರ ರಾಜ್ಯದ ನೆರೆ ಜಿಲ್ಲೆಗಳ ಸಮಗ್ರ ಹಾನಿ ಕುರಿತು ಪ್ರಸ್ತಾವನೆಯನ್ನು ಮಂಗಳವಾರ ರಾಜ್ಯ ಸರ್ಕಾರ ನೀಡಲಿದೆ. ಗದಗ ಜಿಲ್ಲೆಯ ನೆರೆ ಪೀಡಿತ ಗ್ರಾಮಸ್ಥರನ್ನು ನೆರೆ ನೀರಿಕ್ಷೆಯಲ್ಲಿ ಸಾಕಷ್ಟು ಮುಂಜಾಗ್ರತೆಯಾಗಿ ಜನ, ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರಿಂದ ಸಂಭವಿಸಬಹುದಾದ ಹೆಚ್ಚಿನ ಹಾನಿ ತಪ್ಪಿಸಲಾಗಿದೆ ಎಂದರು.

ಅಧಿಕಾರಿಗಳೊಂದಿಗೆ ಸಭೆ:

ಇದಕ್ಕೂ ಮುನ್ನ ಹೊಳೆಆಲೂರಿನ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಕೇಂದ್ರ ನೆರೆ ಅಧ್ಯಯನ ತಂಡ ಸಮಾಲೋಚನೆ ಸಭೆ ನಡೆಸಿತು.

ಮಳೆ ಕೊರತೆಯಿಂದಾಗಿ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತವೆಂದು ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ, ಮಲಪ್ರಭಾ ಅಚ್ಚುಕಟ್ಟು ಪ್ರದೇಶದಲ್ಲಿ ಭಾರಿ ಮಳೆಯಿಂದ ನವಿಲುತೀರ್ಥ ಜಲಾಶಯದಿಂದ 70 ಸಾವಿರ ದಿಂದ 1.20 ಲಕ್ಷ ಕ್ಯೂಸೆಕ್‌ ನೀರನ್ನು ಎರಡು ದಿನಗಳ ಕಾಲ ಹರಿಸಿದ್ದರಿಂದ ನರಗುಂದ ತಾಲೂಕಿನ ಕೊಣ್ಣೂರ, ಲಖಮಾಪುರ, ಬೂದಿಹಾಳ, ಶಿರೋಳ, ಕುರ್ಲಗೇರಿ, ಮೂಗನೂರ, ಬನಹಟ್ಟಿ, ಸುರಕೋಡ, ಹದಲಿ, ಗಂಗಾಪುರ, ಖಾನಾಪುರ, ವಾಸನ, ಬೆಳ್ಳೇರಿ, ರೋಣ ತಾಲೂಕಿನ ಹೊಳೆ ಆಲೂರು, ಕುರುವಿನಕೊಪ್ಪ, ಮೆಣಸಗಿ, ಅಮರಗೋಳ, ಹೊಳೆಮಣ್ಣೂರ, ಬಸರಕೋಡ, ಬಿ.ಎಸ್‌.ಬೆಲೇರಿ, ಬೋಪಳಾಪುರ, ಗಾಡಗೋಳಿ, ಯಾವಗಲ್ಲ, ಕರಮಡಿ, ಅಸೂಟಿ ಗ್ರಾಮಗಳು ಹಾಗೂ ಶಿರಹಟ್ಟಿಯ 8 ಗ್ರಾಮಗಳು ತುಂಗಭದ್ರಾ ಪ್ರವಾಹದಿಂದ ಜಲಾವೃತಗೊಂಡು ಅಪಾರ ಹಾನಿ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಕೇಂದ್ರ ತಂಡಕ್ಕೆ ಮಾಹಿತಿ ನೀಡಿದರು.

ಜಿಲ್ಲಾಡಳಿತ ಹವಾಮಾನ ಎಚ್ಚರಿಕೆ ಆಧರಿಸಿ, ಮುಂಚಿತವಾಗಿ ಗ್ರಾಮಗಳ ಜನ, ಜಾನುವಾರುಗಳ ಸ್ಥಳಾಂತರಕ್ಕೆ ಕ್ರಮ, ಮುನ್ನೆಚ್ಚರಿಕೆ ನೀಡಲಾಗಿತ್ತು. ಆದರೆ, ನಿರೀಕ್ಷೆಗಿಂತ ಹೆಚ್ಚು ಹೊರ ಹರಿವು ಹಾಗೂ ಬೆಣ್ಣಿಹಳ್ಳದಿಂದ ಪ್ರವಾಹ ಉಂಟಾಗಿತ್ತು. ತಕ್ಷಣ ಗ್ರಾಮಸ್ಥರನ್ನು ಸ್ಥಳಾಂತರಕ್ಕೆ ಕೈಕೊಂಡ ಕ್ರಮ, ಮನೆಗಳ ಕುಸಿತ, ರಸ್ತೆ, ಸೇತುವೆ, ಶಾಲಾ ಸರ್ಕಾರಿ ಕಟ್ಟಡಗಳು ಸೇರಿದಂತೆ ಮೂಲಭೂತ ಸೌಕರ್ಯಗಳ, ಬೆಳೆಹಾನಿ ಕುರಿತಂತೆ ಜಿಲ್ಲೆಯ ನರಗುಂದ, ರೋಣ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕಿನಲ್ಲಿ ಆದ ಹಾನಿ ವಿವರವನ್ನು ಛಾಯಾಚಿತ್ರಗಳ ಮೂಲಕ ಕೇಂದ್ರ ಅಧ್ಯಯನ ತಂಡಕ್ಕೆ ಮನವರಿಕೆ ಮಾಡಿಕೊಡಲಾಯಿತು.

ಜಿ.ಪಂ. ಅಧ್ಯಕ್ಷ ಎಸ್‌.ಪಿ. ಬಳಿಗಾರ, ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ, ಜಿ.ಪಂ. ಸದಸ್ಯರಾದ ರಾಜುಗೌಡ ಕೆಂಚನಗೌಡ್ರ ಪಡಿಯಪ್ಪ ಪೂಜಾರ, ಜನಪ್ರತಿನಿಧಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು... 1. ವನ್ಯಜೀವಿ ತಜ್ಞ ಸ್ಟೀವ್‌ ಇರ್ವಿನ್‌ 1962ರ ಫೆಬ್ರವರಿ...

  • ಸೋಮವಾರಪೇಟೆ: ಕೊಡಗು ಪ್ಯಾಕೇಜ್‌ ಸೇರಿದಂತೆ ಇತರ ಯೋಜನೆಯಡಿ ತಾಲೂಕಿನಲ್ಲಿ ನಿರ್ಮಾಣ ವಾಗುತ್ತಿರುವ ರಸ್ತೆ ಕಾಮಗಾರಿಗಳು ಕಳಪೆಯಿಂದ ಕೂಡಿವೆ ಎಂದು ಆರೋಪಿಸಿದ...

  • ಗೊಗ್ಗಯ್ಯನ ಮೂಗು ಬೆಳೆಯುತ್ತಾ ಹೋಯಿತು. ಅದನ್ನು ಹೊತ್ತುಕೊಂಡು ತಿರುಗಾಡುವುದೇ ಕಷ್ಟವಾಗತೊಡಗಿತು. ಕಡೆಗೊಂದು ದಿನ ಅದಕ್ಕೆ ಪರಿಹಾರವೂ ಸಿಕ್ಕಿತು. ಆ ಹುಡುಗ...

  • ಉಡುಪಿ: ಬಿಸಿಲಿನ ಧಗೆ ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದು, 35 ಡಿಗ್ರಿವರೆಗೆ ತಲುಪಿದೆ. ಮುಂದಿನ ದಿನಗಳಲ್ಲಿ ತಾಪಮಾನ ಇನ್ನೂ ಒಂದೆರಡು ಡಿಗ್ರಿ ಹೆಚ್ಚಳವಾಗುವ...

  • ರಾಮು ಆಟ- ಪಾಠಗಳಲ್ಲಿ ಬಹಳ ಜಾಣ. ಅವನು ತುಂಬಾ ತುಂಟನೂ ಆಗಿದ್ದ. ಶಾಲೆಯಲ್ಲಿ ಯಾವಾಗಲೂ ಏನಾದರೊಂದು ಕೀಟಲೆ ಮಾಡುತ್ತಿರುತ್ತಿದ್ದ. ರಾಮುವಿನ ತುಂಟಾಟ ಮಿತಿಮೀರಿದಾಗೆಲ್ಲಾ...